ಬಬಲೇಶ್ವರ: ನಿರುದ್ಯೋಗಿ ಯುವಕ ಯುವತಿಯರು ಉದ್ಯೋಗ ಮೇಳದಲ್ಲಿ ಭಾಗವಹಿಸಿ ಉದ್ಯೋಗ ಮೇಳದ ಪ್ರಯೋಜನ ಪಡೆಯಬೇಕೆಂದು ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಕೆ.ಬಿ.ಕುಲಕರ್ಣಿ ಸಲಹೆ ನೀಡಿದರು.
ತಾಲ್ಲೂಕಿನ ಮಮದಾಪುರ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಳೆಯ ವಿದ್ಯಾರ್ಥಿ ಸಂಘ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಯೋಗದೊಂದಿಗೆ ನಡೆದ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಗ್ರಾಮೀಣ ಭಾಗದಲ್ಲಿ ಅಪರೂಪಕ್ಕೆ ನಡೆಯುವಂತಹ ಇಂತಹ ಉದ್ಯೋಗ ಮೇಳದಲ್ಲಿ ಸುತ್ತಮುತ್ತಲಿನ ಗ್ರಾಮಗಳ ಯುವಕ ಯುವತಿಯರು ಭಾಗವಹಿಸಬೇಕು ಎಂದರು.
ಸಾನ್ನಿಧ್ಯ ವಹಿಸಿ ಮಾತನಾಡಿದ ಅಭಿನವ ಮುರುಗೇಂದ್ರ ಮಹಾಸ್ವಾಮೀಜಿ, ಗ್ರಾಮ ಪಂಚಾಯತಿ ಅಧ್ಯಕ್ಷ ಮಲ್ಲಿಕಾರ್ಜುನ ಗಂಗೂರ, ಲಕ್ಷ್ಮಣ ತೇಲಿ, ಸದಾಶಿವ ಕಾಖಂಡಕಿಮಠ, ಕೆ. ಡಿ. ತೇಲಿ, ರಾಮು ನಾಯಕ, ಲಕ್ಷ್ಮಣ ಭಜಂತ್ರಿ, ಶಾಂತಾಬಾಯಿ ಹವಾಲ್ದಾರ ಇದ್ದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಸಿ.ಬಿ ಕುಂಬಾರ ಮಾತನಾಡಿ ವಿದ್ಯಾರ್ಥಿಗಳು ಉದ್ಯೋಗ ಕೌಶಲಗಳನ್ನು ಬೆಳೆಸಿಕೊಳ್ಳಲು ಸಲಹೆ ನೀಡಿದರು.
ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಗುರುಪಾದಯ್ಯ ಹಿರೇಮಠ ಮಾತನಾಡಿ ಪ್ರತಿವರ್ಷ ಪದವಿ ಪಡೆಯುತ್ತಿರುವವರ ಸಂಖ್ಯೆ ಹೆಚ್ಚಾಗಿದ್ದು ಪ್ರತಿಯೊಬ್ಬರಿಗೆ ಸರ್ಕಾರಿ ಕೆಲಸ ಸಿಗುವುದು ಕಷ್ಟವಾಗಿದೆ. ನಿಮ್ಮಲ್ಲಿರುವ ಜ್ಞಾನ ಮತ್ತು ಕೌಶಲ್ಯಗಳಿಂದ ಇಂತಹ ಉದ್ಯೋಗ ಮೇಳದ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದ ಕಾಲೇಜಿನ ಪ್ರಾಂಶುಪಾಲ ಸರೋಜಿನಿ ಬಿರಾದಾರ ಉದ್ಯೋಗ ಮೇಳಕ್ಕೆ ಆಗಮಿಸಿದ ವಿವಿಧ ಕಂಪನಿಗಳ ಪ್ರತಿನಿಧಿಗಳಿಗೆ ಹಾಗೂ ಉದ್ಯೋಗ ಅನ್ವೇಷಣೆಗಾಗಿ ಬಂದಿದ್ದ ಯುವಕ ಯುವತಿಯರಿಗೆ ಶುಭ ಕೋರಿದರು. ಈ ಉದ್ಯೋಗ ಮೇಳದಲ್ಲಿ ಒಟ್ಟು 500 ಹುದ್ದೆಗಳನ್ನು ಭರ್ತಿ ಮಾಡಲು 11 ಕಂಪನಿಗಳು ಪಾಲ್ಗೊಂಡು 242 ಅಭ್ಯರ್ಥಿಗಳು ನೋಂದಣಿ ಮಾಡಿಸಿದ್ದರು. ಈ ಪೈಕಿ 49 ಜನ ಉದ್ಯೋಗ ಪಡೆದುಕೊಂಡರು.
Subscribe to Updates
Get the latest creative news from FooBar about art, design and business.
Related Posts
Add A Comment

