Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಪಕ್ಷಗಳಿಂದ ನನ್ನ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಯತ್ನ :ಸಿಎಂ
(ರಾಜ್ಯ ) ಜಿಲ್ಲೆ

ವಿಪಕ್ಷಗಳಿಂದ ನನ್ನ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಯತ್ನ :ಸಿಎಂ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ನನ್ನ ರಾಜಕೀಯ ಜೀವನ ತೆರೆದ ಪುಸ್ತಕ | ಪ್ರತಿ ಪುಟಗಳು ಪಾರದರ್ಶಕ ಮತ್ತು ಪ್ರಾಮಾಣಿಕ | ಸಿಎಂ ಸಿದ್ದರಾಮಯ್ಯ ಸ್ಪಷ್ಠನೆ

ಬೆಂಗಳೂರು: ಅಧಿವೇಶನದಲ್ಲಿ ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಆಡಳಿತ ಪಕ್ಷದವರು ಬೆಳಕು ಚೆಲ್ಲಿ ಚರ್ಚಿಸಿದರು. ಆದರೆ, ವಿರೋಧ ಪಕ್ಷದವರು ನೆಪಕ್ಕೂ ರಾಜ್ಯದ ಜನರ ಸಂಕಷ್ಟಗಳ ಬಗ್ಗೆ ಚಕಾರವನ್ನೇ ಎತ್ತಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ನನ್ನ ರಾಜಕೀಯ ಜೀವನ ತೆರೆದ ಪುಸ್ತಕ. ಪ್ರತಿ ಪುಟಗಳು ಪಾರದರ್ಶಕ ಮತ್ತು ಪ್ರಾಮಾಣಿಕ. ಸಣ್ಣದೊಂದು ಕಪ್ಪು ಚುಕ್ಕೆ ಇಲ್ಲದಂತೆ ರಾಜಕೀಯದ ಪಾವಿತ್ರ್ಯತೆ ಕಾಪಾಡಿಕೊಂಡಿದ್ದೇನೆ. ನನ್ನ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಪ್ರಯತ್ನದಂತೆ ಪ್ರತಿಪಕ್ಷಗಳು ನಡೆದುಕೊಂಡವು” ಎಂದು ಆರೋಪಿಸಿದರು.
“ಬಿಜೆಪಿ, ಜೆಡಿಎಸ್ ಹತಾಶರಾಗಿದ್ದಾರೆ. ನಾವು 135 ಸ್ಥಾನ ಗೆದ್ದ ಬಳಿಕ ರಾಜಕೀಯ ಪ್ರೇರಿತವಾದ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ನಾನು ಎರಡನೇ ಬಾರಿ ಸಿಎಂ ಆಗಿರುವುದು ಅವರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ” ಎಂದರು.
“ಎರಡು ವಾರವೂ ವಾಲ್ಮೀಕಿ ನಿಗಮದ ಒಂದೇ ವಿಚಾರ ಪ್ರಸ್ತಾಪ ಆಗಿದೆ. ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಚಕಾರವನ್ನೇ ಎತ್ತಲಿಲ್ಲ. ಆಡಳಿತ ಪಕ್ಷದ ಶಾಸಕರು ರಾಜ್ಯದ ಜನರ ಸಮಸ್ಯೆಗಳನ್ನು ಪ್ರಸ್ತಾಪಿಸಿ ಚರ್ಚೆ ನಡೆಸಿದರು. ಇದನ್ನೆಲ್ಲಾ ನೋಡಿದಾಗ ಮುಖ್ಯಮಂತ್ರಿಗಳ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಅಧಿವೇಶನವನ್ನು ದುರುಪಯೋಗ ಪಡಿಸಿಕೊಳ್ಳುವುದು ಬಿಟ್ಟರೆ ಬೇರೆ ಜನಪರವಾದ ಉದ್ದೇಶ ವಿರೋಧ ಪಕ್ಷಗಳಿಗೆ ಇರಲಿಲ್ಲ ಎನ್ನುವುದು ಸ್ಪಷ್ಟವಾಗಿದೆ” ಎಂದು ಹರಿಹಾಯ್ದರು.
“ಮೂಡಾ ಹಗರಣ ವಿಚಾರವಾಗಿ ಕಾನೂನು ವಿದ್ಯಾರ್ಥಿಯಾದ ಹಾಗೂ 40 ವರ್ಷಗಳಿಂದ ಸುದೀರ್ಘ ರಾಜಕಾರಣದಲ್ಲಿ ಇರುವ ನನಗೆ ಒಂದು ನಯಾಪೈಸೆಯಷ್ಟು ತಪ್ಪುಗಳೂ ಕಂಡುಬರುತ್ತಿಲ್ಲ. ಇದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಕೂಡ ಮಾಧ್ಯಮದ ಮೂಲಕ ಈ ನಾಡಿನ ಜನರ ಮುಂದೆ ಇಡುವೆ” ಎಂದರು.
“ನನ್ನ ಮೇಲೆ ಆರೋಪ ಕೇಳಿ ಬಂದಿದ್ದರು ಕೂಡ ಈ ವಿಚಾರಗಳನ್ನೆಲ್ಲಾ ಪರಿಶೀಲಿಸಲು ಜಸ್ಟೀಸ್ ಪಿ.ಎನ್. ದೇಸಾಯಿಯವರ ಅಧ್ಯಕ್ಷತೆಯಲ್ಲಿ ವಿಚಾರಣಾ ಆಯೋಗವನ್ನು ರಚಿಸಲಾಗಿದೆ. ವಿಚಾರಣಾ ಆಯೋಗವು ಈ ಕುರಿತು ತನಿಖೆ ಪ್ರಾರಂಭಿಸಿದೆ. ಬಿಜೆಪಿ, ಜೆಡಿಎಸ್‌ನವರು ಮೂಡಾ ವಿಚಾರದಲ್ಲೂ, ವಾಲ್ಮೀಕಿ ಹಗರಣದಲ್ಲೂ ನನ್ನ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಪ್ರಯತ್ನಿಸುತ್ತಿದ್ದಾರೆ” ಎಂದು ಆರೋಪಿಸಿದರು.
ಬಿಜೆಪಿ-ಜೆಡಿಎಸ್ ರಾಜ್ಯದ ಜನರಿಂದ ದಾಖಲೆಗಳನ್ನು ಮರೆ ಮಾಚಿ ಆಡಿದ ಜಂಟಿ ಕಪಟತನಕ್ಕೆ ದಾಖಲೆಗಳ ಮೂಲಕವೇ ಉತ್ತರ ಕೊಡುವೆ ಎಂದು ಮೂಡಾ ಪ್ರಕರಣದ ದಾಖಲೆಗಳನ್ನು ಸಿಎಂ ಬಹಿರಂಗ ಪಡಿಸಿದರು.
“ಆಗ ಮೂಡಾದಲ್ಲಿದ್ದ ರಾಮದಾಸ್, ನಾಗೇಂದ್ರ, ಜಿಟಿ ದೇವೇಗೌಡ ಯಾವ ಪಕ್ಷದವರು? ನಾವೇನು ಇಂಥಾ ಜಾಗದಲ್ಲೇ ನಿವೇಶನ ಕೇಳಿಲ್ಲ. ಬಿಜೆಪಿಯವರ ಅವಧಿಯಲ್ಲೇ ಅವರೇ ನಿರ್ಣಯ ಕೈಗೊಂಡು ಕೊಟ್ಟಿರುವ ನಿವೇಶನ ಇದು. ಮತ್ತೇಕೆ ರಾಜ್ಯದ ಜನತೆಯ ಮುಂದೆ ಸುಳ್ಳು ಹೇಳಿ ಸಿಕ್ಕಿಕೊಳ್ಳುತ್ತಿದ್ದೀರಿ” ಪ್ರಶ್ನಿಸಿದರು.
“ಕುಟುಂಬದಲ್ಲಿ ಅನ್ಯೋನ್ಯರಾಗಿದ್ದವರನ್ನು ಪರಸ್ಪರ ಎತ್ತಿ ಕಟ್ಟಿ ಮನೆ ಮುರುಕ ರಾಜಕಾರಣ ಮಾಡಿದರೆ ರಾಜ್ಯದ ಜನತೆ ಯಾವುದೇ ಕಾರಣಕ್ಕೂ ಸಹಿಸಲ್ಲ. ಇದರಲ್ಲಿ ನನ್ನದಾಗಲಿ, ನಮ್ಮ ಪತ್ನಿಯವರದ್ದಾಗಲಿ, ನಮ್ಮ ಬಾಮೈದುನನ ಪಾತ್ರ ಎಲ್ಲಿದೆ ಹೇಳಿ” ಎಂದರು.
“ವಿವಾದ ಅಲ್ಲದ್ದನ್ನು ಕೃತಕವಾಗಿ ವಿವಾದವನ್ನಾಗಿಸಲು ಬಿಜೆಪಿ-ಜೆಡಿಎಸ್ ಪಾರ್ಲಿಮೆಂಟಿನಲ್ಲಿ ಪ್ರಯತ್ನಿಸುತ್ತಿದ್ದಾರೆ. ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯದ ಏಳೂವರೆ ಕೋಟಿ ಜನರಿಗೆ ಆಗಿರುವ ಅನ್ಯಾಯದ ಬಗ್ಗೆ ನೆಪಕ್ಕೂ ಪಾರ್ಲಿಮೆಂಟಿನಲ್ಲಿ ಪ್ರಶ್ನೆ ಮಾಡಿಲ್ಲ ಏಕೆ? ಇಲ್ಲಿ ವಿಧಾನಸಭೆಯನ್ನು ಅವರ ರಾಜಕಾರಣಕ್ಕೆ ಬಳಸಿಕೊಂಡರು , ಈಗ ಪಾರ್ಲಿಮೆಂಟನ್ನೂ ಬಳಸಿಕೊಳ್ಳುತ್ತಿದ್ದಾರೆ” ಎಂದು ಕಿಡಿಕಾರಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.