ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆಯಡಿ ಆನ್‌ಲೈನ್ ಅರ್ಜಿ ಆಹ್ವಾನ
ವಿಜಯಪುರ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದಿಂದ ವಿದೇಶದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆಯಡಿಯಲ್ಲಿ ವಿದ್ಯಾಭ್ಯಾಸ ಸಾಲಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದೇಶ ವಿಶ್ವವಿದ್ಯಾಲಯದಲ್ಲಿ ಪದವಿ-ಸ್ನಾತಕೋತ್ತರ ಪದವಿ ಮಾಡಬಯಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಈ ಯೋಜನೆಯಡಿ ಸಾಲ ಪಡೆಯಲು ಬಯಸುವ ವಿದ್ಯಾರ್ಥಿಗಳು ನಿಗದಮ ವೆಬ್‌ಸೈಟ್ : https://kmdconlin.karnataka.gov.in ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ದಿನಾಂಕ : ೩೧-೦೮-೨೦೨೪ ಕೊನೆಯ ದಿನಾಂಕವಾಗಿದ್ದು, ಅರ್ಜಿ ಸಲ್ಲಿಸಿದ ಅರ್ಜಿಯ ಪ್ರಿಂಟ್‌ಔಟ್‌ನ್ನು ತೆಗೆದುಕೊಂಡು ಇತರೆ ಅವಶ್ಯಕ ದಾಖಲೆಗಳೊಂದಿಗೆ ನಿಗಮದ ಜಿಲ್ಲಾ ಕಚೇರಿ ಸಲ್ಲಿಸಬೇಕು.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ, ಮೌಲಾನಾ ಆಝಾದ ಭವನ, ಜಿಲ್ಲಾ ಪಂಚಾಯತ್ ರಸ್ತೆ, ಕನಕದಾಸ ಬಡಾವಣೆ, ವಿಜಯಪುರ ದೂ: ೦೮೩೫೨-೨೭೮೩೪೪ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಜಿಲ್ಲಾ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
