ಕಾರ್ಯನಿರತ ಪತ್ರಕರ್ತರ ಸಂಘ, ವಿಜಯಪುರ ಜಿಲ್ಲಾ ಘಟಕದಿಂದ ಆಯೋಜನೆ
ವಿಜಯಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ ಹಾಗೂ ಪತ್ರಕರ್ತರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಜು. ೨೮ರಂದು ಮಧ್ಯಾಹ್ನ ೩ ಗಂಟೆಗೆ ನಗರದ ಪೊಲೀಸ್ ಕವಾಯತು ಮೈದಾನ ಎದುರಿಗಿರುವ ಪೊಲೀಸ್ ಸಮುದಾಯ ಭವನದಲ್ಲಿ ನಡೆಯಲಿದೆ.
ಬೃಹತ್ ಕೈಗಾರಿಕೆ, ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಕಾರ್ಯಕ್ರಮ ಉದ್ಘಾಟಿಸುವರು. ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಮತ್ತು ಎಪಿಎಂಸಿ ಸಚಿವ ಶಿವಾನಂದ ಪಾಟೀಲ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸುವರು. ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪತ್ರಕರ್ತರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡುವರು.
ಈ ಸಮಾರಂಭಕ್ಕೆ ವಿಶೇಷ ಆಹ್ವಾನಿತರಾಗಿ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಹಾಗೂ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಆಗಮಿಸುವರು. ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಟಿ. ಚೂರಿ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದ ರಮೇಶ ಜಿಗಜಿಣಗಿ, ಶಾಸಕರಾದ ಯಶವಂತರಾಯಗೌಡ ಪಾಟೀಲ, ಸಿ.ಎಸ್. ನಾಡಗೌಡ, ವಿಠ್ಠಲ ಕಟಕದೊಂಡ, ರಾಜುಗೌಡ ಪಾಟೀಲ, ಅಶೋಕ ಮನಗೂಳಿ, ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ, ಹಣಮಂತ ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಪಾಟೀಲ, ಪಿ.ಎಚ್. ಪೂಜಾರ, ಪಾಲಿಕೆ ಮೇಯರ್ ಮಹೆಜಬೀನ್ ಹೊರ್ತಿ, ನಗರಾಭಿವೃದ್ಧಿ ಪ್ರಾಕಾರದ ಅಧ್ಯಕ್ಷ ಕನ್ನಾನ್ ಮುಶ್ರೀಫ್ ಆಗಮಿಸುವರು.
ವಚನಪಿತಾಮಹ ಡಾ. ಫ.ಗು. ಹಳಕಟ್ಟಿ ಸಂಶೋಧನಾ ಕೇಂದ್ರದ ಕಾರ್ಯದರ್ಶಿ ಡಾ. ಎಂ.ಎಸ್. ಮದಭಾವಿ ಪತ್ರಿಕಾ ಕ್ಷೇತ್ರಕ್ಕೆ ವಚನಪಿತಾಮಹ ಡಾ. ಫ.ಗು. ಹಳಕಟ್ಟಿ ಕೊಡುಗೆ ಕುರಿತು ಉಪನ್ಯಾಸ ನೀಡುವರು.
ಅತಿಥಿಗಳಾಗಿ ಜಿಲ್ಲಾಕಾರಿ ಟಿ. ಭೂಬಾಲನ್, ಜಿಪಂ ಸಿಇಒ ರಿಷಿ ಆನಂದ, ಎಸ್ಪಿ ಋಷಿಕೇಶ ಭಗವಾನ್, ಪತ್ರಕರ್ತರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ, ರಾಜ್ಯ ಉಪಾಧ್ಯಕ್ಷ ಪುಂಡಲೀಕ ಬಾಳೋಜಿ ಹಾಗೂ ಚಾಣಕ್ಯ ಕರಿಯರ್ ಅಕಾಡೆಮಿ ಮುಖ್ಯಸ್ಥ ಎನ್.ಎಂ. ಬಿರಾದಾರ ಆಗಮಿಸುವರು.
ಸಂಘದ ಜಿಲ್ಲಾ ಹಾಗೂ ತಾಲೂಕು ಘಟಕಗಳ ಪದಾಕಾರಿಗಳು, ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಟಿ. ಚೂರಿ ಹಾಗೂ ಪ್ರಧಾನ ಕಾರ್ಯದರ್ಶಿ ಮೋಹನ ಪಿ. ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೆ.ವಿ.ಪ್ರಭಾಕರ
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರು

ಶ್ರೀ ಶಿವಾನಂದ ತಗಡೂರ
ರಾಜ್ಯಾಧ್ಯಕ್ಷರು, ಕಾನಿಪ ಸಂಘ, ಬೆಂಗಳೂರು

