ವಿಜಯಪುರ ನಗರ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸನಗೌಡ ರಾ ಪಾಟೀಲ ಯತ್ನಾಳ ಅವರ, ಚುನಾವಣಾ ಪ್ರಚಾರ ಕಾರ್ಯಾಲಯವನ್ನು ಗುರುವಾರ ಉದ್ಘಾಟಿಸಲಾಯಿತು.
ಹಿಂದೂಗಳ ಆರಾಧ್ಯದೈವ ಗೋ ಮಾತೆಗೆ ಪೂಜೆ ಸಲ್ಲಿಸಿ, ಹಣ್ಣು, ಸಿಹಿ ತಿನಿಸಿ, ಗಣೇಶನಿಗೆ ಪೂಜೆ ಸಲ್ಲಿಸುವ ಮೂಲಕ ಪ್ರಚಾರ ಕಾರ್ಯಾಲಯದಲ್ಲಿ ಕಾರ್ಯ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು.
ಬಾಳೆದಿಂಡು, ತೆಂಗಿನ ಪರಕಿ, ಹೂಗಳಿಂದ ಅಲಂಕಾರಗೊಳಿಸಲಾದ ಕಾರ್ಯಾಲಯ ಕೇಸರಿಮಯವಾಗಿ ಕಂಗೋಳಿಸುತ್ತಿದೆ. ರಂಗೋಲಿಯಲ್ಲಿ ಅರಳಿದ ಕಮಲದ ಹೂ ಕಣ್ಮನ ಸೆಳೆಯಿತು.
ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ, ವಿಡಿಎ ಅಧ್ಯಕ್ಷ ಪರಶುರಾಮ ರಜಪುತ, ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಚಂದ್ರಶೇಖರ ಕವಟಗಿ, ಮುಖಂಡರಾದ ವಿವೇಕಾನಂದ ಡಬ್ಬಿ, ಪ್ರಕಾಶ ಅಕ್ಕಲಕೋಟ, ಬಸವರಾಜ ಬಿರಾದಾರ, ಶಿವರುದ್ರ ಬಾಗಲಕೋಟ, ಮಳುಗೌಡ ಪಾಟೀಲ ಸೇರಿದಂತೆ ಮಹಾನಗರ ಪಾಲಿಕೆ ಸದಸ್ಯರು, ಕಾರ್ಯಕರ್ತರು, ಅಭಿಮಾನಿಗಳು ಮತ್ತಿತರರು ಇದ್ದರು.
Related Posts
Add A Comment