ತಾಳಿಕೋಟಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕದ ವತಿಯಿಂದ ನೀಡಲಾಗುವ 2024 ನೇ ಸಾಲಿನ ಸಂಘದ ವಾರ್ಷಿಕ ಪ್ರಶಸ್ತಿಗೆ ಪಟ್ಟಣದ ಕ್ರಿಯಾಶೀಲ ವರದಿಗಾರ ಸುನೀಲ ತಳವಾರ ಆಯ್ಕೆಯಾಗಿದ್ದಾರೆ.
ಮಾಧ್ಯಮ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಜಿಲ್ಲೆಯ ಒಟ್ಟು 31 ಜನರನ್ನು ಆಯ್ಕೆ ಮಾಡಲಾಗಿದ್ದು ಇದರಲ್ಲಿ ಪಟ್ಟಣದ ಕನ್ನಡಮ್ಮ ದಿನಪತ್ರಿಕೆಯ ತಾಲೂಕ ವರದಿಗಾರ ರಾಗಿರುವ ಸುನೀಲ ತಳವಾರ ಕೂಡಾ ಒಬ್ಬರಾಗಿದ್ದಾರೆ.
ಜುಲೈ 28 ರಂದು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಯೋಗದಲ್ಲಿ ನಗರದ ಪೊಲೀಸ್ ಸಮುದಾಯ ಭವನದಲ್ಲಿ ನಡೆಯಲಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಕೈಗಾರಿಕೆ ಮತ್ತು ಮೂಲ ಸೌಲಭ್ಯ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ, ಸಕ್ಕರೆ ಮತ್ತು ಎಪಿಎಂಸಿ ಸಚಿವ ಶಿವಾನಂದ ಪಾಟೀಲ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ, ಸಂಸದ ರಮೇಶ ಜಿಗಜಿಣಗಿ ಹಾಗೂ ಜಿಲ್ಲೆಯ ಎಲ್ಲ ಶಾಸಕರ ಸಮ್ಮುಖದಲ್ಲಿ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment

