ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಸಮಾಜ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಡಾ.ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಪ್ರಯುಕ್ತ ವ್ಯಸನ ಮುಕ್ತ ದಿನಾಚರಣೆಯನ್ನು ಆ. ೧ರಂದು ನಗರದ ಶ್ರೀ ಕಂದಗಲ್ ಹನಮಂತರಾಯ ರಂಗಮಂದಿರದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.
ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ, ಅಂದು ಬೆಳಗ್ಗೆ ೯ ಗಂಟೆಗೆ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಜನ ಜಾಗೃತಿ ಜಾಥಾಕ್ಕೆ ಚಾಲನೆಗೊಳ್ಳಲಿದೆ. ಜಾಥಾವು ನಗರದ ಗಾಂಧಿ ವೃತ್ತ ಮಾರ್ಗವಾಗಿ, ಬಸವೇಶ್ವರ ವೃತ್ತ, ಡಾ.ಬಿ.ಆರ್. ಅಂಬೇಡ್ಕರ ವೃತ್ತ, ಕನಕದಾಸ ವೃತ್ತದ ಮೂಲಕ ಕಂದಗಲ್ ಹನುಮಂತರಾಯ ರಂಗ ಮಂದಿರಕ್ಕೆ ತಲುಪಲಿದೆ. ರಂಗ ಮಂದಿರದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಮಾದಕ ವಸ್ತು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಶಾಲಾ, ಕಾಲೇಜು ವಿದ್ಯಾರ್ಥಿಗಳು, ಯುವಜನರಿಗೆ ಹಾಗೂ ಸಾರ್ವಜನಿಕರಿಗೆ ಈ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಎಲಾಖೆಗಳು ತಮಗೆ ವಹಿಸಿದ ಜವಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಅರ್ಥಪೂರ್ಣ ಕಾರ್ಯಕ್ರಮ ಆಯೋಜಿಸಿ ಯಶಸ್ವಿಗೊಳಿಸಬೇಕು ಎಂದು ಸೂಚಿಸಿದರು.
ಸರ್ಕಾರದ ಆದೇಶದಂತೆ ಜಿಲ್ಲೆಯ ಎಲ್ಲ ತಾಲೂಕಾ ಕೇಂದ್ರಗಳಲ್ಲಿ ಆ.೧ರಂದು ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯನ್ನು ವ್ಯಸನ ಮುಕ್ತ ದಿನಾಚರಣೆಯನ್ನಾಗಿ ಆಚರಿಸಿ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಜಾಗೃತಿ ಹಾಗೂ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಅವರು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳ್ಳಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ವಿನಯಕುಮಾರ ಪಾಟೀಲ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪುಂಡಲೀಕ್ ಮಾನವರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಆಶಾಪೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
ಆ.೧ರಂದು ವ್ಯಸನ ಮುಕ್ತ ದಿನಾಚರಣೆ ಅರ್ಥಪೂರ್ಣ ಆಚರಣೆಗೆ ಡಿಸಿ ಟಿ.ಭೂಬಾಲನ್ ಸೂಚನೆ
Related Posts
Add A Comment

