Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಿಜವಾದ ವಿದ್ಯೆಯಿಂದ ಬದುಕು ಪರಿವರ್ತನೆ ಸಾಧ್ಯ :ಅಮೃತಾನಂದ ಶ್ರೀ
(ರಾಜ್ಯ ) ಜಿಲ್ಲೆ

ನಿಜವಾದ ವಿದ್ಯೆಯಿಂದ ಬದುಕು ಪರಿವರ್ತನೆ ಸಾಧ್ಯ :ಅಮೃತಾನಂದ ಶ್ರೀ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಜ್ಞಾನ ಅಸೀಮವಾದುದು. ಜ್ಞಾನವೇ ನಿಜವಾದ ಪ್ರಕಾಶ. ಜೀವನ ಪೂರ್ತಿ ವಿದ್ಯೆ ಸಂಗ್ರಹಿಸಿ ಸಮಾಜದ ಒಳಿತಿಗೆ ಬಳಸಬೇಕು. ನಿಜವಾದ ವಿದ್ಯೆಯಿಂದ ಬದುಕು ಪರಿವರ್ತನೆ ಆಗಲು ಸಾಧ್ಯ ಎಂದು ಕಾತ್ರಾಳ-ಬಾಲಗಾಂವ ಗುರುದೇವಾಶ್ರಮದ ಅಮೃತಾನಂದ ಸ್ವಾಮೀಜಿ ಹೇಳಿದರು.
ಅವರು ಇಟ್ಟಂಗಿಹಾಳ ರಸ್ತೆಯಲ್ಲಿರುವ ಏಕ್ಸಲೆಂಟ್ ಶಾಲೆಯಲ್ಲಿ ರವಿವಾರದಂದು ಭಾರತೀಯ ಶಿಕ್ಷಣ ಮಂಡಲ ಕರ್ನಾಟಕ ಉತ್ತರ ಪ್ರಾಂತ ಹಾಗೂ ಏಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಜರುಗಿದ ವಿದ್ಯಾಲಯ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಗತಿವಿಧಿ, ಪ್ರಾಂತ ಮಟ್ಟದ ಶಿಕ್ಷಕ ಸ್ವಾಧ್ಯಾಯ ಸಮಾರೋಪ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.
ಶಿಕ್ಷಕರು ಪ್ರಸನ್ನತೆಯಿಂದ ಮಕ್ಕಳಲ್ಲಿ ಹೃದಯವೈಶ್ಯಾಲ್ಯತೆ ಬೆಳೆಸಿ,ಅವರಿಗೆ ಮೌಲ್ಯಾಧಾರಿತ ಶಿಕ್ಷಣ ನೀಡಲು ಮುಂದಾಗಬೇಕು ಎಂದು ಹೇಳಿದರು. 
ನಾಗಪುರದ ಭಾರತೀಯ ಶಿಕ್ಷಣ ಮಂಡಲದ ಅಖಿಲ ಭಾರತೀಯ ಸಂಘಟನಾ ಮಂತ್ರಿ ಬಿ ಆರ್ ಶಂಕರಾನಂದ
ಮಾತನಾಡಿ, ದೇಶದ ಪ್ರಗತಿಯ ಗುಣಮಟ್ಟ ನಿರ್ಧರಿಸಲು ಶಿಕ್ಷಣ ಅವಶ್ಯ. ಶಿಕ್ಷಕ ಆಚಾರ್ಯರಾಗಿ, ಋಷಿಯಾಗಿ ಮಕ್ಕಳ ಬದುಕನ್ನು ಕಟ್ಟಲು ಸಜ್ಜಾಗಬೇಕು. ಶಿಕ್ಷಕರು ದೇಶದ ಭವಿಷ್ಯ ಬರೆಯಬಲ್ಲರು.ಹಾಗಾಗಿ ಗುರುವಿಗೆ ಮಹತ್ತರ ಸ್ಥಾನವಿದೆ
ಎಂದು ಹೇಳಿದರು.
ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೋ. ತುಳಸಿಮಾಲ ಮಾತನಾಡಿ,
ಮಗುವಿನ ವ್ಯಕ್ತಿತ್ವ ಹಾಗೂ ದೇಶದ ನಿರ್ಮಾಣ ಮಾಡುವದೇ ಶಿಕ್ಷಣದ ಪ್ರಮುಖ ಉದ್ದೇಶ. ದೇಶದ ಸುಸ್ಥಿರ ಅಭಿವೃದ್ಧಿಗೆ ಮೌಲ್ಯಯುತ ಶಿಕ್ಷಣ ಅಗತ್ಯ.ಕಲಿತ ಜ್ಞಾನವನ್ನು ವಿವೇಕವಾಗಿ ಬಳಸಿದಾಗ ಸುಭದ್ರ ರಾಷ್ಟ್ರ ನಿರ್ಮಾಣ ಸಾಧ್ಯ ಎಂದು ಹೇಳಿದರು.
ಪ್ರಾಂತ ಅಧ್ಯಕ್ಷ ಡಾ.ಬಸವರಾಜ ಅನಾಮಿ ಅಧ್ಯಕ್ಷತೆ ವಹಿಸಿದ್ದರು. ಏಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಸವರಾಜ ಕೌಲಗಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಡಾ ಮೀನಾ ಚಂದಾವರ್ಕರ್,ಪ್ರೋ ರಾಜಕುಮಾರ ಮಾಲಿಪಾಟೀಲ, ವಿನಾಯಕ ಗ್ರಾಮಪುರೋಹಿತ, ಪ್ರೊ ಉದಯಕುಮಾರ ಕುಲಕರ್ಣಿ, ಪ್ರೊ ಅಶೋಕ ಸುರಪುರ, ಜಿಲ್ಲಾ ಕಾರ್ಯದರ್ಶಿ ಮಲ್ಲಿಕಾರ್ಜುನ ಗುಡ್ಡದ, ಜಿಲ್ಲಾ ಸಹ ಕಾರ್ಯದರ್ಶಿ ಸಂತೋಷ ಬಂಡೆ, ಮಲ್ಲಿಕಾರ್ಜುನ ಪಾಟೀಲ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಜಿಲ್ಲಾಧ್ಯಕ್ಷ ಬಿ ಎಸ್ ಬಾಪಗೊಂಡ ಸ್ವಾಗತಿಸಿ, ಪರಿಚಯಿಸಿದರು.ಡಾ ಎಸ್ ಟಿ ಬೋಳರೆಡ್ಡಿ ನಿರೂಪಿಸಿದರು.
ಪ್ರಾಂತ ಸಹ ಕಾರ್ಯದರ್ಶಿ ಸಿದ್ದು ಮದರಖಂಡಿ ವಂದಿಸಿದರು. 3 ದಿನದ ಶಿಕ್ಷಕ ಸ್ವಾಧ್ಯಾಯದಲ್ಲಿ ಭಾಗವಹಿಸಿದ 200 ಶಿಕ್ಷಕರಿಗೆ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.