Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾಮಗಾರಿ ಅನುಷ್ಟಾನಗೊಳಿಸಲು ಜಿಪಂ ಸಿ.ಇ.ಓ ರಿಷಿ ಆನಂದ ಸೂಚನೆ
(ರಾಜ್ಯ ) ಜಿಲ್ಲೆ

ಕಾಮಗಾರಿ ಅನುಷ್ಟಾನಗೊಳಿಸಲು ಜಿಪಂ ಸಿ.ಇ.ಓ ರಿಷಿ ಆನಂದ ಸೂಚನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸರ್ಕಾರಿ ಶಾಲೆ ಆಟದ ಮೈದಾನ ಅಭಿವೃದ್ಧಿ-ಮಳೆ ನೀರು ಕೊಯ್ಲು ಘಟಕ- ಪೌಷ್ಟಿಕ ಕೈತೋಟ

ವಿಜಯಪುರ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಬುಧವಾರ ಕೊಲ್ಹಾರ ತಾಲೂಕಿನ ತೆಲಗಿ, ರೋಣಿಹಾಳ ಹಾಗೂ ಮುಳವಾಡ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ವಿವಿಧ ಯೋಜನೆಗಳ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ತೆಲಗಿಗೆ ಭೇಟಿ ನೀಡಿದ ಅವರು, ಕೂಸಿನ ಮನೆ ಕೇಂದ್ರಕ್ಕೆ ಮಕ್ಕಳ ನೋಂದಣಿ, ಮಕ್ಕಳ ಹಾಜರಾತಿ, ಪೌಷ್ಟಿಕ ಆಹಾರ, ಆಟದ ಸಾಮಗ್ರಿಗಳನ್ನು ವೀಕ್ಷಿಸಿ, ಮಕ್ಕಳ ನೋಂದಣಿ ಸಂಖ್ಯೆ ಹೆಚ್ಚಿಸಲು ಜನರಲ್ಲಿ ತಿಳುವಳಿಕೆ ಮೂಡಿಸಿ, ಮತ್ತು ಕೂಸಿನ ಮನೆ ಕೇಂದ್ರದ ಮಕ್ಕಳ ಆರೈಕೆದಾರರು ಮಕ್ಕಳನ್ನು ಕಾಳಜಿವಹಿಸಬೇಕು. ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸಬೇಕು. ಸ್ವಚ್ಛತೆ ಕಾಪಾಡಿಕೊಂಡು ಜವಾಬ್ದಾರಿಯಿಂದ ನಿರ್ವಹಣೆ ಮಾಡಬೇಕು ಎಂದು ಗ್ರಾಪಂ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮತ್ತು ಮಕ್ಕಳ ಆರೈಕೆದಾರರಿಗೆ ಸೂಚಿಸಿದರು.
ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ನಿರ್ಮಾಣವಾದ ಫಲಾನುಭವಿ ಮನೆಗೆ ಭೇಟಿ ನೀಡಿ ಫಲಾನುಭವಿಯೊಂದಿಗೆ ಚರ್ಚಿಸಿದರು.
ತೆಲಗಿ ಗ್ರಾಮದಲ್ಲಿ ನಿರ್ಮಾಣಗೊಂಡ ಸರ್ಕಾರಿ ಗ್ರಂಥಾಲಯಕ್ಕೆ ಭೇಟಿ ನೀಡಿ ಅಲ್ಲಿ ಕಲ್ಪಿಸಿರುವ ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲಿಸಿ, ಸ್ವಾತಂತ್ರ್ಯ ದಿನಾಚರಣೆಯಂದು ಉದ್ಘಾಟಿಸಿ ಸಾರ್ವಜನಿಕ ಮುಕ್ತಗೊಳಿಸುವಂತೆಯೂ, ಶುದ್ಧ ಕುಡಿಯುವ ನೀರು, ಗಾಳಿ, ಬೆಳಕು, ವಿದ್ಯುತ್ ವ್ಯವಸ್ಥೆ, ವಾಚಕರಿಗೆ ಪುಸ್ತಕಗಳು, ಸ್ಪರ್ಧಾತ್ಮಕ, ಸ್ಪೋಕನ್ ಇಂಗ್ಲೀಷ ಪುಸ್ತಕ, ಸ್ಮಾರ್ಟ್ ಟಿ.ವ್ಹಿ, ಇ-ಮೊಬೈಲ್ ವ್ಯವಸ್ಥೆ ಕಲ್ಪಿಸಲು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಯವರಿಗೆ ಸೂಚನೆ ನೀಡಿದರು.
ತೆಲಗಿ ಗ್ರಾಮದ ೪ನೇ ವಾರ್ಡ್ನಲ್ಲಿರುವ ಅಂಗನವಾಡಿ ಕೇಂದ್ರ ಸಂಖ್ಯೆ ೫ಕ್ಕೆ ಭೇಟಿ ನೀಡಿ, ಈ ಕೇಂದ್ರದಲ್ಲಿನ ಮಕ್ಕಳಿಗೆ ಶಾಲಾ ಪೂರ್ವ ಶಿಕ್ಷಣ ನೀಡಬೇಕು. ಸ್ವಚ್ಛತೆ, ಮಕ್ಕಳಿಗೆ ಶಿಸ್ತು ಪಾಲನೆ ಹಾಗೂ ಕಲಿಕೆಗೆ ಆದ್ಯತೆ ನೀಡಬೇಕು. ಪ್ರತಿ ತಿಂಗಳು ಕಡ್ಡಾಯವಾಗಿ ಮಕ್ಕಳು, ಬಾಣಂತಿಯರಿಗೆ ಪೂರಕ ಪೌಷ್ಟಿಕ ಆಹಾರ ಸಮರ್ಪಕ ವಿತರಣೆ ಮಾಡಬೇಕು. ತಪ್ಪದೇ ಮಕ್ಕಳ ಆರೋಗ್ಯ ತಪಾಸಣೆ ಮಾಡಿಸಬೇಕು ಎಂದು ಮೇಲ್ವಿಚಾರಕರಿಗೆ ಹಾಗೂ ಅಂಗನವಾಡಿ ಕಾರ್ಯಕರ್ತರು ಸೂಚನೆ ನೀಡಿದರು.
ರೋಣಿಹಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪಕಡ್ಡಿ ಗ್ರಾಮದ ಆರ್‌ಎಂಎಸ್‌ಎ ಪ್ರೌಢ ಶಾಲೆಗೆ ಭೇಟಿ ನೀಡಿ ಶುದ್ಧ ಕುಡಿಯುವ ನೀರು ಪೂರೈಕೆ ಹಾಗೂ ಸ್ವಚ್ಛತೆಗೆ ಆದ್ಯತೆ ನೀಡಿ, ಅತ್ಯಂತ ಕಾಳಜಿಯಿಂದ ಕಾರ್ಯ ನಿರ್ವಹಿಸುವಂತೆ ಶಾಲಾ ಮುಖ್ಯ ಶಿಕ್ಷಕರಿಗೆ ಸೂಚಿಸಿದರು. ಶಾಲೆಯಲ್ಲಿನ ಮೂರು ವರ್ಗ ಕೊಠಡಿಗಳಲ್ಲಿ ತಂತ್ರಜ್ಞಾನ ಆಧಾರಿತ ಸ್ಮಾರ್ಟ್ ಕ್ಲಾಸ್ ಬೋರ್ಡಗಳನ್ನು ವೀಕ್ಷಣೆ ಮಾಡಿ ಶಿಕ್ಷಕರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ನಂತರ ತರಗತಿಗಳಿಗೆ ತೆರಳಿ ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸಿ. ಸಮಸ್ಯೆ ಆಲಿಸಿ ಕೆಲ ಹೊತ್ತು ಪಾಠ ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದರು. ೧೦ನೇ ತರಗತಿಯ ಉತ್ತಮ ರೀತಿಯಲ್ಲಿ ಅಭ್ಯಾಸ ಮಾಡಬೇಕು, ವಿದ್ಯಾರ್ಥಿ ಜೀವನದಲ್ಲಿ ಓದು ಅತ್ಯವಶ್ಯಕ, ಜೊತೆಗೆ ಗುರಿಯೊಂದಿಗೆ ಮುನ್ನೆಡೆಯಬೇಕು. ಉತ್ತಮ ಸಾಧನೆ ಮಾಡಬೇಕು ಎಂದು ಹೇಳಿದರು. ನರೇಗಾ ಯೋಜನೆಯಡಿ ಪ್ರಗತಿ ಹಂತದಲ್ಲಿರುವ ಆಟದ ಮೈದಾನ ಅಭಿವೃದ್ಧಿ ಕಾಮಗಾರಿಯನ್ನು ಪೂರ್ಣಗೊಳಿಸಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಸೂಚನೆ ನೀಡಿದರು.
ಮುಳವಾಡ ಗ್ರಾಮದ ನಮ್ಮೂರ ಸರಕಾರಿ ಕನ್ನಡ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಶಾಲಾ ಕೊಠಡಿಗಳನ್ನು ಪರಿಶೀಲಿಸಿದರು. ಈ ಸರ್ಕಾರಿ ಶಾಲೆಗೆ ನರೇಗಾ ಯೋಜನೆಯಡಿ ಆಟದ ಮೈದಾನ ಅಭಿವೃದ್ಧಿ, ಮಳೆ ನೀರು ಕೊಯ್ಲು ಘಟಕ, ಪೌಷ್ಟಿಕ ಕೈತೋಟ ಕಾಮಗಾರಿ ಅನುಷ್ಟಾನಗೊಳಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪಂಚಾಳ ಇವರಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಕೊಲ್ಹಾರ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಸುನೀಲ ಮದ್ದಿನ, ಜಿಲ್ಲಾ ಪಂಚಾಯತಿಯ ಸಹಾಯಕ ಯೋಜನಾಧಿಕಾರಿ ಅರುಣಕುಮಾರ ದಳವಾಯಿ, ಶಿಶು ಅಭಿವೃದ್ದಿ ಯೋಜನಾಧಿಕಾರಿ ನಿರ್ಮಲಾ ಸುರಪುರ, ಪಂಚಾಯತ್ ರಾಜ್ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ವಿಲಾಸ್ ರಾಠೋಡ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ವಿ. ಬಿ ಗೊಂಗಡಿ, ಶಾಖಾಧಿಕಾರಿ ಎನ್. ಬಿ. ನಾಯಕ, ತೆಲಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಅರವಿಂದ ಕೊಪ್ಪದ, ತೆಲಗಿ ಗ್ರಾಮ ಪಂಚಾಯಿತಿ ಅಭಿವೃಧ್ದಿ ಅಧಿಕಾರಿಗಳಾದ ದಸ್ತಗೀರಸಾಬ್ ಬಿಳೇಕುದರೆ, ರೋಣಿಹಾಳ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಕನ್ಯಾ ಲಂಬು ಸೇರಿದಂತೆ ಇತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.