Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಲಾವೃತ ಜಮೀನು ಬೆಳೆ ಸಮೀಕ್ಷೆಗೆ ಸೂಚನೆ :ಡಿಸಿ ಭೂಬಾಲನ್
(ರಾಜ್ಯ ) ಜಿಲ್ಲೆ

ಜಲಾವೃತ ಜಮೀನು ಬೆಳೆ ಸಮೀಕ್ಷೆಗೆ ಸೂಚನೆ :ಡಿಸಿ ಭೂಬಾಲನ್

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮಟ್ಟಿ: ಆಲಮಟ್ಟಿ ಜಲಾಶಯದಿಂದ ಜಲಾವೃತಗೊಂಡ ಜಮೀನಿನ ಬೆಳೆ ಸಮೀಕ್ಷೆ ನಡೆಸಲು ತಹಶೀಲ್ದಾರ್ ಗೆ ಸೂಚಿಸಿದ್ದು, ಸರ್ಕಾರದಿಂದ ಅಗತ್ಯ ಪರಿಹಾರ ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ತಿಳಿಸಿದರು.
ಆಲಮಟ್ಟಿಯಲ್ಲಿ ಶನಿವಾರ ಸುದ್ದಿಗಾರರಿಗೆ ಮಾಹಿತಿ ನೀಡಿದರು.
    ಈಗ ಜಲಾವೃತಗೊಂಡ ಜಮೀನಿನಲ್ಲಿ ಈಗಾಗಲೇ ಭೂಸ್ವಾಧೀನ ಜಮೀನು ಹೆಚ್ಚಿದೆ, ಕೆಲ ಪ್ರಮಾಣದಲ್ಲಿ ಖಾಸಗಿ ಜಾಗ ಇದೆ, ಆಲಮಟ್ಟಿ ಜಲಾಶಯದಿಂದ ೫ ಲಕ್ಷ ಕ್ಯುಸೆಕ್ ನೀರು ಬಿಟ್ಟಾಗ ಜಿಲ್ಲೆಯ ಕೃಷ್ಣಾ ತೀರದ ೧೭ ಗ್ರಾಮಗಳ ಜನವಸತಿ ಪ್ರದೇಶಕ್ಕೆ ನೀರು ನುಗ್ಗಲಿದೆ. ಸದ್ಯಕ್ಕೆ ಆಲಮಟ್ಟಿಯಿಂದ ೩ ಲಕ್ಷ ಕ್ಯುಸೆಕ್ ನೀರು ಬಿಟ್ಟ ಕಾರಣ ಅಪಾಯದ ಮುನ್ಸೂಚನೆ ಇಲ್ಲ ಎಂದರು.
     ಜನವಸತಿ ಪ್ರದೇಶಕ್ಕೆ ನೀರು ಹೊಕ್ಕರೆ, ಕಾಳಜಿ ಕೇಂದ್ರ ತೆರೆಯಲು ಶಾಲೆ, ಸಮುದಾಯ ಭವನವನ್ನು ಗುರುತಿಸಲಾಗಿದೆ, ಗ್ರಾಮ ಆಡಳಿತಾಧಿಕಾರಿಯ ಮೂಲಕ ಗ್ರಾಮಗಳಲ್ಲಿ ಡಂಗುರ ಸಾರಿಸಲಾಗಿದ್ದು, ನಿರಂತರ ಮುನ್ಸೂಚನೆ ನೀಡಲಾಗುತ್ತದೆ, ಮುನ್ಸೂಚನೆಗೆ ಜನ ಸ್ಪಂದಿಸಬೇಕು ಎಂದರು.
೨೦೧೯ ರಲ್ಲಿ ಪ್ರವಾಹ ಸ್ಥಿತಿ ಉಂಟಾದಾಗ ಮಸೂತಿ ಗ್ರಾಮದ ಸುಮಾರು ೨೦ ಕ್ಕೂ ಅಧಿಕ ಮನೆಗಳು ಜಲಾವೃತಗೊಂಡಿದ್ದವು,  ಸರ್ಕಾರದ ಯಾವುದಾದರೂ ಯೋಜನೆಯಲ್ಲಿ ಅವರಿಗೆ ಮನೆ ಹಾಕಲು ನಿಡಗುಂದಿ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿಗೆ ಸೂಚಿಸಿದ್ದೇನೆ ಎಂದರು.
    ೨೦೨೪ ರ ಬೇಸಿಗೆಯಲ್ಲಿ ಜಿಲ್ಲೆಯಲ್ಲಿ ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆಯಾಗದಂತೆ, ಕಂದಾಯ, ಕೆಬಿಜೆಎನ್‌ಎಲ್, ಗ್ರಾಮೀಣಾಭಿವೃದ್ಧಿ ಇಲಾಖೆ ಸೇರಿ ಕೆಲಸ ಮಾಡಿದ್ದೇವೆ, ಮೇ ತಿಂಗಳಲ್ಲಿ ಕಾಲುವೆಯ ಕೊನೆ ಹಂತದವರೆಗೂ ನೀರು ಹರಿಸಿ ಆ ಭಾಗದ ಕೆರೆಗಳನ್ನು ಭರ್ತಿ ಮಾಡಿದ್ದೇವೆ ಎಂದರು.
ಈ ಬಾರಿ ಮುಂಗಾರು ಮಳೆ ಉತ್ತಮವಾಗಿದ್ದು, ಒಂದು ತಿಂಗಳು ಮುಂಚಿತವಾಗಿಯೇ ಜಲಾಶಯ ಬಹುತೇಕ ಭರ್ತಿಯಾಗಿದೆ, ಜನರು ನೀರನ್ನು ಹಿತಮಿತವಾಗಿ ಬಳಸಬೇಕು ಎಂದರು.
     ತಹಶೀಲ್ದಾರ್ ಎ.ಡಿ. ಅಮರಾವಡಗಿ, ಜಿ.ಪಂ.ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ ಸೇರಿದಂತೆ ಕೆಬಿಜೆಎನ್‌ಎಲ್, ಕೃಷಿ, ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ಇದ್ದರು.
ಜಲಾಶಯ ಮಟ್ಟ: ಜಲಾಶಯದಲ್ಲಿ ೫೧೬.೧೪ ಮೀ ವರೆಗೆ ನೀರು ಇದೆ. ೧೨೩ ಟಿ.ಎಂ.ಸಿ. ಗರಿಷ್ಠ ಸಂಗ್ರಹದ ಆಲಮಟ್ಟಿ ಜಲಾಶಯದಲ್ಲಿ ೭೪.ಟಿ.ಎಂ.ಸಿ ನೀರು ಸಂಗ್ರಹವಿದೆ. ಜಲಾಶಯಕ್ಕೆ ೨.೩೮ಲಕ್ಷ ಕ್ಯುಸೆಕ್ ಒಳಹರಿವು ಇದೆ. ೩.ಲಕ್ಷ ಕ್ಯುಸೆಕ್ ಹೊರಹರಿವು ಇದೆ.
೨೫೫ ಮೆಗಾವಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.