ಚಡಚಣ: ತಾಲೂಕಿನ ಜಿಗಜೇವಣಿ ಗ್ರಾಮದ ಗದ್ಯಾಳ ವಸ್ತಿಯಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಮಲ್ಲಪ್ಪ ಶಿವಪ್ಪ ವಾಘಮೋರೆ ಅವರಿಗೆ ‘ಕವಿ ಚಕ್ರವರ್ತಿ ರನ್ನ ಪ್ರಶಸ್ತಿ’ ಪ್ರಧಾನ ಮಾಡಲಾಯಿತು.
ಪ್ರಶಸ್ತಿ ಪುರಸ್ಕೃತ ಮುಖ್ಯ ಶಿಕ್ಷಕ ಮಲ್ಲಪ್ಪ ಅವರು ಶಿಕ್ಷಕರಾಗಿ ಕಳೆದ 24 ವರ್ಷಗಳಿಂದ ಅಕ್ಷರದ ಜ್ಞಾನಾರ್ಜನೆಯನ್ನು ಮಕ್ಕಳಿಗೆ ನೀಡುತ್ತಾ ಬಂದಿರುವುದನ್ನು ಗುರುತಿಸಿ, ಮುಧೋಳದ ಮೇಘ ಮೇತ್ರಿ ಕನ್ನಡ ಸಾಹಿತ್ಯ ಸಂಘವು ಮುಧೋಳ ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಹಮ್ಮಿಕೊಂಡ ರನ್ನ ಸಾಹಿತ್ಯ ಸಂಭ್ರಮ-2024 ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ನೀಡಿ, ಗೌರವಿಸಿದರು.
ಇವರ ಸಾಧನೆಗೆ ಶಾಲೆಯ ಎಸ್.ಡಿ.ಎಂ.ಸಿ ಮಂಡಳಿಯ ಸರ್ವ ಸದಸ್ಯರು ಹಾಗೂ ಶಿಕ್ಷಕರ ವೃಂದ ಸೇರಿ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿ, ಅಭಿನಂದಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

