ವಿಜಯಪುರದಲ್ಲಿ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ
ವಿಜಯಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ವಿಜಯಪುರ ಜಿಲ್ಲಾ ಘಟಕದಿಂದ ಜಿಲ್ಲೆಯ ಪತ್ರಕರ್ತರ ಪ್ರತಿಭಾವಂತ ಮಕ್ಕಳಿಗೆ ಹೃದಯಸ್ಪರ್ಷಿಯಾಗಿ ಸನ್ಮಾನಿಸಿ ಗೌರವಿಸಲಾಯಿತು.
ರವಿವಾರ ಸಂಜೆ ನಗರದ ಪೊಲೀಸ್ ಕವಾಯತು ಮೈದಾನದ ಎದುರಿಗಿರುವ ಪೊಲೀಸ್ ಸಮುದಾಯ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಪತ್ರಿಕಾ ದಿನಾಚರಣೆ, ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಸಾಧಕರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
ಈ ಭವ್ಯ ಸಮಾರಂಭದಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 80 ಕ್ಕಿಂತ ಹೆಚ್ಚು ಅಂಕ ಪಡೆದ 20 ಜನ ಪತ್ರಕರ್ತರ (ಸಂಘದ ಸದಸ್ಯರ) ಮಕ್ಕಳಿಗೆ ಶಾಲು ಹೊದಿಸಿ ಪ್ರಮಾಣ ಪತ್ರ, ಸ್ಮರಣಿಕೆ, ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸಲಾಯಿತು.
ಸಸಿಗೆ ನೀರೆರೆಯುವ ಮೂಲಕ ಸಮಾರಂಭವನ್ನು ಉದ್ಘಾಟಿಸಿದ ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಅವರು ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರ ಭವಿಷ್ಯ ಉಜ್ವಲವಾಗಲೆಂದು ಶುಭ ಹಾರೈಸಿದರು.
ಪರೀಕ್ಷೆಯಲ್ಲಿ ಮಾಡಿದ ಉತ್ತಮ ಸಾಧನೆಗೆ ಭವ್ಯ ಸಮಾರಂಭದ ವೇದಿಕೆಯಲ್ಲಿ ಮಂತ್ರಿ-ಮಹೋದಯರು ಹಾಗೂ ಗಣ್ಯರ ಸಮ್ಮುಖದಲ್ಲಿ ತಮಗೆ ಸನ್ಮಾನ ಗೌರವ ದೊರೆತಿದ್ದಕ್ಕೆ ಪ್ರತಿಭಾ ಪುರಸ್ಕಾರಗೊಂಡ ವಿದ್ಯಾರ್ಥಿಗಳು ತುಂಬಾ ಖುಷಿಪಟ್ಟರೆ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸಂಘದಿಂದ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಿ ಪ್ರೋತ್ಸಾಹಿಸಿದ್ದು ಪತ್ರಕರ್ತರ ಸಂಘದ ಎಲ್ಲ ಪದಾಧಿಕಾರಿಗಳ ಮುಖದಲ್ಲಿ ಧನ್ಯತೆಯ ಮಂದಹಾಸ ಮೂಡಿಸಿತು.
ಇದೇ ಸಂದರ್ಭದಲ್ಲಿ ನಗರ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಅವರು ಜಿಲ್ಲೆಯ 31 ಜನ ಪತ್ರಕರ್ತರಿಗೆ ಕಾನಿಪ ಸಂಘದ ಜಿಲ್ಲಾ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.
ವಚನಪಿತಾಮಹ ಡಾ. ಫ.ಗು. ಹಳಕಟ್ಟಿ ಸಂಶೋಧನಾ ಕೇಂದ್ರದ ಕಾರ್ಯದರ್ಶಿ ಡಾ. ಎಂ.ಎಸ್. ಮದಭಾವಿ ವಿಶೇಷ ಉಪನ್ಯಾಸ ನೀಡಿದರು.
ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಟಿ.ಚೂರಿ ಅಧ್ಯಕ್ಷತೆಯಲ್ಲಿ ನಡೆದ ಈ ಸಮಾರಂಭದಲ್ಲಿ ವಿಶೇಷ ಆಹ್ವಾನಿತರಾಗಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ, ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ, ಅತಿಥಿಗಳಾಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕನ್ನಾನ್ ಮುಶ್ರೀಫ್, ಜಿಲ್ಲಾಧಿಕಾರಿ ಟಿ. ಭೂಬಾಲನ್, ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ಭಗವಾನ್, ಮಹಾನಗರಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಪತ್ರಕರ್ತರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ, ರಾಜ್ಯ ಉಪಾಧ್ಯಕ್ಷ ಪುಂಡಲೀಕ ಬಾಳೋಜಿ ಹಾಗೂ ಚಾಣಕ್ಯ ಕರಿಯರ್ ಅಕಾಡೆಮಿ ಮುಖ್ಯಸ್ಥ ಎನ್.ಎಂ. ಬಿರಾದಾರ ಭಾಗವಹಿಸಿದ್ದರು.
ಕಾನಿಪ ಸಂಘದ ರಾಜ್ಯ ಸಮಿತಿ ಸದಸ್ಯ ಡಿ.ಬಿ.ವಡವಡಗಿ ನಿರೂಪಿಸಿದರು. ಜಿಲ್ಲಾ ಉಪಾಧ್ಯಕ್ಷ ಇಂದುಶೇಖರ ಮಣೂರ ವಂದಿಸಿದರು.
ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ, ಜಿಲ್ಲಾ ಪ್ರ.ಕಾರ್ಯದರ್ಶಿ ಮೋಹನ ಕುಲಕರ್ಣಿ, ಐಎಫ್ ಡಬ್ಲ್ಯೂಜೆ ರಾಷ್ಟ್ರೀಯ ಮಂಡಳಿ ಸದಸ್ಯ ಮಹೇಶ ಶೆಟಗಾರ, ರಾಜ್ಯ ಸಮಿತಿ ಸದಸ್ಯ ಕೆ.ಕೆ.ಕುಲಕರ್ಣಿ, ವಿಶೇಷ ಆಹ್ವಾನಿತರಾದ ಕೌಶಲ್ಯ ಮನ್ನಾಳಕರ, ಸಂಘದ ಜಿಲ್ಲಾ ಪದಾಧಿಕಾರಿಗಳಾದ ಪ್ರಕಾಶ ಬೆಣ್ಣೂರ, ಅವಿನಾಶ ಬಿದರಿ, ಅಶೋಕ ಯಡಳ್ಳಿ, ಗುರುರಾಜ ಗದ್ದನಕೇರಿ, ಬಸವರಾಜ ಉಳ್ಳಾಗಡ್ಡಿ,
ಫಿರೋಜ್ ರೋಜಿನದಾರ, ವಿಜಯ ಸಾರವಾಡ, ವಿನೋದ ಸಾರವಾಡ, ಶಕೀಲ ಬಾಗಮಾರೆ, ಮಲ್ಲು ಕೆಂಭಾವಿ, ರಾಹುಲ ಆಪ್ಟೆ, ಗೋಪಾಲ ಕನಿಮಣಿ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರು, ನಾಮನಿರ್ದೇಶಿತ ಸದಸ್ಯರು, ಜಿಲ್ಲೆಯ ವಿವಿಧ ತಾಲೂಕು ಘಟಕಗಳ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

