ವಿಜಯಪುರ: ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅವರು ಜು.೨೯ ಹಾಗೂ ೩೦ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಜು.೨೯ರಂದು ಬೆಳಿಗ್ಗೆ ೧೦ ರಿಂದ ಸಂಜೆ ೫ ಗಂಟೆವರೆಗೆ ವಸತಿ ಶಾಲೆ-ನಿಲಯ, ಜಿಲ್ಲಾ ಆಸ್ಪತ್ರೆ, ಅಂಗನವಾಡಿ ಮಕ್ಕಳ ಪಾಲನಾ ಸಂಸ್ಥೆ ಹಾಗೂ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ವಿಜಯಪುರದಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಜು.೩೦ರಂದು ಬೆಳಿಗ್ಗೆ ೧೦-೩೦ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ ೧೨-೩೦ರಿಂದ ಸಂಜೆ ೫ ಗಂಟೆಯವರೆಗೆ ವಿವಿಧ ವಸತಿ ಶಾಲೆಗಳಿಗೆ, ಅಂಗನವಾಡಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರಜಿಲ್ಲಾ ಪ್ರವಾಸ ವಿವರ
Related Posts
Add A Comment

