Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮೆಗಾಮಾರುಕಟ್ಟೆ ಆವರಣಗೋಡೆ ತೆರವು ಕಾರ್ಯಾಚರಣೆ
(ರಾಜ್ಯ ) ಜಿಲ್ಲೆ

ಮೆಗಾಮಾರುಕಟ್ಟೆ ಆವರಣಗೋಡೆ ತೆರವು ಕಾರ್ಯಾಚರಣೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಪಟ್ಟಣದ ಹೃದಯ ಭಾಗದಲ್ಲಿ ಪುರಸಭೆಯಿಂದ ನಿರ್ಮಾಣಗೊಂಡಿರುವ ಮೆಗಾಮಾರುಕಟ್ಟೆ ಕಟ್ಟಡದ ಕೊಲ್ಹಾರಕ್ಕೆ ಹೋಗುವ ಮುಖ್ಯರಸ್ತೆಗೆ ಹೊಂದಿಕೊಂಡಿದ್ದ ಆವರಣಗೋಡೆ(ಕಂಪೌಂಡ್)ಯನ್ನು ತೆರವು ಗೊಳಿಸುವ ಕಾರ್ಯಾಚರಣೆ ಪುರಸಭೆಯಿಂದ ಗುರುವಾರ ನಡೆಸಲಾಯಿತು.
ಆವರಣಗೋಡೆಗೆ ಹೊಂದಿಕೊಂಡು ಹಾಕಲಾಗಿದ್ದ ಡಬ್ಬಾ ಅಂಗಡಿಗಳನ್ನು ಪುರಸಭೆಯಿಂದ ಮೊದಲು ತೆರವು ಗೊಳಿಸಿದ ನಂತರ ಜೆಸಿಬಿಯಿಂದ ಆವರಣಗೋಡೆಯನ್ನು ತೆರವುಗೊಳಿಸಲಾಯಿತು. ಈ ಸಂದರ್ಭದಲ್ಲಿ ಆವರಣಗೋಡೆಗೆ ಇಟ್ಟಿದ್ದ ಡಬ್ಬಾ ಅಂಗಡಿಗಳ ವ್ಯಾಪಾರಿಗಳು ನಮ್ಮ ನಿತ್ಯ ಜೀವನ ಇದರಿಂದ ನಡೆಯುತ್ತಿದೆ. ಅಧಿಕಾರಿಗಳು ನಮ್ಮ ಬಗ್ಗೆ ಗಮನ ಹರಿಸಬೇಕು. ನಮ್ಮ ವ್ಯಾಪಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ಮನವಿ ಮಾಡಿಕೊಳ್ಳುವ ಜೊತೆಗೆ ಅಽಕಾರಿಗಳೊಂದಿಗೆ ಮಾತಿನ ವಾಗ್ವಾದ ನಡೆಯಿತು.
ಮೆಗಾಮಾರುಕಟ್ಟೆಯಲ್ಲಿ ಬಾಡಿಗೆ ಹಿಡಿದ ಅಂಗಡಿ ಮಾಲೀಕರು ಪುರಸಭೆ ಮುಖ್ಯಾಧಿಕಾರಿಗಳಿಗೆ ಕೊಲ್ಹಾರ ರಸ್ತೆಗೆ ಹೊಂದಿಕೊಂಡಿರುವ ಆವರಣಗೋಡೆಯನ್ನು ತೆರವು ಗೊಳಿಸಿ ನಮ್ಮ ಅಂಗಡಿಗಳಿಗೆ ಜನರು ಬರುವಂತೆ ಅನುಕೂಲ ಮಾಡಿಕೊಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಬುಧವಾರವಷ್ಟೇ ಮನವಿ ಸಲ್ಲಿಸಿದ್ದರು. ಇದರ ಬೆನ್ನಲ್ಲೆಯಲ್ಲಿಯೇ ಇಂದು ತಾತ್ಕಾಲಿಕವಾಗಿ ಕಟ್ಟಲಾಗಿದ್ದ ಆವರಣಗೋಡೆಯ ತೆರವು ಕಾರ್ಯಾಚರಣೆಯನ್ನು ಇಂದು ಪುರಸಭೆಯಿಂದ ನಡೆದಿದೆ.
ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ ಅವರನ್ನು ಸಂಪರ್ಕಿಸಿದಾಗ, ಮೆಗಾಮಾರುಕಟ್ಟೆಯ ಕೊಲ್ಹಾರ ರಸ್ತೆಯ ಪಕ್ಕದಲ್ಲಿ ತಾತ್ಕಲಿಕವಾಗಿ ನಿರ್ಮಿಸಲಾಗಿದ್ದ ಆವರಣಗೋಡೆಯನ್ನು ತೆರವು ಗೊಳಿಸಿ ೧೫ ನೇ ಹಣಕಾಸು ಯೋಜನೆಯಲ್ಲಿ ೪೪ ಲಕ್ಷ ರೂ. ವೆಚ್ಚದಲ್ಲಿ ಗ್ರಿಲ್ ಅಳವಡಿಸುವ ಕಾಮಗಾರಿಯನ್ನು ಪುರಸಭೆಯಿಂದ ಹಾಕಿಕೊಳ್ಳಲಾಗಿದೆ. ಈಗಾಗಲೇ ಇದರ ಟೆಂಡರ್ ಆಗಿದೆ. ಒಂದು ವಾರದಲ್ಲಿ ಈ ಕಾಮಗಾರಿ ಆರಂಭವಾಗಲಿದೆ. ಆವರಣ ಗೋಡೆಯನ್ನು ತೆಗೆದು ಗ್ರಿಲ್ ಅಳವಡಿಸಿದರೆ ಮೆಗಾಮಾರುಕಟ್ಟೆಯಲ್ಲಿರುವ ಅಂಗಡಿ-ಮಳಿಗೆಗಳು ಜನರಿಗೆ ಕಾಣುವ ಜೊತೆಗೆ ಮೆಗಾಮಾರುಕಟ್ಟೆಗೆ ಮೆರಗು ಬರಲಿದೆ. ಮೆಗಾಮಾರುಕಟ್ಟೆಯಲ್ಲಿರುವ ಅಂಗಡಿಗಳ ವ್ಯಾಪಾರ-ವಹಿವಾಟುಗಳಿಗೆ ಅನುಕೂಲವಾಗಲಿದೆ ಎಂದರು.
ಈ ಆವರಣಗೋಡೆಗೆ ಹೊಂದಿಕೊಂಡು ಹಾಕಲಾಗಿದ್ದ ಡಬ್ಬಾ ಅಂಗಡಿಗಳ ಮಾಲೀಕರಿಗೆ ತಮ್ಮ ಅಂಗಡಿಗಳನ್ನು ತೆರವು ಗೊಳಿಸಿಕೊಳ್ಳಲು ಒಂದೆರಡು ದಿನಗಳ ಮುಂಚೆ ಪುರಸಭೆಯಿಂದ ತಿಳಿಸಲಾಗಿತ್ತು. ಕೆಲವರು ತಮ್ಮ ಡಬ್ಬಾ ಅಂಗಡಿಗಳನ್ನು ತೆರವುಗೊಳಿಸಿಕೊಂಡಿದ್ದಾರೆ. ಇಂದು ಕೆಲವು ಅಂಗಡಿಗಳನ್ನು ಪುರಸಭೆಯಿಂದ ತೆರವುಗೊಳಿಸಿ ಆವರಣಗೋಡೆಯ ತೆರವು ಕಾರ್ಯಾಚರಣೆ ಮಾಡಲಾಗುತ್ತಿದೆ. ರಸ್ತೆ ಬದಿಯಲ್ಲಿ ವ್ಯಾಪಾರ ಮಾಡುವವರು ಖಾಯಂಯಾಗಿ ಅಂಗಡಿಗಳನ್ನು ಹಾಕುವಂತಿಲ್ಲ. ಅವರು ತಮ್ಮ ವ್ಯಾಪಾರವನ್ನು ತಳ್ಳು ಗಾಡಿಯಲ್ಲಿ ಮಾಡಬಹುದು ಎಂದು ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ ಹೇಳಿದರು.
ಆವರಣಗೋಡೆಗೆ ಹೊಂದಿಕೊಂಡು ಹಾಕಲಾಗಿದ್ದ ಡಬ್ಬಾ ಅಂಗಡಿಯವರು ತಮ್ಮ ಅಂಗಡಿಗಳನ್ನು ತೆರವುಗೊಳಿಸಿದ್ದರಿಂದ ನಾವು ಜೀವನ ನಡೆಸುವುದು ಕಷ್ಟವಾಗುತ್ತದೆ. ಈ ವ್ಯಾಪಾರದಿಂದ ನಮ್ಮ ಜೀವನ ನಿರ್ವಹಣೆಯಾಗುತ್ತಿತ್ತು. ಅಧಿಕಾರಿಗಳು ನಮ್ಮ ಅಂಗಡಿಗಳನ್ನು ತೆರವುಗೊಳಿಸಿದ್ದರಿಂದ ನಾವು ಮುಂದೆ ಏನು ಮಾಡಬೇಕೆಂಬುವದು ತೋಚದಂತದಾಗಿದೆ. ನಮಗೆ ಅಂಗಡಿಗಳನ್ನು ಹಾಕಿಕೊಳ್ಳಲು ಅವಕಾಶ ನೀಡುವವರೆಗೆ ನಾವು ಮೆಗಾಮಾರುಕಟ್ಟೆಯಲ್ಲಿ ಕುಳಿತುಕೊಳ್ಳುತ್ತೇವೆ ಎಂದು ಸಲೀಮಾ ಬಾಗವಾನ, ಗಿಡ್ಡಪ್ಪ ಕಾಸರ, ಪಕೀರ ಬಾಗವಾನ, ಶಿವಾನಂದ ಮಾದರ, ಮಹಿಬೂಬ ಜೀರಗಾಳ, ರಮೇಶ ಚಿಮ್ಮಲಗಿ, ಡೊಂಗ್ರಮ ಬೈರವಾಡಗಿ, ಶಂಕರಯ್ಯ ಹಿರೇಮಠ, ರೇಷ್ಮಾ ಆಲಮೇಲ, ಜನಾಬಿ ಗಿಡ್ಡಪ್ಪ ಕಸರ, ಶ್ಯಾಮಶ್ಯಾದ ಮನ್ಯಾರ, ಜಾಕೀರ ನದಾಫ, ರಾಜಅಹ್ಮದ ದಳವಾಯಿ ಎಂದು ತಮ್ಮ ಅಳಲು ತೋಡಿಕೊಂಡರು.
ಬಳೆ ಅಂಗಡಿ ಇಟ್ಟುಕೊಂಡಿದ್ದ ಯಾಸೀನ ಗೊಳಸಂಗಿ ಅವರು ಏಕಾಏಕಿ ನಮ್ಮ ಅಂಗಡಿಯನ್ನು ತೆರವುಗೊಳಿಸಿದ್ದರಿಂದ ನಮ್ಮ ಮಾಲು ಹಾಳಾಗಿ ಹೋಗಿದೆ. ನಮಗೆ ಬಸವೇಶ್ವರ ಜಾತ್ರೆಯವರಿಗೆ ವ್ಯಾಪಾರ ಮಾಡಲು ಅವಕಾಶ ಕೊಡಬೇಕಿತ್ತು. ನಮಗೆ ಅಂಗಡಿ ತೆರವು ಗೊಳಿಸಲು ಅವಕಾಶ ಕೊಡಬೇಕಾಗಿತ್ತು. ಈಗ ನಮ್ಮ ಜೀವನ ನಿರ್ವಹಣೆ ಹೇಗೆ ಮಾಡಬೇಕೆಂಬುವದು ತೋಚದಂತಾಗಿದೆ. ನಮಗೆ ವ್ಯಾಪಾರ ಮಾಡಿಕೊಳ್ಳಲು ಅಧಿಕಾರಿಗಳು ಅವಕಾಶ ಮಾಡಿಕೊಡಬೇಕೆಂದು ಹೇಳಿದರು.
ಬೀದಿ ವ್ಯಾಪಾಸ್ಥರ ಪಟ್ಟಣ ಸಮಿತಿ ಸದಸ್ಯ ಜಾಕೀರ ನದಾಫ್ ಅವರು, ಪುರಸಭೆ ಮುಖ್ಯಾಧಿಕಾರಿಗಳು ಬೀದಿ ವ್ಯಾಪಾರಸ್ಥರ ಸಭೆ ಕರೆದು ಅಂಗಡಿ ತೆರವು ಗೊಳಿಸುವ ಬಗ್ಗೆ ಮಾಹಿತಿ ನೀಡಬೇಕಾಗಿತ್ತು. ಅಧಿಕಾರಿಗಳು ಬೀದಿ ವ್ಯಾಪಾರಸ್ಥರ ಹಿತರಕ್ಷಣೆ ಕಾಪಾಡದೇ ಈ ರೀತಿ ಮಾಡಿರುವದು ಸರಿಯಲ್ಲ. ಬೀದಿ ವ್ಯಾಪಾರಸ್ಥರ ಹಿತರಕ್ಷಣೆ ಕಾಯ್ದುಕೊಳ್ಳುವದು ಅಧಿಕಾರಿಗಳ ಕರ್ತವ್ಯವಾಗಿದೆ ಎಂದು ಹೇಳಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ

ಪತ್ರಕರ್ತರು ವಸ್ತುನಿಷ್ಠವಾಗಿ, ಶೋಧನೆ ಮಾಡಿ ಬರೆಯಬೇಕು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು
    In (ರಾಜ್ಯ ) ಜಿಲ್ಲೆ
  • ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!
    In (ರಾಜ್ಯ ) ಜಿಲ್ಲೆ
  • ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರು ವಸ್ತುನಿಷ್ಠವಾಗಿ, ಶೋಧನೆ ಮಾಡಿ ಬರೆಯಬೇಕು
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷರಾಗಿ ಮಹೇಶ್, ಉಪಾಧ್ಯಕ್ಷರಾಗಿ ಜಯ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಿ.ವಿ.ರಾಮನ್ ಪ.ಪೂ ಕಾಲೇಜ್ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಗುರು ಸಂಗನಬಸವ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ & ಅಗ್ನಿ ಪ್ರವೇಶ
    In (ರಾಜ್ಯ ) ಜಿಲ್ಲೆ
  • ಬೊಗಸೆಯಲ್ಲಿ ಅರಳುವ ನಿನ್ನಂದದ ಮುಖಕೆ
    In ವಿಶೇಷ ಲೇಖನ
  • ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಕಬ್ಬಡ್ಡಿ ಪಂದ್ಯಾವಳಿ: ಬಂಜಾರಾ ಕಾಲೇಜಿಗೆ ಪ್ರಥಮ ಸ್ಥಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.