ಆಲಮಟ್ಟಿ: ಮಹಾರಾಷ್ಟದ ಕೃಷ್ಣಾ ತೀರದಲ್ಲಿ ಮಹಾಪುರ ಸೃಷ್ಟಿಯಾಗುತ್ತಿದ್ದು, ಆಲಮಟ್ಟಿ ಜಲಾಶಯದಿಂದ ಈ ವರ್ಷದ ಅತ್ಯಧಿಕ ೩ ಲಕ್ಷ ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ.
ಜಲಾಶಯದ ಒಳಹರಿವು ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ.
ಒಳಹರಿವು ಮತ್ತಷ್ಟು ಹೆಚ್ಚುವ ಸಾಧ್ಯತೆಯಿದ್ದು, ಒಳಹರಿವು ಹೆಚ್ಚಿದರೇ ಹೊರಹರಿವನ್ನು ೩.೨೫ ಲಕ್ಷ ಕ್ಯುಸೆಕ್ ಗೆ ಹೆಚ್ಚುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಲಾಶಯದ ಎಲ್ಲಾ ೨೬ ಗೇಟ್ ಗಳ ಮೂಲಕ ನೀರು ಬಿಡಲಾಗುತ್ತಿದೆ. ಸಂಜೆ ೬ ಕ್ಕೆ ಜಲಾಶಯಕ್ಕೆ ೨,೦೯,೮೧೭ ಕ್ಯುಸೆಕ್ ಒಳಹರಿವು ಇದೆ. ಜಲಾಶಯದ ಮಟ್ಟ ೫೧೬.೬೮ಮೀ ಗೆ ಕಡಿಮೆಯಾಗಿದೆ. ಜಲಾಶಯದಲ್ಲಿ ೮೦ ಟಿಎಂಸಿ ನೀರು ಸಂಗ್ರಹವಾಗಿದೆ. ಇಷ್ಟೇ ಪ್ರಮಾಣದ ನೀರನ್ನು ನಾರಾಯಣಪುರ ಜಲಾಶಯದಿಂದಲೂ ಬಿಡಲಾಗುತ್ತಿದೆ,
ಭಾರಿ ಮಳೆ;
ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದೆ.
ಅನೇಕ ಕಡೆ ನಿತ್ಯ ೨೦ ಸೆಂ.ಮೀಗೂ ಅಧಿಕ ಮಳೆ ಸುರಿಯುತ್ತಿದೆ. ಮಹಾಬಲೇಶ್ವರದಲ್ಲಿ ಸೆಂ.ಮೀ ಸೋಮವಾರ ಆಗಿದೆ.
ಕರ್ನಾಟಕಕ್ಕೆ ಬಂದು ಸೇರುವ ಕಳ್ಳೋಳ ಬ್ಯಾರೇಜ್ ಬಳಿ ಕೃಷ್ಣೆಯ ಹರಿವು ೨.೧೦ ಲಕ್ಷ ಕ್ಯುಸೆಕ್ ಗೂ ಅಧಿಕ ವಿದೆ. ಆಲಮಟ್ಟಿ ಜಲಾಶಯದ ಹಿನ್ನೀರಿನ ಘಟಪ್ರಭಾ ನದಿಯಿಂದಲೂ ಸುಮಾರು ೫೦,೦೦೦ ಕ್ಯುಸೆಕ್ ಹರಿವು ಇದೆ. ಹೀಗಾಗಿ ಮುಂದಿನ ಮೂರ್ನಾಲ್ಕು ದಿನ ಜಲಾಶಯದ ಒಳಹರಿವು ೨.೫೦ ಲಕ್ಷ ಕ್ಯುಸೆಕ್ ದಾಟಲಿದೆ.
ಡಿಸಿ ಭೇಟಿ;
ಶುಕ್ರವಾರ ಬಾಗಲಕೋಟೆ ಜಿಲ್ಲಾಧಿಕಾರಿ ಕೆ.ಎಂ. ಜಾನಕಿ, ಜಿ.ಪಂ ಸಿಇಓ ಶಶಿಧರ ಕುರೇರ ಮತ್ತೀತರ ಅಧಿಕಾರಿಗಳು ಭೇಟಿ ನೀಡಿದರು.
ಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯ ಸಭಾಂಗಣದಲ್ಲಿ ಸಭೆ ನಡೆಸಿದ ಅವರು ಆಲಮಟ್ಟಿ ಜಲಾಶಯದ ನೀರಿನ ಮಟ್ಟ ಮತ್ತೀತರ ಮಾಹಿತಿಗಳ ಕುರಿತು ಚರ್ಚಿಸಿದರು.
ನಂತರ ಮಾತನಾಡಿದ ಜಿಲ್ಲಾಧಿಕಾರಿ ಕೆ.ಎಂ. ಜಾನಕಿ, ಕೃಷ್ಣಾ ನದಿ ಕರ್ನಾಟಕದ ನಾನಾ ಜಿಲ್ಲೆಗಳಲ್ಲಿ ಹರಿಯುತ್ತದೆ, ಎಲ್ಲಾ ಜಿಲ್ಲೆಗಳ ಕೃಷ್ಣಾ ತೀರದಲ್ಲಿ ಪ್ರವಾಹ ಸೃಷ್ಟಿಯಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಪ್ರವಾಹ ಉಂಟಾದರೂ ಜಿಲ್ಲಾಡಳಿತ ಸನ್ನದ್ಧವಾಗಿದೆ ಎಂದು ತಿಳಿಸಿದರು. ಕೆಬಿಜೆಎನ್ನೆಲ್ ವಿವಿಧ ಅಧಿಕಾರಿಗಳು ಇದ್ದರು.
ಜಮೀನು ಜಲಾವೃತ;
೩ ಲಕ್ಷ ಕ್ಯುಸೆಕ್ ನೀರು ಬಿಟ್ಟ ಕಾರಣ ಕೃಷ್ಣಾ ತೀರದ ಅರಳದಿನ್ನಿ, ಯಲಗೂರ ಮೊದಲಾದ ಗ್ರಾಮಗಳಲ್ಲಿ ಮತ್ತಷ್ಟು ಜಮೀನು ಶುಕ್ರವಾರ ಜಲಾವೃತಗೊಂಡಿದೆ.
Subscribe to Updates
Get the latest creative news from FooBar about art, design and business.
Related Posts
Add A Comment

