ವಿಜಯಪುರ: ಮೀನುಗಾರಿಕೆ ಇಲಾಖೆಯಿಂದ ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ೨೦೨೦-೨೧ ರಿಂದ ೨೦೨೩-೨೪ನೇ ಸಾಲಿನವರೆಗಿನ ಬಾಕಿ ಉಳಿದ ಘಟಕಗಳಿಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಹೊಸ ಮೀನು ಕೃಷಿ ಕೊಳ ನಿರ್ಮಾಣ, ಸಣ್ಣ ಗಾತ್ರದ ಆರ್.ಎ.ಎಸ್. ಘಟಕ, ಮತ್ಸ್ಯವಾಹಿನಿ ಯೋಜನೆಯಡಿ ತ್ರಿಚಕ್ರ ವಾಹನ ಪರವಾನಿ ಆಧಾರದಲ್ಲಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ : ೦೫-೦೮-೨೦೨೪ ಕೊನೆಯ ದಿನಾಂಕವಾಗಿದ್ದು, ಆಸಕ್ತ ಮೀನು ಕೃಷಿಕರು ಸಂಬಂಧಪಟ್ಟ ತಾಲೂಕಾ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಉಪನಿರ್ದೇಶಕರು ವಿಜಯಪುರ ಮೊ: ೯೯೮೬೧೩೨೭೧೭, ಮೀನುಗಾರಿಕೆ ಸಹಾಯಕ ನಿರ್ದೇಶಕರು ವಿಜಯಪುರ ಮೊ: ೯೮೪೫೯೨೭೧೧೦, ಮೀನುಗಾರಿಕೆ ಸಹಾಯಕ ನಿರ್ದೇಶಕರು ಮುದ್ದೇಬಿಹಾಳ ಮೊ: ೯೮೪೫೯೨೭೧೧೦ ಸಂಖ್ಯೆಗೆ ಸಂಪರ್ಕಿಸುವಂತೆ ಮೀನುಗಾರಿಕೆ ಇಲಾಖೆ ಉಪನಿದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
Related Posts
Add A Comment
