ಸಿಂದಗಿ: ರಾಜ್ಯ ವಿಧಾನಸಭೆ ಚುನಾವಣೆಗೆ ಗುರುವಾರ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ನಾಮಪತ್ರ ಸಲ್ಲಿಕೆ ಮೊದಲ ದಿನ ಬಿಜೆಪಿ, ಕಾಂಗ್ರೆಸ್ ಮತ್ತು ಬಿಎಸ್‌ಪಿ ಯಿಂದ ತಲಾ ಒಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆಯಾಗಿವೆ.
ಪಟ್ಟಣದ ತಹಶೀಲ್ದಾರ ಕಾರ್ಯಾಲಯದ ಸಭಾಭವನದಲ್ಲಿ ೨೦೨೩ರ ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆಯ ವೇಳಾಪಟ್ಟಿಯಂತೆ ಅಭ್ಯರ್ಥಿಗಳು ಚುನಾವಣಾಧಿಕಾರಿ ಸಿದ್ರಾಮ ಮಾರಿಹಾಳ ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದರು. ಸಹಾಯಕ ಚುನಾವಣಾಧಿಕಾರಿಗಳಾದ ತಹಶೀಲ್ದಾರ ನಿಂಗಪ್ಪ ಬಿರಾದಾರ, ತಹಶೀಲ್ದಾರ ಸುರೇಶ ಇದ್ದರು.
ಬಿಜೆಪಿ ಘೋಷಿತ ಅಭ್ಯರ್ಥಿ ಹಾಲಿ ಶಾಸಕ ರಮೇಶ ಭೂಸನೂರ ಅವರು ನಾಮ ಪತ್ರ ಸಲ್ಲಿಸಿದರು.
ಈ ವೇಳೆ ಬಿಜೆಪಿ ಮಂಡಲ ಅಧ್ಯಕ್ಷ ಈರಣ್ಣ ರಾವೂರ, ನ್ಯಾಯವಾದಿ ಅರವಿಂದ ಕನ್ನೂರ, ಪೀರು ಕೆರೂರ ಜಿಪಂ ಮಾಜಿ ಉಪಾಧ್ಯಕ್ಷ ಸಿದ್ದು ಪಾಟೀಲ, ಇದ್ದರು.
ಬಿಎಸ್‌ಪಿ ಘೋಷಿತ ಅಭ್ಯರ್ಥಿ ದಸ್ತಗೀರ ಮುಲ್ಲಾ ಅವರು ನಾಮಪತ್ರ ಸಲ್ಲಿಸಿದರು. ಇದೇ ವೇಳೆ ರಮೇಶ ಖಾನಾಪೂರ, ಚಂದ್ರಶೇಖರ ದೇವೂರ, ರಸುಲಸಾಬ ಆಲಮೇಲ ಇದ್ದರು.
ಕಾಂಗ್ರೆಸ್ ಮುಖಂಡ ಅಶೋಕ ಮನಗೂಳಿ ಸಿಂದಗಿ ಮತಕ್ಷೇತ್ರದಿಂದ ಆಯ್ಕೆ ಬಯಸಿ ನಾಮಪತ್ರ ಸಲ್ಲಿಸಿದ್ದಾರೆ.
ಕಾಂಗ್ರೆಸ್ ಸಿಂದಗಿ ಮತಕ್ಷೇತ್ರಕ್ಕೆ ಇನ್ನೂ ಯಾರಿಗೂ ಟಿಕೆಟ್ ಘೋಷಣೆ ಮಾಡಿಲ್ಲ. ಆದರೂ, ಗುರುವಾರ ಶುಭ ದಿನವಾಗಿರುವ ಹಿನ್ನೆಲೆಯಲ್ಲಿ ಬಿ ಫಾರಂ ಇಲ್ಲದೇ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ನ್ಯಾಯವಾದಿ ಬಿ. ಜಿ. ನೆಲ್ಲಗಿ, ರಮೇಶ ಭಂಟನೂರ, ಎಂ. ಕೆ. ಸೊನ್ನದ ಹಾಗೂ ಸಹಾಯಕ ಚುನಾವಣಾಧಿಕಾರಿ ತಹಸೀಲ್ದಾರ ನಿಂಗಣ್ಣ ಬಿರಾದಾರ, ಸುರೇಶ ಚವಲರ ಉಪಸ್ಥಿತರಿದ್ದರು.