Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರವಾಹ ಪರಿಸ್ಥಿತಿ ಸಮರ್ಥವಾಗಿ ಎದುರಿಸಲು ಸನ್ನದ್ಧರಾಗಿ!
(ರಾಜ್ಯ ) ಜಿಲ್ಲೆ

ಪ್ರವಾಹ ಪರಿಸ್ಥಿತಿ ಸಮರ್ಥವಾಗಿ ಎದುರಿಸಲು ಸನ್ನದ್ಧರಾಗಿ!

By Updated:No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮಹಾರಾಷ್ಟ್ರ ಪಶ್ಚಿಮ ಘಟ್ಟಗಳಲ್ಲಿ ನಿರಂತರ ಮಳೆ | ಆಲಮಟ್ಟಿ ಡ್ಯಾಂನಿಂದ ನದಿಪಾತ್ರಕ್ಕೆ ನೀರು | ಅಧಿಕಾರಿಗಳಿಗೆ ಡಿಸಿ ಟಿ.ಭೂಬಾಲನ್ ಸೂಚನೆ

ವಿಜಯಪುರ: ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಆಲಮಟ್ಟಿ ಜಲಾಶಯ ಪೂರ್ಣಗೊಳ್ಳುವ ಹಂತದಲ್ಲಿದ್ದು, ನದಿಪಾತ್ರಕ್ಕೆ ನೀರು ಹರಿಸುವುದರಿಂದ ಮುನ್ನೆಚ್ಚರಿಕೆಯಾಗಿ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸನ್ನದ್ಧರಾಗಿರುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು.
ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಪರೆನ್ಸ್ ಕೆಸ್ವಾನ ಸಭೆಯಲ್ಲಿ ಮಾತನಾಡಿ, ಜಲಾಶಯದಿಂದ ಹೆಚ್ಚುವರಿ ನೀರು ಹರಿಸುವುದರಿಂದ ಮುನ್ನೆಚ್ಚರಿಕೆಯಾಗಿ ಸಂಬಂಧಿಸಿದ ತಹಶೀಲ್ದಾರರು ತಮ್ಮ ವ್ಯಾಪ್ತಿಯಲ್ಲಿ ಅಪಾಯಕ್ಕೊಳಗಾಗುವ ಪ್ರದೇಶವನ್ನು ಗುರುತಿಸಿಕೊಂಡು ಯಾವುದೇ ಹಾನಿ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಂಡು ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಲು ಪೂರ್ವ ತಯಾರಿ ಮಾಡಿಕೊಳ್ಳಬೇಕು. ಪ್ರವಾಹ ಪರಿಸ್ಥಿತಿ ಉಂಟಾದಲ್ಲಿ ಜನ-ಜಾನುವಾರುಗಳಿಗೆ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವುದು ಸೇರಿದಂತೆ ಸೂಕ್ತ ಸ್ಥಳಗಳಲ್ಲಿ ಕಾಳಜಿ ಕೇಂದ್ರದ ವ್ಯವಸ್ಥೆಗೆ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ಮುದ್ದೇಬಿಹಾಳ, ನಿಡಗುಂದಿ, ಕೋಲಾರ ತಾಲೂಕಿನ ಆಯಾ ತಹಶೀಲ್ದಾರ್‌ಗಳು ಕೆಬಿಜೆಎನ್‌ಎಲ್ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಕಂಟ್ರೋಲ್ ರೂಂ ಸ್ಥಾಪಿಸಿ, ದಿನದ ೨೪ ಗಂಟೆ ನಿಗಾವಹಿಸಬೇಕು. ಕೃಷ್ಣಾ ನದಿತೀರದ ಜನ, ಜಾನುವಾರಗಳ ಸುರಕ್ಷತೆಗೆ ಹಾಗೂ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಟಾಸ್ಕ್ ಪೋರ್ಸ್ ಸಮಿತಿ ದಿನದ ೨೪ ಗಂಟೆಯೂ ನಿರ್ವಹನೆಗೆ ಸದಾ ಸನ್ನದ್ಧ ಸ್ಥಿತಿಯಲ್ಲಿರುವಂತೆ ಅವರು ಸೂಚನೆ ನೀಡಿದರು.
ಡೋಣಿ ನದಿ ಪಾತ್ರದ ೨೩, ಭೀಮಾ ನದಿ ಪಾತ್ರದ ೧೬, ಕೃಷ್ಣಾ ನದಿ ಪಾತ್ರದ ೯ ಗ್ರಾಮ ಪಂಚಾಯತ್‌ಗಳು ನಿರಂತರ ನೀರಿನ ಮಟ್ಟದ ಮಾಹಿತಿಯನ್ನು ಸಂಗ್ರಹಿಸಬೇಕು. ಗ್ರಾಮ ಪಂಚಾಯತ್, ತಾಲೂಕು ಆಡಳಿತ, ಟಾಸ್ಕ್ ಪೋರ್ಸ ಸಭೆ ನಡೆಸಬೇಕು. ಮುನ್ನೆಚರಿಕೆ ಕ್ರಮವಾಗಿ ನದಿ ಪಾತ್ರಕ್ಕೆ ಜನ, ಜಾನುವಾರು ತೆರಳದಂತೆ ಡಂಗೂರ ಸಾರಿ ಜಾಗೃತಿ ಮೂಡಿಸಬೇಕು. ಜನ-ಜಾನುವಾರುಗಳ ಹಾನಿ ಸಂದರ್ಭದಲ್ಲಿ ನಿಯಮಾನುಸಾರ ಪರಿಹಾರಕ್ಕೆ ತುರ್ತು ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.
ಡೆಂಗ್ಯೂ ನಿಯಂತ್ರಣ: ಡೆಂಗ್ಯೂ ನಿಯಂತ್ರಣಕ್ಕಾಗಿ ಮುಂಜಾಗೃತವಾಗಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ನೀರು ನಿಲ್ಲದಂತೆ, ಹಾಗೂ ಚರಂಡಿ, ರಾಜಕಾಲುವೆಗಳ  ಸ್ವಚ್ಚತೆ, ಫಾಗಿಂಗ್, ಬ್ಲೀಚಿಂಗ್ ಪೌಡರ್, ಸಿಂಪರಣೆ ಮಾಡಬೇಕು. ಕೆರೆ, ನೀರು ನಿಲ್ಲುವ ಪ್ರದೇಶದಲ್ಲಿ ಮೀನುಮರಿಗಳನ್ನು ಬಿಡುವ ಮೂಲಕ ಸೊಳ್ಳೆಯ ಮೊಟ್ಟೆಗಳ ನಾಶಕ್ಕೆ ಕ್ರಮ ವಹಿಸಬೇಕು. ವಾರಕ್ಕೆ ಒಂದು ಸಲ ಕಡ್ಡಾಯವಾಗಿ ನೀರಿನ ತೊಟ್ಟಿ, ಟ್ಯಾಂಕರ್, ಶುಚಿಗೊಳಿಸಬೇಕು. ಹಳ್ಳಿಯಲ್ಲಿ ಗ್ರಾಮ ಪಂಚಾಯತಿಯ ಅಧಿಕಾರಿಗಳು, ತಾಲೂಕಿನಲ್ಲಿ ಪುರಸಭೆ ಅಧಿಕಾರಿಗಳು ಎಚ್ಚರಿಕೆ ವಹಿಸುವಂತೆ ಅವರು ಸೂಚನೆ ನೀಡಿದರು.
ಜಿಲ್ಲೆಯ ಎಲ್ಲಾ ಸರಕಾರಿ ಕಟ್ಟಡಗಳು, ಆಸ್ಪತ್ರೆಗಳ ಸ್ವಚ್ಚತೆಗೆ ಆದ್ಯತೆ ನೀಡಬೇಕು. ಕಸ ವಿಂಗಡನೆ ಮಾಡಿ ಸಮರ್ಪಕವಾಗಿ ವಿಲೇವಾರಿ ಮಾಡಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸೊಳ್ಳೆಗಳು ಹರಡದಂತೆ ಕಡಿವಾಣ ಹಾಕಬೇಕು ಈ ಕುರಿತು ಸಾರ್ವಜನಿಕರಲ್ಲಿ ಅಗತ್ಯ ಜಾಗೃತಿ ಮೂಡಿಸುವಂತೆ ಅವರು ಸೂಚನೆ ನೀಡಿದ ಅವರು, ಸಾರ್ವಜನಿಕರೂ ಸಹ ತಮ್ಮ ಸುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವ ಮೂಲಕ ಸಹಕರಿಸಬೇಕು ಎಂದು ಈ ಸಂದರ್ಭದಲ್ಲಿ ಅವರು ಕೋರಿದ್ದಾರೆ.
ಆಯಾ ತಹಶೀಲ್ದಾರ್ ತಮ್ಮ ವ್ಯಾಪ್ತಿಯಲ್ಲಿನ ಪುರಸಭೆ ಮುಖ್ಯಾಧಿಕಾರಿ, ತಾಲೂಕಾ ಆರೋಗ್ಯ ಅಧಿಕಾರಿ, ತಾಲೂಕಾ ಪಂಚಾಯತ್ ಇಒ ಕಡ್ಡಾಯವಾಗಿ  ತಾಲೂಕಿನಲ್ಲಿ ಟಾಸ್ಕ್ ಫೋರ್ಸ್ ಸಭೆ ನಡೆಸಬೇಕು. ಡೆಂಗ್ಯೂ ವಾರ್ ರೂಂ ನಿರ್ವಹಣೆ ವ್ಯವಸ್ಥಿತವಾಗಿ ನಡೆಸಬೇಕು. ದೂರು ಅಥವಾ ಕರೆ ಬಂದರೆ ತಕ್ಷಣ ಸ್ಪಂದಿಸಿ ಕ್ರಮ ವಹಿಸಬೇಕು. ಡೆಂಗ್ಯೂ ಜಾಗೃತಿ ಬಗ್ಗೆ ಕರಪತ್ರ, ಪೋಸ್ಟರ್, ತಿಳುವಳಿಕೆ, ಮೂಡಿಸಬೇಕು ಎಂದು ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಮಾತನಾಡಿ, ಡೆಂಗ್ಯೂ ನಿಯಂತ್ರಣ ಸಲುವಾಗಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಪಿಡಿಒ ಹಾಗೂ ಸಿಬ್ಬಂದಿಗಳಿಗೆ ಗ್ರಾಮಗಳಲ್ಲಿ ಸ್ವಚ್ಚತೆ ಹಾಗೂ ಜಾಗೃತಿ ಮೂಡಿಸಲು ಈಗಾಗಲೇ ಸೂಚಿಸಲಾಗಿದೆ ಎಂದು ತಿಳಿಸಿದರು.
 ಬೆಳೆ ಪರಿಹಾರ-ಸರ್ವೇ:  ಬೆಳೆಗಳ ಬಗ್ಗೆ ಸರಿಯಾಗಿ ಮಾಹಿತಿ ಸಂಗ್ರಹಿಸಿ, ರೈತರು ಬೆಳೆದ ಬೆಳೆ ಮಾಹಿತಿ ದಾಖಲಿಸಿ ಅವರಿಗೆ ಬೆಳೆ ವಿಮೆ ಹಾಗೂ ಸರ್ಕಾರದ ಸೌಲಭ್ಯಗಳು ತಪ್ಪದಂತೆ ಕ್ರಮವಹಿಸಬೇಕು. ಪಿಡಿಒ, ಗ್ರಾಮ ಲೆಕ್ಕಾಧಿಕಾರಿ ಖುದ್ದಾಗಿ ರೈತರ ಹೊಲಗಳಿಗೆ ತೆರಳಿ ನಿಖರವಾದ ಮಾಹಿತಿ ಒದಗಿಸಬೇಕು. ರೈತರಿಗೆ ಯಾವುದೇ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಬೇಕು. ಈ ಬಗ್ಗೆ ಅಸಡ್ಡೆ ತೋರಿದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಬಸವರಾಜ ಹುಬ್ಬಳ್ಳಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ.ರಾಜಶೇಖರ ವಿಲಿಯಮ್ಸ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ರಾಹುಲಕುಮಾರ ಬಾಗಲದೊಡ್ಡಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪುಂಡಲೀಕ್ ಮಾನವರ, ತಾಲೂಕಿನ ತಹಶೀಲ್ದಾರ್, ಕೃಷಿ ಇಲಾಖೆ ಅಧಿಕಾರಿಗಳು, ಜಿಪಂ, ತಾಪಂ ಅಧಿಕಾರಿಗಳು, ಆರೋಗ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.