Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಫಸಲ ಬಿಮಾ ಯೋಜನೆ ಅವ್ಯವಹಾರ ಖಂಡಿಸಿ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ಫಸಲ ಬಿಮಾ ಯೋಜನೆ ಅವ್ಯವಹಾರ ಖಂಡಿಸಿ ಪ್ರತಿಭಟನೆ

By Updated:No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ತನಿಖಾ ತಂಡ ರಚಿಸಿ, ಮರು ಸಮೀಕ್ಷೆ ಮಾಡಿ ನಷ್ಟಗೊಂಡ ಎಲ್ಲರಿಗೂ ಪರಿಹಾರ ನೀಡುವಂತೆ ರೈತಸಂಘ ಆಗ್ರಹ

ವಿಜಯಪುರ: ಫಸಲ್ ಬಿಮಾ ಯೋಜನೆಯಡಿ ಸಾಕಷ್ಟು ಅವ್ಯವಹಾರ ನಡೆದಿದ್ದು, ಸರಕಾರದ ವತಿಯಿಂದ ತನಿಖಾ ತಂಡ ರಚಿಸಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಮತ್ತೊಮ್ಮೆ ಸಮೀಕ್ಷೆ ಮಾಡಿ ನಷ್ಟಗೊಂಡ ಎಲ್ಲಾ ರೈತರಿಗೂ ಪರಿಹಾರ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಮಂಗಳವಾರ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಬೀಗ ಹಾಕುವುದರ ಮೂಲಕ ಬೃಹತ್ ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ, ಕಂದಾಯ ಇಲಾಖೆಯ ಸಹಾಯಕ ಆಯುಕ್ತರು ಹಾಗೂ ಸಂಖ್ಯಾ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಹಾರ ನೀಡಬೇಕೆಂದು ರೈತರು ಪಟ್ಟು ಹಿಡಿದರು.
ಬೆಳಿಗ್ಗೆಯಿಂದಲೆ ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಕಡೆಗೆ ಜಮಾಯಿಸಿದ ರೈತರು ಮಧ್ಯಾಹ್ನದ ಹೊತ್ತಿಗೆ ನೂರಾರು ಜನ ಜಮಾಯಿಸಿ ಫಸಲ್ ಬಿಮಾ ಯೋಜನೆಯಲ್ಲಿ ಒಂದು ದೊಡ್ಡಮಟ್ಟದ ಅನ್ಯಾಯವಾಗಿದೆ, ರಾಜ್ಯ ಸರಕಾರವೇ ಬರಗಾಲ ಎಂದು ಘೋ಼ಷಣೆ ಮಾಡಿ ೪೩೧ ಕೋಟಿ ಪರಿಹಾರ ನೀಡಿದ್ದರು, ಫಸಲ್ ಭೀಮಾ ಯೋಜನೆಯಡಿ ಕೇವಲ ೧೩೧ ಕೋಟಿ ನೀಡಿದ್ದಾರೆ, ಇನ್ನು ಸಾವಿರಾರು ರೈತರಿಗೆ ಪರಿಹಾರ ಬಂದಿಲ್ಲ ಎಂದು ಅಧಿಕಾರಿಗಳ ವಿರುದ್ಧ ಹರಿಹಾಯ್ದರು.
ರಾಜ್ಯ ಕಾರ್ಯಾಧ್ಯಕ್ಷ ಮಹೇಶಗೌಡ ಸುಬೇದಾರ ಮಾತನಾಡುತ್ತಾ, ಫಸಲ್ ಭೀಮಾ ಯೋಜನೆಯು ಅವೈಜ್ಞಾನಿಕವಾದದ್ದು, ಬೆಳೆ ಸಮೀಕ್ಷೆ ಹಾಗೂ ಬೆಳೆ ಕಟಾವು ಪದ್ದತಿಯಲ್ಲಿ ರೈತರಿಗೆ ಅನ್ಯಾಯ ಮಾಡುವ ಪದ್ದತಿಯಾಗಿ ಇದು ಬದಲಾವಣೆಯಾಗಬೇಕು, ಪಂಚಾಯಿತಿ ವ್ಯಾಪ್ತಿಯಲ್ಲಿ ಯರ‍್ಯಾರು ನಷ್ಟಗೊಂಡಿರುತ್ತಾರೆ ಅವರೆಲ್ಲಗೂ ನ್ಯಾಯ ಸಿಗಬೇಕು, ಇಲ್ಲವಾದಲ್ಲಿ ಈ ಫಸಲ್ ಭೀಮಾ ಯೋಜನೆ ನಮ್ಮ ರಾಜ್ಯಕ್ಕೆ ಬೇಕಿಲ್ಲ, ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಮೆ ಕಂಪನಿಯ ಕಚೇರಿ ಆರಂಭಿಸಬೇಕು, ಇಲ್ಲ ಒಳ್ಳೆಯ ವಿಮೆ ಕಂಪನಿಗೆ ಅನುಮತಿ ನೀಡಿ ರೈತರ ಪರವಾಗಿ ನಿಲ್ಲಬೇಕು ಎಂದರು.
ಜಿಲ್ಲಾಧ್ಯಕ್ಷ ಸಂಗಮೆಶ ಸಗರ ಮಾತನಾಡುತ್ತಾ, ಫಸಲ್ ಭೀಮೆ ಜಿಲ್ಲೆಯಲ್ಲಿ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೆಳೆ ಕಟಾವೂ ಹಾಗೂ ಬೆಳೆ ಸಮೀಕ್ಷೆ ಮಾಡಿರುವ ವಿವಿಧ ಇಲಾಖೆಯ ಅಧಿಕಾರಿಗಳ ಮಾಹಿತಿ ಹಾಗೂ ರ‍್ಯಾಂಡಮ್ ಆಗಿ ಇಲಾಖೆಯಿಂದ ಆಗಮಿಸಿದ ಜಮೀನುಗಳ ಸರ್ವೇ ನಂಬರಗಳ ಮಾಹಿತಿ ಹಾಗೂ ಅದು ಯಾವಾಗ ಬಂದಿದೆ ಎಂಬುದರ ಮಾಹಿತಿ ನೀಡಬೇಕು ಹಾಗೂ ಸರಕಾರದಿಂದಲೇ ಒಂದು ತನಿಖಾ ತಂಡ ನೇಮಿಸಿ ಮರು ಸಮೀಕ್ಷೆ ಮಾಡಬೇಕು ಎಂದು ಆಗ್ರಹಿಸಿದರು.
ಈ ವೇಳೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಶಿ ಆನಂದ ಅವರು ಮನವಿ ಸ್ವೀಕರಿಸಿ ಮಾತನಾಡುತ್ತಾ, ನೀವು ಹೇಳುತ್ತಿರುವ ವಿಷಯಕ್ಕೆ ಸಂಭಂದಿಸಿದಂತೆ ಈಗಾಗಲೇ ಜಿಲ್ಲಾಧಿಕಾರಿಗಳ ಜೊತೆ ಚರ್ಚೆ ಮಾಡಿ ವಿಮೆಯಲ್ಲಿ ಆಗುತ್ತಿರುವ ಅವೈಜ್ಞಾನಿಕ ಹಾಗೂ ಪಾರದರ್ಶಕತೆ ಕೊರತೆ ಇದೆ ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಪತ್ರ ಬರೆದು ಸರಳಿಕರಣಗೊಳಿಸಲು ನಿರ್ಣಯಿಸಲಾಗಿದೆ, ಇನ್ನೊಮ್ಮೆ ಎಲ್ಲಾ ಅಧಿಕಾರಿಗಳು ಸೇರಿಕೊಂಡು ಇದಕ್ಕೆ ಒಂದು ಪರಿಹಾರ ಕಂಡುಕೊಳ್ಳಲು ಸಮಯಾವಕಾಶ ಬೇಕು, ನಾವೆಲ್ಲರೂ ರೈತರ ಪರವಾಗಿಯೇ ಕೆಲಸ ಮಾಡುತ್ತೇವೆ ಎಂದರು.
ಇದೇ ರೀತಿ ಜಂಟಿ ಕೃಷಿ ನಿರ್ದೇಶಕ ರಾಜಶೇಖರ ವಿಲಿಯಮ್ಸ್ ಹಾಗೂ ಕಂದಾಯ ಇಲಾಖೆಯ ಸಹಾಯಕ ಆಯುಕ್ತ ಬಸವರಾಜ ಕಲಶೆಟ್ಟಿ ಮಾತನಾಡಿ, ಇದು ವಿಮೆ ಕಂಪನಿಯ ಪಾಲಿಸಿಯ ಮೇರೆಗೆ ಪರಿಹಾರ ಬಂದಿರುತ್ತದೆ, ಕಳೆದ ೭ ವರ್ಷಗಳ ಸರಾಸರಿಯ ಮೇರೆಗೆ ಪರಿಹಾರದ ಪ್ರಮಾಣ ನಿಧ್ರಿಸಲಾಗುತ್ತದೆ, ಬರಗಾಲದಿಂದ ರೈತರಿಗಾಗಿರುವ ನಷ್ಟದಿಂದ ಹೆಚ್ಚಿನ ಪರಿಹಾರದ ನಿರೀಕ್ಷೆಯಲ್ಲಿ ರೈತರಿದ್ದಾರೆ ಎಂದರು.
ಈ ವೇಳೆ ರೈತ ಮುಖಂಡರಾದ ದೇವಿಂದ್ರಪ್ಪಗೌಡ ಮಾಲಗತ್ತಿ, ಶಿವರಾಜ ಕಲಕೇರಿ, ದೇವರ ಹಿಪ್ಪರಗಿ ಅಧ್ಯಕ್ಷರಾದ ಈರಪ್ಪ ಕುಳೆಕುಮಟಗಿ, ಸುರೇಶ ಗರಸಂಗಿ, ಚಂದ್ರಕಾಂತ ಪ್ಯಾಠಿ, ಅನಿಮಿಶ ಜಮಖಂಡಿ, ಸಂಪತ್ತ ಜಮಾದಾರ, ಅಶೋಕ ಅಗಸಿಮನಿ, ಮಲ್ಲಿಕಾರ್ಜುನ ಬಿರಾದಾರ, ತಿಕೋಟಾ ಅಧ್ಯಕ್ಷ ಸಾತಲಿಂಗಯ್ಯ ಸಾಲಿಮಠ, ಸೇರಿದಂತೆ ಅನೇಕರು ಮಾತನಾಡಿದರು.
ಈ ಸಂದರ್ಭದಲ್ಲಿ ಶಿವಾನಂದಯ್ಯ ಹಿರೇಮಠ, ವಿಜಯಪುರ ಜಿಲ್ಲಾ ಸಂಚಾಲಕ ರಾಮನಗೌಡ ಪಾಟೀಲ, ಮಹಾಂತೇಶ ಮಮದಾಪುರ, ವಿಜಯಪುರ ತಾಲೂಕ ಅಧ್ಯಕ್ಷ ಮಹಾದೇವಪ್ಪ ತೇಲಿ, ವಿಜಯಪುರ ತಾಲೂಕಾ ಉಪಾಧ್ಯಕ್ಷ ಪ್ರಕಾಶ ತೇಲಿ, ತಾಳಿಕೋಟಿ ಅಧ್ಯಕ್ಷ ಶ್ರೀಶೈಲ ವಾಲಿಕಾರ, ನಿಡಗುಂದಿ ಅಧ್ಯಕ್ಷ ಕೆ.ಎಂ ಗುಡ್ನಾಳ ತಾಳಿಕೋಟಿ ಮಹಿಳಾ ಅಧ್ಯಕ್ಷೆ ಸುಜಾತಾ ಅವಟಿ, ಬಬಲೇಶ್ವರ ಅಧ್ಯಕ್ಷ ಮಕಬುಲ ಕೀಜಿ, ಶಾನೂರ ನಂದರಗಿ, ಅಲ್ಲಾಭಕ್ಷ ಲಷ್ಕರಿ, ಇಬ್ರಾಹಿಂ ಕಮತಗಿ, ಸಂಗಪ್ಪ ಟಕ್ಕೆ, ಮಹಿಬೂಬ ಬಾಷಾ ಮನಗೂಳಿ, ನಜೀರ ನಂದರಗಿ, ಸತ್ಯಪ್ಪ ಕುಲ್ಲೋಳ್ಳಿ, ವಿರೇಶ ಗೊಬ್ಬುರ, ಎಸ್.ಡಿ. ಹೆಬ್ಬಾಳ, ರಾಜುಗೌಡ ಬಿರಾದಾರ, ಸಂಗಮೆಶ ಹುಣಸಗಿ, ಶಾಂತಯ್ಯ ಗಣಾಚಾರಿ, ಅಶೋಕ ತಳವಾರ, ಸೇರಿದಂತೆ ಅನೇಕರು ಇದ್ದರು.


ಫಸಲ್ ವಿಮೆ ಹಣ ಬಾರದೇ ಚಿಂತೆಗಿಡಾದ ರೈತರು ಅಧಿಕಾರಿಗಳಿಗೆ ಕೇಳಿದರೆ ಮುಂಗಡ ವಿಮೆ ಹಣ ಶೇ ೨೫% ನೀಡಿದ್ದೇವೆ, ಉಳಿದ ಹಣ ಬರುವುದಿಲ್ಲ ಎಂದು ಹೇಳುತ್ತಿದ್ದಾರೆ ಅಧಿಕಾರಿಗಳಿಗೆ ಕೇಳಿದರೆ ಒಬ್ಬರ ಮೇಲೆ ಒಬ್ಬರು ಹಾಕುತ್ತಾ ರೈತರ ಜೀವನದ ಜೊತೆ ಚಲ್ಲಾಟ ಆಡುತ್ತಿದ್ದಾರೆ, ಈ ವರ್ಷ ರಾಜ್ಯ ಸರಕಾರವೇ ಜಿಲ್ಲೆಯ ಎಲ್ಲಾ ೧೩ ತಾಲೂಕುಗಳು ಸಂಪೂರ್ಣ ಬರ ಎಂದು ಘೋಷಣೆ ಮಾಡಿರುತ್ತದೆ, ಆದರೆ ಫಸಲ ಭೀಮಾ ಯೋಜನೆಯಲ್ಲಿ ಅಧಿಕಾರಿಗಳು ವಿಮೆ ಕಂಪನಿಯವರ ಜೊತೆ ಸೇರಿ ರೈತರಿಗೆ ದೊಡ್ಡ ಮಟ್ಟದ ಮೊಸ ಮಾಡಿದ್ದಾರೆ, ಈ ಕುರಿತು ಸಂಪೂರ್ಣ ತನಿಖೆ ಮಾಡಬೇಕು, ನಷ್ಟಗೊಂಡ ಎಲ್ಲರಿಗೂ ಪರಿಹಾರ ನೀಡಬೇಕು.”

– ಸಂಗಮೇಶ ಸಗರ
ವಿಜಯಪುರ ಜಿಲ್ಲಾಧ್ಯಕ್ಷ, ರೈತ ಸಂಘ ಹಾಗೂ ಹಸಿರು ಸೇನೆ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.