ವಿಜಯಪುರ: ವಿದ್ಯಾರ್ಥಿನಿಯರು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಭಾಗವಹಿಸುವ ಮೂಲಕ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿ, ಸಾಧನೆಗೈದು ಕಾಲೇಜು ಮತ್ತು ಜಿಲ್ಲೆಗೆ ಕೀರ್ತಿ ತರುವಂತೆ ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಉಪನಿರ್ದೇಶಕ ಡಾ.ಸಿ.ಕೆ.ಹೊಸಮನಿ ಕರೆ ನೀಡಿದರು.
ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜ್‌ನಲ್ಲಿ ಸೋಮವಾರ ಜರುಗಿದ ೨೦೨೪-೨೫ನೇ ಸಾಲಿನ ಕಾಲೇಜ್ ಸಂಸತ್ತು, ಕ್ರೀಡೆ, ಎನ್.ಎಸ್.ಎಸ್., ಭಾರತೀಯ ಸೇವಾ ದಳ, ರೋರ‍್ಸ್ ಮತ್ತು ರೇಂರ‍್ಸ್, ಪ್ರಥಮ ಪಿಯುಸಿ ವಿದ್ಯಾರ್ಥಿನಿಯರಿಗೆ ಸ್ವಾಗತ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ವಿದ್ಯಾರ್ಥಿನಿಯರು ಶ್ರದ್ಧೆ ಹಾಗೂ ಪ್ರಾಮಾಣಿಕತೆಯಿಂದ ವಿಧ್ಯಾಬ್ಯಾಸದೊಂದಿಗೆ ವಿವಿಧ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ ಸಾಧನೆ ಮಾಡಬೇಕು ಎಂದು ಅವರು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ವಿಶ್ರಾಂತ ಸಹ ಶಿಕ್ಷಕರಾದ ತೋಟಯ್ಯ ಶಿರೋಳಮಠ ಹಾಗೂ ರಾಷ್ಟ್ರ ಮಟ್ಟದ ವಿವಿಧ ಪ್ರಶಸ್ತಿಗಳಿಗೆ ಭಾಜನರಾದ ಸಂಗೀತ ಶಿಕ್ಷಕ ಹಿರಿಯ ಕನ್ನಡಭಾಷಾ ಉಪನ್ಯಾಸಕ ಸಿದ್ದು ಸಾವಳಸಂಗ ಅವರಿಗೆ ಸನ್ಮಾನಿಸಲಾಯಿತು. ೨೦೨೩-೨೪ನೇ ಸಾಲಿನಲ್ಲಿ ದ್ವೀತಿಯ ಪಿಯುಸ ವಾರ್ಷಿಕ ಪರೀಕ್ಷೆಯ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗಗಳಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದ ಕುಮಾರಿ ಝಾರಾ ಅತ್ತಾರ, ಕುಮಾರಿ ರಂಜಿತಾ ನಾಗರಳ್ಳಿ ಮತ್ತು ಕುಮಾರಿ ಕೀರ್ತಿ ಪೂಜಾರಿ ವಿದ್ಯಾರ್ಥಿನಿಯರಿಗೆ ನಗದು ಬಹುಮಾನದೊಂದಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಕಾಲೇಜಿನ ಪ್ರಾಚಾರ್ಯ ಸಿ.ಬಿ.ನಾಟೀಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಾವಿತ್ರಿ ಡಿ., ಎಂ.ಬಿ.ರಜಪೂತ, ಡಾ.ಎಂ.ವಿ.ಸುಂಗರೆ, ಸಿ.ಐ.ದ್ಯಾಪುರ, ಕುಮಾರಿ ಪ್ರಿಯಾ ಚೌಡಕೇರ ಸೇರಿದಂತೆ ಕಾಲೇಜಿನ ವಿದ್ಯಾರ್ಥಿನಿಯರು, ಉಪನ್ಯಾಸಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು. ಉಪನ್ಯಾಸಕ ಪಿ.ಎ.ಮೇತ್ರಿ ನಿರೂಪಿಸಿದರು. ಎಸ್.ಸಿ.ತೊಳನೂರ ವಂದಿಸಿದರು.
Subscribe to Updates
Get the latest creative news from FooBar about art, design and business.
ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಂಡು ಸಾಧನೆ ಮಾಡಿ :ಡಿಡಿಪಿಐ
Related Posts
Add A Comment
