ತಾಳಿಕೋಟಿ: ಪಟ್ಟಣದ ನಿವಾಸಿ ಕುಮಾರಿ ಸಾಕ್ಷಿ ಗುರುಸಂಗಪ್ಪ ಕಟ್ಟಿ ಇವಳು ಶ್ರೀ ಸತ್ಯ ಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯದಿಂದ ಸ್ನಾತಕೋತರ ಪದವಿಯಾದ ಇತಿಹಾಸ ವಿಷಯದಲ್ಲಿ ಚಿನ್ನದ ಪದಕ ಪಡೆದು ತಾಳಿಕೋಟಿಯ ಕೀರ್ತಿ ಹೆಚ್ಚಿಸಿದ್ದಾಳೆ.
ಶ್ರೀ ಸತ್ಯ ಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯದ ಅಧ್ಯಯನ ಕೇಂದ್ರವಾದ ಕಲಬುರ್ಗಿಯ ವಿದ್ಯಾಲಯದಲ್ಲಿ ಅಧ್ಯಯನ ಮಾಡಿದ ಇವಳು ಅಧ್ಯಯನ ಕೇಂದ್ರಕ್ಕೆ ಪ್ರಥಮ ಸ್ಥಾನ ಹಾಗೂ ಇಡೀ ವಿಶ್ವವಿದ್ಯಾಲಯಕ್ಕೆ ಮೊದಲನೇ ಸ್ಥಾನ ಪಡೆಯುವುದರ ಮೂಲಕ ಇತಿಹಾಸ ವಿಷಯದಲ್ಲಿ ಚಿನ್ನದ ಪದಕ ಪಡೆದುಕೊಂಡಿದ್ದಾಳೆ ಶ್ರೀ ಸತ್ಯ ಸಾಯಿ ಮಾನವ ಅಭ್ಯುದಯ ವಿದ್ಯಾಲಯದ ಮುದ್ದೇನಹಳ್ಳಿಯಲ್ಲಿ ನಡೆದ ಘಟಕೋತ್ಸವ ಸಮಾರಂಭದಲ್ಲಿ ಕೇಂದ್ರ ಸಚಿವರಾದ ಹರಿದಿಪ್ ಸಿಂಗ್ ಪುರಿ ಇವರಿಂದ ಪ್ರಶಸ್ತಿಯನ್ನು ಸ್ವೀಕರಿಸಿದರು.
ಈ ಸಮಾರಂಭದಲ್ಲಿ ಶ್ರೀ ಸದ್ಗುರು ಮಧುಸೂದನ್ ಸಾಯಿಯವರು ಹಾಗೂ ವಿಶ್ವವಿದ್ಯಾಲಯದ ಕುಲಪತಿಗಳಾದ ಬಿ ಎನ್. ನರಸಿಂಹಮೂರ್ತಿ ಅವರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

