Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಾನಪದ ಕಲೆಯು ಸಮನ್ವಯ ಸಾಧಿಸುವ ಮೇರು ಸಂಸ್ಕೃತಿ :ಡಾ.ಬಾಲಾಜಿ
(ರಾಜ್ಯ ) ಜಿಲ್ಲೆ

ಜಾನಪದ ಕಲೆಯು ಸಮನ್ವಯ ಸಾಧಿಸುವ ಮೇರು ಸಂಸ್ಕೃತಿ :ಡಾ.ಬಾಲಾಜಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೊಲ್ಹಾರ: ಜಾನಪದ ಕಲೆಯು, ಜಾತಿ – ಮತಗಳ ಬೇಧ ತೊರೆದು ಸಮನ್ವಯ ಸಾಧಿಸುವ ಮೇರು ಸಂಸ್ಕೃತಿಯಾಗಿದೆ. ಎಲ್ಲ ಜನರನ್ನು ಬಾಂಧವ್ಯದ ಬೆಸುಗೆಯಲ್ಲಿ ಬದುಕುವಂತೆ ಕಲಿಸುವ ಶಕ್ತಿ ಜಾನಪದ ಸಂಪ್ರದಾಯಕ್ಕಿದೆ ಎಂದು ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ.ಎಸ್ ಬಾಲಾಜಿ ಅಭಿಪ್ರಾಯಪಟ್ಟರು.
ಕೊಲ್ಹಾರ ತಾಲೂಕಿನ ಬಳೂತಿ ಗ್ರಾಮದಲ್ಲಿ ಬೀಬೀ ಫಾತೀಮಾಳ ಹತ್ತು ದಿನಗಳ ಜಾರತ ಉತ್ಸವದ ನಿಮಿತ್ಯ, ಕನ್ನಡ ಜಾನಪದ ಪರಿಷತ್ ಜಿಲ್ಲಾ ಘಟಕ ವಿಜಯಪುರ ಮತ್ತು ತಾಲೂಕು ಘಟಕ ಕೊಲ್ಹಾರ ವತಿಯಿಂದ ಬಳೂತಿಯ ಭಾವಿ ಬಸವೇಶ್ವರ ಹೆಜ್ಜೆ ಮೇಳ ಸಂಘದ ಸಹಯೋಗದಲ್ಲಿ ಏರ್ಪಡಿಸಿದ ” ಜಿಲ್ಲಾ ಮಟ್ಟದ ರಿವಾಯತ ಸಂಬ್ರಮ ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ, ಹಿಂದೂ – ಮುಸ್ಲಿಂ ಏಕತೆಯಿಂದ ದೇಶದಲ್ಲಿ ಶಾಂತಿ ನೆಲೆಸುತ್ತದೆ. ರಿವಾಯತ ಕಲೆಯ ಮೂಲಕ ಶಾಂತಿ – ಸಹಬಾಳ್ವೆಗೆ ಕಾರಣವಾದ ಬಳೂತಿ ಗ್ರಾಮ ಭಾವೈಕ್ಯತೆಯ ಕಾಶಿಯಾಗಿದೆ ಎಂದರು.
ಸಾನಿಧ್ಯ ವಹಿಸಿ ಮಾತನಾಡಿದ, ನಾಗರದಿನ್ನಿ ಸದ್ಗುರು ಸದಾನಂದ ಮಠದ ತಪೋನಿಧಿ ಪೂಜ್ಯ ಮಲ್ಲಿಕಾರ್ಜುನ ಸ್ವಾಮಿಗಳು, ಧರ್ಮ ಯಾವುದಾದರೇನು ಕರ್ಮ ಮಾತ್ರ ಸತ್ಯದ ಹಾಡಿಯಲ್ಲಿರಬೇಕು. ಭಗವಂತನ ದೃಷ್ಠಿಯಲ್ಲಿ ಸಮಾನರಾದ ನಾವು ಬದುಕಿನಲ್ಲಿಯೂ ಸಮಾನತೆಯಿಂದ ಸದ್ಗತಿ ಕಾಣಬೇಕು ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕನ್ನಡ ಜಾನಪದ ಪರಿಷತ್ ವಿಜಯಪುರ ಜಿಲ್ಲಾಧ್ಯಕ್ಷ ಬಾಳನಗೌಡ ಪಾಟೀಲ (ಪಡಗಾನೂರ) , ಜಾನಪದ ಕಲೆ, ಸಾಹಿತ್ಯ, ಸಂಸ್ಕೃತಿ ಉಳಿದಿದ್ದು ಹಳ್ಳಿಗಳಲ್ಲಿ ಮಾತ್ರ. ಮಠ – ಮಂದಿರ, ಜಾತ್ರೆ – ಉತ್ಸವಗಳ ಮೂಲಕ ಮೂಲ ಜಾನಪದ ಉಳಿದುಕೊಂಡಿದೆ. ರಿವಾಯತ ಸಮ್ಮೇಳನ ಮಾಡುವ ಮೂಲಕ ರಿವಾಯತ ಕುರಿತು ಸಂಶೋಧನೆ ನಡೆಯಬೇಕು ಎಂದರು.
ಹಿರಿಯ ಜಾನಪದ ಕಲಾವಿದ ಶಂಕರಯ್ಯ ಚಿಕ್ಕಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಗ್ರಾಮದ ಹಿರಿಯರಾದ ಫೀರನಾಥ ಗಿರಿ ಭಾವಾ, ದುಂಡಪ್ಪ ಬನಾಗೊಂಡ, ಕ ಜಾ ಪ ಕೊಲ್ಹಾರ ತಾಲೂಕಾಧ್ಯಕ್ಷ ಮಲ್ಲಪ್ಪ ಗಣಿ, ಜಿಲ್ಲಾ ಸದಸ್ಯ ಮೌಲಸಾಹೇಬ್ ಜಾಹಾಗಿರದಾರ್, ಭೀಮಶಿ ಬೀಳಗಿ ಉಪಸ್ಥಿತರಿದ್ದರು.
ಎರಡು ದಿನಗಳ ಕಾಲ ನಡೆಯುವ ಈ ಕಲಾಪ್ರದರ್ಶನದಲ್ಲಿ ರಿವಾಯತಹಾಡು, ಹೆಜ್ಜೆಕುಣಿತ , ಮುಳ್ಳುಹೆಜ್ಜೆ ಕುಣಿತ ಕಲಾವಿದರು ಪ್ರದರ್ಶನ ನೀಡುವರು.
ಬಿ ಎಸ್ ಗೌಡರ ಶಿಕ್ಷಕರು ನಿರೂಪಿಸಿದರು. ವಿಠ್ಠಲ ಲೋಕಾಪುರ ಸ್ವಾಗತಿಸಿದರು. ಪವಾಡೆಪ್ಪ ಗೊಳಸಂಗಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.