Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕನ್ನಡದ ತೇರು ಎಳೆವ ಅವಕಾಶ ಸಿಕ್ಕಿದ್ದು ನನ್ನ ಸೌಭಾಗ್ಯ :ಕಾಮರಾಜ
(ರಾಜ್ಯ ) ಜಿಲ್ಲೆ

ಕನ್ನಡದ ತೇರು ಎಳೆವ ಅವಕಾಶ ಸಿಕ್ಕಿದ್ದು ನನ್ನ ಸೌಭಾಗ್ಯ :ಕಾಮರಾಜ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ: ತಾಲೂಕಿನಲ್ಲಿ ಸಾಹಿತ್ಯ ಕ್ಷೇತ್ರ ಬಡವಾಗಬಾರದು. ಸಾಹಿತ್ಯ ಕ್ಷೇತ್ರಕ್ಕೆ ನೆಲೆ ನೀಡುವ ಶತಪ್ರಯತ್ನವನ್ನು ತಾಲೂಕಿನ ಎಲ್ಲ ಹಿರಿಯ ಸಾಹಿತಿಗಳ ಮತ್ತು ಕನ್ನಡಾಭಿಮಾನಿಗಳ ಆಶೀರ್ವಾದದಿಂದ ಮಾಡುವೆ ಎಂದು ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ ಹೇಳಿದರು.
ಪಟ್ಟಣದ ಮಾರುತಿ ನಗರದಲ್ಲಿರುವ ಕಾಶಿ ವಿಶ್ವನಾಥ ಮಠದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಆಯೋಜಿಸಲಾಗಿದ್ದ ಶರಣಯೋಗಿ ಹಡಪದ ಅಪ್ಪಣ್ಣನವರ ಮತ್ತು ವಚನ ಪಿತಾಮಹ ಫ.ಗು.ಹಳಕಟ್ಟಿ ಅವರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕನ್ನಡದ ತೇರನ್ನು ಎಳೆಯುವ ಅವಕಾಶ ಸಿಕ್ಕಿರೋದು ನನ್ನ ಸೌಭಾಗ್ಯ. ಈ ಹುದ್ದೆಗೆ ನಾನು ಯಾವತ್ತೂ ಧಕ್ಕೆ ಬಾರದ ರೀತಿಯಲ್ಲಿ ಸಾಗುವೆ. ಇನ್ನು ಮೇಲಿಂದ ಮೇಲೆ ಕನ್ನಡದ ಕಾರ್ಯಕ್ರಮಗಳು ಜರುಗಲಿವೆ. ಅದಕ್ಕೆ ಎಲ್ಲ ಸಾಹಿತಿಗಳ ಸಹಾಯ ಸಹಕಾರ ಕೋರುವೆ ಎಂದರು.
ಈ ವೇಳೆ ಹಿರಿಯ ಸಾಹಿತಿ ಬಿ.ಎಂ.ಹಿರೇಮಠರು ಮಾತನಾಡಿ, ಕ್ರಿಯಾಶೀಲ ಅಧ್ಯಕ್ಷರು ಭುವನೇಶ್ವರಿ ತಾಯಿಯ ತೇರನ್ನು ಎಳೆಯಲು ಎಲ್ಲ ಸಾಹಿತಿಗಳು, ಕನ್ನಡಾಭಿಮಾನಿಗಳು ಅದ್ಭುತ ಸಹಾಯ ಸಹಕಾರ ನೀಡೋಣ ಎಂದರು.
ಮಹಾದೇಶ ಶಾಸ್ತ್ರಿಗಳು ಆಶೀರ್ವಚನ ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಎಂ.ಬಿ.ನಾವದಗಿ ಮಾತನಾಡಿದರು.
ಸಾಹಿತಿ ಪರಶುರಾಮ ಚೌಡಕೇರ ಮತ್ತು ಗ್ರಾಮ ಆಡಳಿತ ಅಧಿಕಾರಿ ಸಚೀನ ಗೌಡರ ವಿಶೇಶ ಉಪನ್ಯಾಸ ನೀಡಿದರು. ಶೋಭಾತಾಯಿ ಶರಣಮ್ಮನವರು ಸಾನಿಧ್ಯವಹಿಸಿದ್ದರು. ಪು.ಸದಸ್ಯರುಗಳಾದ ಮಹೆಬೂಬ ಗೊಳಸಂಗಿ, ಭಾರತಿ ಪಾಟೀಲ, ಸದಾಶಿವ ಮಾಗಿ, ಹಡಪದ ಅಪ್ಪಣ್ಣ ಸಮಾಜದ ಅಧ್ಯಕ್ಷ ಶಂಕ್ರಪ್ಪಣ್ಣ ಹಡಪದ ಮತ್ತೀತರರು ವೇದಿಕೆಯಲ್ಲಿದ್ದರು.
ಹಿರಿಯ ಸಾಹಿತಿಗಳಾದ ಅಶೋಕ ಮಣಿ, ರುದ್ರೇಶ ಕಿತ್ತೂರ, ಶಿವಪುತ್ರಪ್ಪ ಅಜಮನಿ, ಜೆ.ಡಿ.ಮುಲ್ಲಾ, ಸದಾಶಿವ ಮಠ, ಬಸಲಿಂಗಪ್ಪಣ್ಣ ರಕ್ಕಸಗಿ, ಹುಸೇನ ಮುಲ್ಲಾ, ಸಂಗಣ್ಣ ಮೇಲಿನಮನಿ, ರವಿ ಅಮರಣ್ಣವರ ಸೇರಿದಂತೆ ಮತ್ತೀತರರು ಇದ್ದರು. ಸಂಗಮೆಶ ಶಿವಣಗಿ ತಂಡ ನಡಗೀತೆ ಹಾಡಿದರು. ಸಾಹಿತಿ ಸಿದ್ದನಗೌಡ ಬಿಜ್ಜೂರ ಕಾರ್ಯಕ್ರಮ ನಿರ್ವಹಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.