ಸಿಂದಗಿ: ಶಾಲಾ ಸಂಸತ್ತು, ಪಠ್ಯಪೂರಕ ಪಠ್ಯೇತರ ಚಟುವಟಿಕೆಗಳು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಕಾರಣವಾಗುವುದರ ಜೊತೆಗೆ ಮಕ್ಕಳಲ್ಲಿ ಆಸಕ್ತಿ ಇಮ್ಮಡಿಗೊಳಿಸುತ್ತದೆ ಎಂದು ಸಂಸ್ಥೆಯ ಅಧ್ಯಕ್ಷ ಆರ್.ಡಿ.ಕುಲಕರ್ಣಿ ಎಂದು ಹೇಳಿದರು.
ಪಟ್ಟಣದ ಸಮರ್ಥ ವಿದ್ಯಾವಿಕಾಸ ಸಂಸ್ಥೆಯ ಪ್ರೇರಣಾ ಶಿಶುನಿಕೇತನ, ವಿದ್ಯಾನಿಕೇತನ ಕನ್ನಡ ಪ್ರಾಥಮಿಕ ಮತ್ತು ಪ್ರೇರಣಾ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಪಠ್ಯಪೂರಕ ಮತ್ತು ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ ಮತ್ತು ಶಾಲಾ ಸಂಸತ್ತಿನ ಪ್ರತಿನಿಧಿಗಳ ಪ್ರತಿಜ್ಞಾವಿಧಿ ಸ್ವೀಕಾರ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಂದಿನ ಮಕ್ಕಳೇ ನಾಳಿನ ಪ್ರಜೆಗಳು. ಹಾಗಾಗಿ ಅವರಿಗೆ ಸಂಸತ್ತಿನ ಅರಿವು ಮೂಡಿಸಲು ಶಾಲೆಗಳಲ್ಲಿ ಸಂಸತ್ತಿನ ಪದಾಧಿಕಾರಿಗಳನ್ನಾಗ ಆಯ್ಕೆ ಮಾಡಲಾಗುತ್ತದೆ. ಇದರಿಂದ ವಿದ್ಯಾರ್ಥಿಗಳಿಗೆ ಅನಕೂಲವಾಗಲಿದೆ ಎಂದರು.
ಈ ವೇಳೆ ಮಕ್ಕಳ ಸಾಹಿತಿ ಶಿಕ್ಷಕ ಎಸ್.ಎಸ್.ಸಾತಿಹಾಳ ಮಾತನಾಡಿ, ಮಕ್ಕಳು ಶಾಲಾ ಸಂಸತ್ತು ರಚನೆಯಿಂದ ಜಾತ್ಯಾತೀತ ಸಾಮಾಜಿಕ ನಾಯಕತ್ವ ಮತ್ತು ಪಕ್ಷಾತೀತ ಭಾವನೆ ಮಕ್ಕಳಲ್ಲಿ ಬೆಳೆಯುತ್ತದೆ. ಗುರು ಹಿರಿಯರ, ಶಿಕ್ಷಕರ ಮಾರ್ಗದರ್ಶನದಲ್ಲಿ ಮಕ್ಕಳು ಸಾಗಿದಾಗ ಭವ್ಯ ಭಾರತದ ಕನಸು ನನಸಾಗುತ್ತದೆ ಎಂದರು.
ಪ್ರಸಕ್ತ ಸಾಲಿನಲ್ಲಿ ವಿವಿಧ ವಿಭಾಗದ ಕಾರ್ಯದರ್ಶಿಗಳಾಗಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶಾಲೆಯ ಮುಖ್ಯಗುರಮಾತೆ ಎಮ್.ಪಿ.ಬುಕ್ಕಾ ಪ್ರತಿಜ್ಞಾ ವಿಧಿ ಬೋಧಿಸಿದರು. ಆಯ್ಕೆಯಾದ ಪ್ರತಿನಿಧಿಗಳಿಗೆ ಅಧ್ಯಕ್ಷ ಆರ್.ಡಿ.ಕುಲಕರ್ಣಿ ಪದನಾಮದ ಬ್ಯಾಡ್ಜ್ ನೀಡಿ ಅಭಿನಂದಿಸಿದರು. ಕಾರ್ಯಕ್ರಮದಲ್ಲಿ ಎಮ್.ಜಿ. ಧ್ಯಾಮಗೊಂಡ, ಸಂಸ್ಥೆಯ ನಿರ್ದೇಶಕ ಪಿ.ಡಿ.ಕುಲಕರ್ಣಿ, ಆರ್.ಎಮ್. ಫಕೀರಪುರ, ಸತೀಶ ಕುಲಕರ್ಣಿ, ಶಿಲ್ಪಾ ಪಾಟೀಲ ಸೇರಿದಂತೆ ಶಾಲೆಯ ಬೋಧಕ-ಬೋದಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಇದ್ದರು.
Subscribe to Updates
Get the latest creative news from FooBar about art, design and business.
ಪಠ್ಯೇತರ ಚಟುವಟಿಕೆಗಳಿಂದ ಮಕ್ಕಳ ಸರ್ವಾಂಗೀಣ ಅಭಿವೃದ್ಧಿ :ಕುಲಕರ್ಣಿ
Related Posts
Add A Comment

