ವಿಜಯಪುರ: ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ.ಎಂ.ಪಾಟೀಲ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಸಂಶೋಧನ ಕೇಂದ್ರದ ನೂತನ ಟ್ರಾಮಾ ಸೆಂಟರ್ ಮತ್ತು ಎಮರ್ಜೆನ್ಸಿ ಮೆಡಿಸಿನ್ ಕಟ್ಟಡದ ಉದ್ಘಾಟನೆ ಸಮಾರಂಭ ಜುಲೈ 27 ರಂದು ಶನಿವಾರ ಬೆಳಿಗ್ಗೆ 9.30 ಗಂಟೆಗೆ ನಡೆಯಲಿದೆ.
ಯಡಿಯೂರು-ಡಂಬಳ-ಗದಗ ತೋಂಟದಾರ್ಯ ಸಂಸ್ಥಾನ ಮಠದ ಶ್ರೀ ತೋಂಟದ ಸಿದ್ಧರಾಮ ಮಹಾಸ್ವಾಮಿಜಿ ಅವರು ಕಾರ್ಯಕ್ರಮದ ಸಾನಿಧ್ಯ ವಹಿಸಲಿದ್ದಾರೆ. ಬೆಳಗಾವಿ ಕೆಎಲ್‌ಇ ಸಂಸ್ಥೆಯ ಚೇರ್‌ಮನ್ ಮತ್ತು ಕಾಹೆರ್ ಕುಲಾಧಿಪತಿ ಪ್ರಭಾಕರ ಬಿ. ಕೋರೆ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಬಿ.ಎಲ್.ಡಿ.ಇ ಡೀಮ್ಡ್ ವಿವಿ ಕುಲಾಧಿಪತಿ ಮತ್ತು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ.
ವಿವಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಕುಲಪತಿ ಡಾ. ಆರ್. ಎಸ್. ಮುಧೋಳ, ಸಮಕುಲಪತಿ ಡಾ. ಅರುಣ ಚಂ. ಇನಾಮದಾರ, ಕಾಲೇಜಿನ ಪ್ರಾಚಾರ್ಯ ಡಾ. ಅರವಿಂದ ವಿ. ಪಾಟೀಲ, ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಆರ್. ಎಂ. ಹೊನ್ನುಟಗಿ ಉಪಸ್ಥಿತರಿರಲಿದ್ದಾರೆ ಎಂದು ವಿವಿ ರಜಿಸ್ಟ್ರಾರ್ ಡಾ. ಆರ್. ವಿ. ಕುಲಕರ್ಣಿ ಅವರ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
ಜು.27ರಂದು ಶ್ರೀ ಬಿ.ಎಂ.ಪಾಟೀಲ ವೈದ್ಯಕೀಯ ಕಾಲೇಜಿನ ನೂತನ ಟ್ರಾಮಾ ಸೆಂಟರ್ & ಎಮರ್ಜೆನ್ಸಿ ಮೆಡಿಸಿನ್ ಕಟ್ಟಡದ ಉದ್ಘಾಟನೆ
Related Posts
Add A Comment
