Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವರ್ಗಾವಣೆ ಪಡೆವ ಶಿಕ್ಷಕರು ಸಂತೃಪ್ತಿಯಿಂದ ಬೋಧನಾ ಕಾರ್ಯ ನಿರ್ವಹಿಸಿ
(ರಾಜ್ಯ ) ಜಿಲ್ಲೆ

ವರ್ಗಾವಣೆ ಪಡೆವ ಶಿಕ್ಷಕರು ಸಂತೃಪ್ತಿಯಿಂದ ಬೋಧನಾ ಕಾರ್ಯ ನಿರ್ವಹಿಸಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಶಿಕ್ಷಕರ ವರ್ಗಾವಣೆ ಕೌನ್ಸಲಿಂಗ್ ಪರಿಶೀಲಿಸಿದ ಜಿ.ಪಂ.ಸಿಇಓ ರಿಷಿ ಆನಂದ ಕಿವಿಮಾತು

ವಿಜಯಪುರ: ಕೌನ್ಸಲಿಂಗ್ ಪ್ರಕ್ರಿಯೆ ಮೂಲಕ ವಿವಿಧ ಪ್ರಾಧಾನ್ಯತೆಗಳಡಿಯಲ್ಲಿ ತಮಗೆ ಅನುಕೂಲವಾಗುವ ಸ್ಥಳಗಳಲ್ಲಿ ವರ್ಗಾವಣೆ ಪಡೆಯುವ ಶಿಕ್ಷಕರು ಸಂತೃಪ್ತಿಯಿಂದ ಬೋಧನಾ ಕಾರ್ಯವನ್ನು ನಿರ್ವಹಿಸಿ ಇಲಾಖೆಯ ಗುರಿ ಉದ್ದೇಶಗಳ ಸಫಲತೆಗೆ ಹೆಚ್ಚು ಪರಿಶ್ರಮವಹಿಸಬೇಕೆಂದು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಿಷಿ ಆನಂದ ಹೇಳಿದರು.
ಅವರು ಗುರುವಾರ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ನಡೆಯುತ್ತಿರುವ ೨೦೨೪-೨೫ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್‌ನಲ್ಲಿ ಭಾಗವಹಿಸಿರುವ ಶಿಕ್ಷಕರು ಆನ್-ಲೈನ್ ಪ್ರಕ್ರಿಯೆ ಮೂಲಕ ಸ್ಥಳ ಆಯ್ಕೆ ಮಾಡಿಕೊಳ್ಳುವ ಪ್ರಕ್ರಿಯೆಯಲ್ಲಿ ಖುದ್ದಾಗಿ ವೀಕ್ಷಿಸಿ ಮಾತನಾಡಿದರು.
ಶಿಕ್ಷಕರ ಪಾತ್ರ ಅನನ್ಯವಾಗಿದೆ. ವಿಜಯಪುರ ಜಿಲ್ಲೆಯ ಎಲ್ಲ ಶಾಲಾ ಶಿಕ್ಷಕರು ವೃತ್ತಿಪರ ಕೌಶಲ್ಯಗಳನ್ನು ಬಳಸಿಕೊಂಡು ಜಿಲ್ಲೆಯ ಶಾಲಾ ಶಿಕ್ಷಣ ವ್ಯವಸ್ಥೆಯ ಗುಣಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಶ್ರಮಿಸಬೇಕು
೨೦೨೪-೨೫ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್‌ನಲ್ಲಿ ಭಾಗವಹಿಸಿರುವ ಶಿಕ್ಷಕರು ಆನ್-ಲೈನ್ ಪ್ರಕ್ರಿಯೆ ಮೂಲಕ ಸ್ಥಳ ಆಯ್ಕೆ ಮಾಡಿಕೊಳ್ಳುವ ಶಿಕ್ಷಕರಿಗೆ ಸ್ಥಳ ಆಯ್ಕೆ ಮಾಡಿಕೊಂಡಿರುವ ಆದೇಶಗಳನ್ನು ನೀಡಿದರು.
ಪ್ರಸಕ್ತ ಸಾಲಿನ ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ಶಿಕ್ಷಕರು ಸ್ಥಳಗಳನ್ನು ಆಯ್ಕೆ ಮಾಡಿಕೊಳ್ಳುವುದನ್ನು ಖುದ್ದಾಗಿ ಪರಿವೀಕ್ಷಿಸಿ ಶಿಕ್ಷಕರ ಅಭಿಪ್ರಾಯವನ್ನು ಆಲಿಸಿದರು.
ಶಿಕ್ಷಕರ ವರ್ಗಾವಣೆಯು ದಿನಾಂಕ : ೨೪-೦೭-೨೦೨೪ ರಿಮದ ೨೬-೦೭-೨೦೨೪ರವರೆಗೆ ನಡೆಯಲಿದ್ದು, ಪ್ರಸಕ್ತ ಸಾಲಿನಲ್ಲಿ ವರ್ಗಾವಣೆ ಕೋರಿ ಪ್ರಾಥಮಿಕ ವಿಭಾಗದಲ್ಲಿ ವಿಶೇಷ ಶಿಕ್ಷಕರು-೧, ದೈಹಿಕ ಶಿಕ್ಷಕರು-೫೧, ಮುಖ್ಯ ಶಿಕ್ಷಕರು-೬೫ ಹಾಗೂ ಸಹ-ಶಿಕ್ಷಕರು-೧೯೫೦ ಹೀಗೆ ಒಟ್ಟು -೨೦೬೭ ಶಿಕ್ಷಕರು ಅರ್ಜಿ ಸಲ್ಲಿಸಿರುತ್ತಾರೆ. ಅದರಂತೆಯೇ ಪ್ರೌಢಶಾಲಾ ವಿಭಾಗದಲ್ಲಿ ವಿಶೇಷ ಶಿಕ್ಷಕರು-೧೬, ದೈಹಿಕ ಶಿಕ್ಷಕರು-೩೨ ಹಾಗೂ ಸಹ-ಶಿಕ್ಷಕರು ಗ್ರೇಡ್೨ -೩೭೯ ಹೀಗೆ ಒಟ್ಟು-೪೨೭ ಶಿಕ್ಷಕರು ಅರ್ಜಿ ಸಲ್ಲಿಸಿರುವುದನ್ನು ಪರಿಶೀಲಿಸಿದರು.
ಸಿಇಒ ಅವರು ಭೇಟಿ ನೀಡಿದ ಅವಧಿಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಲ್ಲಿ ವಿಶೇಷ ಶಿಕ್ಷಕರು – ೦೧, ದೈಹಿಕ ಶಿಕ್ಷಣ ಶಿಕ್ಷಕರು – ೫೧, ಮುಖ್ಯ ಶಿಕ್ಷಕರು-೬೫ ಹಾಗೂ ಸಹ ಶಿಕ್ಷಕರು ೭೦೦ ಶಿಕ್ಷಕರು ಕೌನ್ಸಲಿಂಗ್‌ನಲ್ಲಿ ಭಾಗವಹಿಸಿ ಸ್ಥಳಗಳನ್ನು ಆಯ್ಕೆ ಮಾಡಿಕೊಂಡಿದ್ದರು. ಶಿಕ್ಷಕರು ಯಾವುದೇ ಆತಂಕ ಇಲ್ಲದೇ ತಮಗೆ ಬೇಕಾದ ಸ್ಥಳಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದರು. ಕಚೇರಿಯ ಆವರಣದಲ್ಲಿ ಕೌನ್ಸಲಿಂಗ್ ಪ್ರಕ್ರಿಯೆಯನ್ನು ಅವಲೋಕಿಸಲು ಎರಡು ಪ್ರತ್ಯೇಕ ಸ್ಥಳಗಳಲ್ಲಿ ಎಲ್.ಇ.ಡಿ. ಸ್ಕ್ರೀನ್ ಅಳವಡಿಸಲಾಗಿತ್ತು. ಅಲ್ಲಿ ಶಿಕ್ಷಕರು ತಮ್ಮ ಸರದಿ ಹಾಗೂ ಖಾಲಿ ಹುದ್ದೆಗಳ ನಿಖರವಾದ ಮಾಹಿತಿಯನ್ನು ಗುರುತಿಸಿಕೊಳ್ಳುತ್ತಿದ್ದರು. ಕೌನ್ಸಲಿಂಗ್ ಪ್ರಕ್ರಿಯೆಯನ್ನು ನಿಯಮಾನುಸಾರವಾಗಿ ಮತ್ತು ಕ್ರಮಬದ್ಧವಾಗಿ ಶಿಸ್ತುಬದ್ಧ ರೀತಿಯಲ್ಲಿ ನಡೆಸಲಾಗುತ್ತಿರುವುದನ್ನು ಅವಲೋಕಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಇದೇ ಸಮಯದಲ್ಲಿ ಮಂಡಳಿಯಿಂದ ಬಂದಿದ್ದ ಎಸ್.ಎಸ್.ಎಲ್.ಸಿ ಪರೀಕ್ಷೆ-೩ರ ಗೌಪ್ಯ ಸಾಮಗ್ರಿಗಳ ತಾಲ್ಲೂಕುವಾರು ವಿತರಣಾ ಕಾರ್ಯವು ನಡೆಯುತ್ತಿತ್ತು. ತಾಲ್ಲೂಕು ಖಜಾನೆಗಳಲ್ಲಿ ದಾಸ್ತಾನುಗೊಳಿಸುವ ಸಂಬಂಧವಾಗಿ ಉಪನಿರ್ದೇಶಕರಿಂದ ಗೌಪ್ಯ ಸಾಮಗ್ರಿಗಳನ್ನು ಪಡೆದುಕೊಂಡು ಎಲ್ಲ ಕ್ಷೇತ್ರ-ಶಿಕ್ಷಣಾಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದ ಪ್ರಕ್ರಿಯೆಯನ್ನೂ ಕೂಡ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಎನ್.ಎಚ್.ನಾಗೂರ, ಜಿಲ್ಲಾ ಪಂಚಾಯತಿಯ ಸಹಾಯಕ ಯೋಜನಾಧಿಕಾರಿ ಅರುಣಕುಮಾರ ದಳವಾಯಿ, ಎಲ್ಲ ತಾಲೂಕುಗಳ ಶಿಕ್ಷಣಾಧಿಕಾರಿಗಳು, ವಿವಿಧ ಶಿಕ್ಷಕರ ಸಂಘಟನೆಗಳ ಪದಾಧಿಕಾರಿಗಳು ಮತ್ತು ವರ್ಗಾವಣೆ ಪ್ರಕ್ರಿಯೆ /ಎಸ್.ಎಸ್.ಎಲ್.ಸಿ ಪರೀಕ್ಷೆಯ ಜಿಲ್ಲಾ ನೋಡಲ್ ಅಧಿಕಾರಿ ಮತ್ತಿತರರು ಹಾಜರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.