ಬಸವನಬಾಗೇವಾಡಿ: ವಿದ್ಯಾರ್ಥಿಗಳು ಪಾಠ ಬೋಧನೆಯೊಂದಿಗೆ ಪಠ್ಯೇತರ ಚಟುವಟಿಕೆ ಹಾಗೂ ಕ್ರೀಡಾ ಚಟುವಟಿಕೆಯನ್ನು ಅಳವಡಿಸಿಕೊಳ್ಳಬೇಕೆಂದು ಜನತಾ ಎಜ್ಯುಕೇಶನ್ ಸೊಸೈಟಿಯ ನಿರ್ದೇಶಕ ರವಿಗೌಡ ಪಾಟೀಲ ಹೇಳಿದರು.
ತಾಲೂಕಿನ ಮನಗೂಳಿ ಪಟ್ಟಣದ ಬಿ.ಎಸ್. ಪಾಟೀಲ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ, ಪಠ್ಯೇತರ ಹಾಗೂ ಕ್ರೀಡಾ ಚಟುವಟಿಕೆ ಉದ್ಘಾಟನೆ ಮತ್ತು ರಾಷ್ಟೀಯ ಭಾವೈಕ್ಯತೆ, ರಾಷ್ಟ್ರಧ್ವಜ, ರಾಷ್ಟ್ರಗೀತೆ ಕುರಿತಾದ ಕಾಯಾ೯ಗಾರವನ್ನು ಸಸಿಗೆ ನೀರುಣಿಸುವ ಉದ್ಘಾಟಿಸಿ ಮಾತನಾಡಿದ ಅವರು,
ಪಠ್ಯೇತರ ಚಟುವಟಿಕೆ ಮನಸ್ಸಿಗೆ ಮುದ ನೀಡಿದರೆ, ಕ್ರೀಡಾ ಚಟುವಟಿಕೆಯಲ್ಲಿ ಭಾಗವಹಿಸುವದರಿಂದ ದೇಹದ ಸದೃಢತೆಯನ್ನು, ಆರೋಗ್ಯವನ್ನು ಕಾಪಾಡುತ್ತದೆ. ಸದೃಡವಾದ ದೇಹದಲ್ಲಿ ಸದೃಡವಾದ ಮನಸ್ಸು ಇರುತ್ತದೆ. ಹಾಗೇ ಇದರ ಜೊತೆಗೆ ವಿದ್ಯಾರ್ಥಿಗಳು ದೇಶಪ್ರೇಮ, ಶಿಸ್ತು, ಸಮಯಪ್ರಜ್ಞೆ, ಸೇವಾಮನೋಭವನೆಯನ್ನು ಬೆಳೆಸಿಕೊಳ್ಳಬೇಕೆಂದು ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಭಾರತ ಸೇವಾದಳದ ವಲಯ ಸಂಘಟಕ ನಾಗೇಶ ಡೋಣೂರ ಮಾತನಾಡಿದ ಅವರು, ಧ್ವಜಾರೋಹಣ, ಅವರೋಹಣ, ಧ್ವಜ ನೀತಿಸಂಹಿತೆ, ಧ್ವಜ ನಿಯಮಗಳ ಕುರಿತು ಹಾಗೂ ರಾಷ್ಟ್ರಗೀತೆ, ನಾಡಗೀತೆಯನ್ನು,ರಾಗ,ಲಯ,ತಾಳ, ಸಮಯ, ಹಾಗೂ ಸಂಪೂರ್ಣ ಸಂಪೂರ್ಣ ಹಾಡಿನ ಶಬ್ದಗಳ ಅರ್ಥವನ್ನು ವಿವರಿಸುವರೊಂದಿಗೆ ಸುಶ್ರಾವ್ಯವಾಗಿ ಹಾಡುವುದನ್ನು (ಶಾಲಾ ಬ್ಯಾಂಡನೊಂದಿಗೆ) ಅಭ್ಯಾಸ ಮಾಡಿಸಿದರು. ಕಾರ್ಯಕ್ರಮದಲ್ಲಿ ಜನತಾ ಎಜ್ಯುಕೇಶನ್ ಸೊಸೈಟಿಯ ಆಡಳಿತಾಧಿಕಾರಿ ರಾಜುಗೌಡ ಪಾಟೀಲ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಪಿ.ಟಿ. ರಾಠೋಡ ವಹಿಸಿದ್ದರು. ಉಪನ್ಯಾಸಕ ಪಿ.ಎಸ್. ಓತಗೇರಿ, ದೈಹಿಕ ಶಿಕ್ಷಣ ಶಿಕ್ಷಕ ಬಿ.ಎಮ್. ಪಾಟೀಲ, ಕಾಲೇಜಿನ ಎಲ್ಲಾ ಉಪನ್ಯಾಸಕ ವರ್ಗ ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಯಲ್ಲೂ ಪಾಲ್ಗೊಳ್ಳಿ :ರವಿಗೌಡ
Related Posts
Add A Comment

