Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿದ್ಯಾರ್ಥಿಗಳಿಗೆ ಸಂಸ್ಕಾರ, ಸಂಸ್ಕೃತಿ ಬಹು ಮುಖ್ಯ :ಚವ್ಹಾಣ್
(ರಾಜ್ಯ ) ಜಿಲ್ಲೆ

ವಿದ್ಯಾರ್ಥಿಗಳಿಗೆ ಸಂಸ್ಕಾರ, ಸಂಸ್ಕೃತಿ ಬಹು ಮುಖ್ಯ :ಚವ್ಹಾಣ್

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಂಜಾರಾ ಪ್ರೌಢ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪಾಲಕರ ಸಭೆ

ವಿಜಯಪುರ: ಶಿಕ್ಷಣ ಮತ್ತು ಭೌತಿಕ ಸಂಪತ್ತುಗಳನ್ನು ಪಡೆಯುವುದರ ಜತೆಯಲ್ಲಿ ಸಂಸ್ಕಾರ, ಸಂಸ್ಕೃತಿಗಳ ಮೌಲ್ಯಗಳನ್ನು ಅರಿತು ಜೀವನದಲ್ಲಿ ರೂಢಿಸಲು ಪ್ರಯತ್ನಿಸಿದಲ್ಲಿ ಜೀವನ ಪರಮ ಪಾವನವಾಗುತ್ತದೆ ಎಂದು ಜಿಲ್ಲಾ ಬಂಜಾರಾ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಿ.ಎಲ್.ಚವ್ಹಾಣ್‌ರವರು ಹೇಳಿದರು.
ಶನಿವಾರದಂದು ಬಂಜಾರಾ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ‘ಪಾಲಕರ ಸಭೆ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು. ಪೋಷಕರು ತಮ್ಮ ಮಕ್ಕಳ ಅಂಕ, ರ‍್ಯಾಂಕ್, ಸ್ಥಾನಮಾನ, ಬಿರುದು ಸನ್ಮಾನಗಳ ಕಡೆಗೆ ತಮ್ಮ ಶ್ರದ್ಧೆಯನ್ನು ಕೇಂದ್ರೀಕರಿಸಿ ಒತ್ತಡದ ಬದುಕಿಗೆ ಅವರನ್ನು ತಳ್ಳಿ ಬಿಡುತ್ತಾರೆ. ಶಿಕ್ಷಣ ಸ್ಥಾನಮಾನಗಳ ಜತೆಯಲ್ಲೇ ಮೌಲ್ಯಯುತ ಸಂಸ್ಕಾರಗಳನ್ನು ರೂಢಿಸಲು ಕಲಿಸಿದಲ್ಲಿ ಮಕ್ಕಳಲ್ಲಿ ವ್ಯಕ್ತಿತ್ವದ ಹೊಳಪು ಕಾಣಬಹುದು ಎಂದು ಹೇಳಿದರು.
ಶಾಲೆಯ ಮುಖ್ಯ ಗುರು ಇ.ಡಿ.ಲಮಾಣಿಯವರು ಮಾತನಾಡುತ್ತ, ಮಕ್ಕಳ ಸರ್ವತೋಮುಖ ವಿಕಾಸದಲ್ಲಿ ಶಾಲೆ ಮತ್ತು ಶಿಕ್ಷಕರಷ್ಟೇ ಪಾತ್ರ ಕುಟುಂಬ ಹಾಗೂ ಪಾಲಕರದ್ದು ಎಂಬುದು ಮರೆಯಬಾರದು. ಮಕ್ಕಳ ಶೈಕ್ಷಣಿಕತೆಗೆ ಸಂಬಂಧಿಸಿದ ಅವರ ಸಂದೇಹಗಳನ್ನು ಪರಿಹರಿಸಿಕೊಳ್ಳಬೇಕು. ತಿಂಗಳಿಗೊಮ್ಮೆ ಪೋಷಕರ ಸಭೆಯನ್ನು ನಡೆಸಲಾಗುತ್ತದೆ. ಶೈಕ್ಷಣಿಕ ವಿಷಯಗಳು ಮತ್ತು ತಮ್ಮ ಮಗುವಿನ ತರಗತಿಯಲ್ಲಿನ ವರ್ತನೆಯನ್ನು ತಿಳಿಯಲು ಪೋಷಕರಿಗೆ ಇದೊಂದು ಸದಾವಕಾಶ ಎಂದು ಹೇಳಿದರು.
ಶಿಕ್ಷಕ ಎಸ್.ವಿ.ದೇಶಪಾಂಡೆಯವರು ಮಾತನಾಡುತ್ತ. ಮೊಬೈಲ್‌ನಿಂದ ಮಕ್ಕಳಲ್ಲಿರುವ ಮುಗ್ಧ ಭಾವನೆಗಳು ಕೂಡ ಕಡಿಮೆಯಾಗ್ತಿವೆ. ಮೊಬೈಲ್‌ಗೆ ಅಡಿಕ್ಟ್ ಆಗಿರೋದ್ರಿಂದ ವಿದ್ಯಾಭ್ಯಾಸದಲ್ಲಿ ಹಿಂದುಳಿಯುತ್ತಿದ್ದಾರೆ. ಇದಲ್ಲದೇ ವಿದ್ಯಾರ್ಥಿಗಳು ಸಾಮಾಜಿಕ ಮಾಧ್ಯಮಗಳಿಂದ ದೂರವಿದ್ದಷ್ಟು ಒಳ್ಳೆಯದು. ಮಕ್ಕಳು ವಿದ್ಯಾಭ್ಯಾಸದತ್ತ ಹೆಚ್ಚಿನ ವಲವು ತೋರಬೇಕು ಹೇಳಿದರು.
ಗುರುಮಾತೆ ಜೆ.ಕೆ.ರಾಠೋಡರವರು ಮಾತನಾಡುತ್ತ. ಶಾಲೆಯ ಶಿಕ್ಷಕರು ಬೆಳಗಿನ ಜಾವ ಎದ್ದು ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಮೊಬೈಲ್ ಪೋನ್ ಮೂಲಕ ಕರೆ ಮಾಡಿ ಬೆಳಗಿನ ಓದಿಗೆ ಅಣಿಗೊಳಿಸುವ ಕೆಲಸ ನಿರ್ವಹಿಸುತ್ತಾರೆ. ಮನೆಯ ತಂದೆ-ತಾಯಿ ತಮ್ಮ ಮಗ, ಮಗಳು ಓದುತ್ತಿದ್ದಾರೆಂದು ನಿತ್ಯವೂ ಖಾತರಿ ಮಾಡಬೇಕು ಎಂದು ಹೇಳಿದರು.
ಪಾಲಕ ಪ್ರತಿನಿಧಿ ಐಶ್ವರ್ಯ ಬೆಲ್ಲದರವರು ಮಾತನಾಡುತ್ತ. ಕತ್ತಲಿನಿಂದ ಬೆಳಕಿನೆಡೆಗೆ, ಅಜ್ಞಾನದಿಂದ ಜ್ಞಾನದೆಡೆಗೆ ದಾರಿ ತೋರಿಸುವವನೇ ನೈಜ ಗುರು. ಶಿಕ್ಷಕರು ದೇಶ ಕಟ್ಟುವ, ಮಾನವೀಯ ಮೌಲ್ಯಗಳಿಗೆ ಮನ್ನಣೆ ನೀಡುವ ಶಿಷ್ಯರನ್ನು ರಾಷ್ಟ್ರಕ್ಕೆ ಅರ್ಪಿಸುವ ಕೆಲಸ ಸದಾ ಮಾಡುತ್ತಿದ್ದಾರೆ. ಇದರಿಂದ ಶಿಕ್ಷಕರು ತಮ್ಮ ಶಿಷ್ಯರ ಮನಃ ಪಟಲದಲ್ಲಿ ಸದಾ ನಿಲ್ಲುತ್ತಾರೆ. ಜಗತ್ತಿನ ಶ್ರೇಷ್ಠ ವ್ಯಕ್ತಿಗಳ ನಿರ್ಮಾಣ ಉತ್ತಮ ಶಿಕ್ಷಕರಿಂದಲೇ ಸಾಧ್ಯವಾಯಿತು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ಸ್ವಾಗತ ಎ.ಎಂ.ನಾಗೊಂಡ, ವಂದನಾರ್ಪಣೆಯನ್ನು ಪಿ.ಎಂ.ಕೌಲಗಿ ಹಾಗೂ ನಿರೂಪಣೆಯನ್ನು ಎಸ್.ಕೆ.ಶಿಂಧೆಯವರು ನೆರವೇರಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.