ಢವಳಗಿ: ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಎ ಎಸ್ ಪಾಟೀಲ ನಡಹಳ್ಳಿ ಅವರ ಅಭಿವೃದ್ಧಿ ಕೆಲಸಗಳನ್ನು ಗಮನಿಸಿ ಸಮೀಪದ ಬಸರಕೋಡ ಗ್ರಾಮದಲ್ಲಿ 30ಕ್ಕೂ ಅಧಿಕ ಯುವಕರು ಬುಧವಾರ ಸಂಜೆ ಕಾಂಗ್ರೆಸ್ ಪಕ್ಷವನ್ನು ತೊರೆದು ಶಾಸಕರಾದ ಎ ಎಸ್ ಪಾಟೀಲ ನಡಹಳ್ಳಿ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.
ಯುವ ಮುಖಂಡ ನಾಗರಾಜ ಕಮತರ ಸೇರಿದಂತೆ 30ಕ್ಕೂ ಹೆಚ್ಚು ಜನರು ಬಿಜೆಪಿ ಪಕ್ಷಕ್ಕೆ ಸೇರಿದರು.
ಈ ಸಂದರ್ಭದಲ್ಲಿ ತಾಲೂಕಾ ಭಾಜಪಾ ಯುವ ಮೋರ್ಚಾ ಅಧ್ಯಕ್ಷ ಪುನೀತ ಹಿಪ್ಪರಗಿ, ಉಪಾಧ್ಯಕ್ಷ ಬಸವರಾಜ ಮಂಕಣಿ, ಸಂಗಮೇಶ ಬಿರಾದಾರ, ಬಾಜಪಾ ಯುವ ಮೋರ್ಚಾ ಕಾರ್ಯದರ್ಶಿ ಗುರು ರಾಯಗೊಂಡ, ಚೇತನ ಕುಮಾರ್ ಬಿರಾದಾರ, ಚಂದ್ರು ವಡ್ಡರ, ಪ್ರತಾಪ್ ಹುಬ್ಬಳ್ಳಿ ಸೇರಿದಂತೆ ಇತರರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment