ಸಿಂದಗಿ: ಕರ್ನಾಟಕ ಕಾರ್ಯನಿರತ ಪರ್ತಕರ್ತರ ಸಂಘ ಜಿಲ್ಲಾ ಘಟಕ ವಿಜಯಪುರ ವತಿಯಿಂದ ೨೦೨೪ನೆಯ ಸಾಲಿನಲ್ಲಿ ಕೊಡಮಾಡುವ ಜಿಲ್ಲಾ ವಾರ್ಷಿಕ ಪ್ರಶಸ್ತಿಗೆ ಸಿಂದಗಿ ಕನ್ನಡಪ್ರಭ ತಾಲೂಕು ವರದಿಗಾರ ಸಿದ್ದಲಿಂಗ ಕಿಣಗಿ ಹಾಗೂ ವಿಜಯ ಕರ್ನಾಟಕ ತಾಲೂಕು ವರದಿಗಾರ ಸುದರ್ಶನ ಜಂಗಣ್ಣಿ ಅವರು ಆಯ್ಕೆಯಾಗಿದ್ದಾರೆ ಎಂದು ಕಾನಿಪ ತಾಲೂಕಾಧ್ಯಕ್ಷ ಆನಂದ ಶಾಬಾದಿ ಹೇಳಿದ್ದಾರೆ.
ಜು.೨೮ರಂದು ವಿಜಯಪುರದ ಸೋಲಾಪೂರ ರಸ್ತೆಯಲ್ಲಿರುವ ಪೊಲೀಸ್ ಪರೇಡ್ ಮೈದಾನದ ಎದುರಿರುವ ಪೊಲೀಸ್ ಸಮುದಾಯ ಭವನ ನಡೆಯುವ ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕಾನಿಪ ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

