Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬೇಸರ & ದುಃಖ ಹೋಗಲಾಡಿಸುವ ಸಾಧನ ಹಾಸ್ಯ :ಡಾ.ಸುಧಾಕುಮಾರಿ
(ರಾಜ್ಯ ) ಜಿಲ್ಲೆ

ಬೇಸರ & ದುಃಖ ಹೋಗಲಾಡಿಸುವ ಸಾಧನ ಹಾಸ್ಯ :ಡಾ.ಸುಧಾಕುಮಾರಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಚಡಚಣ: ವ್ಯಕ್ತಿಯ ಜೀವನದ ಪ್ರತಿ ಹಂತದಲ್ಲೂ ಹಾಸ್ಯ ಹಾಸುಹೊಕ್ಕಾಗಿದೆ. ಬೇಸರ ಹಾಗೂ ದುಃಖವನ್ನು ಹೋಗಲಾಡಿಸುವ ಸಾಧನವೆಂದರೆ ಹಾಸ್ಯ. ಹಾಸ್ಯವು ಸಾಹಿತ್ಯದ ಒಂದು ಪ್ರಕಾರವಾಗಿದ್ದು ಕನ್ನಡದ ಅನೇಕ ಸಾಹಿತಿಗಳು ಹಾಸ್ಯದ ಮೂಲಕ ಸಾಹಿತ್ಯದ ಮೆರಗನ್ನು ಹೆಚ್ಚಿಸಿದ್ದಾರೆ. ಬೀಚಿ, ಬೆಟಗೇರಿ ಕೃಷ್ಣಶರ್ಮ, ಎಂ. ಎಸ್. ಸುಂಕಾಪುರ ಮುಂತಾದವರ ಹಾಸ್ಯ ಸಾಹಿತ್ಯ ಕನ್ನಡ ಸಾಹಿತ್ಯದ ಕೊಡುಗೆಯಾಗಿದೆ ಎಂದು ದೆಹಲಿ ವಿಶ್ವವಿದ್ಯಾಲಯದ ಆಧುನಿಕ ಭಾರತೀಯ ಭಾಷಾ ಹಾಗೂ ಸಾಂಸ್ಕೃತಿಕ ಅಧ್ಯಯನ ವಿಭಾಗದ ಕನ್ನಡ ಸಹಾಯಕ ಪ್ರಾಧ್ಯಾಪಕಿ ಡಾ. ಸುಧಾಕುಮಾರಿ ಅಭಿಪ್ರಾಯಪಟ್ಟರು.
ಪಟ್ಟಣದ ಶ್ರೀ ಸಂಗಮೇಶ್ವರ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಕನ್ನಡ ಹಾಗೂ ಹಿಂದಿ ವಿಭಾಗಗಳ ಅಡಿಯಲ್ಲಿ ಹಮ್ಮಿಕೊಂಡಿದ್ದ ‘ಕನ್ನಡ ಮತ್ತು ಹಿಂದಿ ಸಾಹಿತ್ಯದಲ್ಲಿ ಹಾಸ್ಯ-ವ್ಯಂಗ್ಯ’ ವಿಷದ ಕುರಿತು ಒಂದು ದಿನದ ರಾಷ್ಟ್ರೀಯ ವಿಚಾರ ಸಂಕೀರ್ಣವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಕನ್ನಡದಲ್ಲಿ ರಾಮಾಯಣ, ಮಹಾಭಾರತ, ಪಂಪ, ರನ್ನರ ಕಾವ್ಯಗಳಲ್ಲಿ ಹಾಸ್ಯದ ಪ್ರಸಂಗಗಳು ಬರುತ್ತವೆಯಾದರೂ ಹಾಸ್ಯ ಪ್ರಕಾರದ ಸುವರ್ಣ ಯುಗ ಆರಂಭವಾದದ್ದು 20ನೆಯ ಶತಮಾನದಲ್ಲಿ ಮುದ್ದಣ್ಣ ಮನೋರಮೆಯರ ಹಾಸ್ಯ ಸಂಭಾಷಣೆ ಬರೆದ ಮುದ್ದಣ್ಣ, ಟಿ. ಪಿ. ಕೈಲಾಸಂ, ಅ. ರಾ. ಮಿತ್ರ, ಕುವೆಂಪು, ಪುತೀನ, ಪರ್ವತವಾಣಿ ಮೊದಲಾದವರು ಹಾಸ್ಯ ಸಾಹಿತ್ಯ ರಚಿಸಿ ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ಹಾಸ್ಯದ ಹೊಲನ್ನೇ ಹರಿಸಿದರು ಎಂದು ಹೇಳಿದರು.
ವಿಚಾರ ಸಂಕೀರ್ಣವನ್ನು ಉದ್ಘಾಟಿಸಿದ ಶ್ರೀ ಸಂಗಮೇಶ್ವರ ಶಿಕ್ಷಣ ಸಂಸ್ಥೆಯ ನಿರ್ದೇಶಕ ಬಸವರಾಜ ಯಂಕಂಚಿ ಮಾತನಾಡಿ, ನಿತ್ಯ ಬದುಕಿನಲ್ಲಿ ನಾವು ಅನುಭವಿಸಿದ ಹಾಸ್ಯವೇ ಮುಂದೆ ಹಾಸ್ಯ ಸಾಹಿತ್ಯವಾಗಿ ಬೆಳೆದು ಬಂದಿದೆ. ವ್ಯಂಗ್ಯದ ಮೂಲಕ ವ್ಯಕ್ತಿಯ ಸಮಾಜದ ದೋಷಗಳನ್ನು ತಿದ್ದುವ ಮಹತ್ವದ ಕೆಲಸ ಹಾಸ್ಯ ಸಾಹಿತ್ಯ ಮಾಡುತ್ತದೆ. ಆಯುಷ್ಯವನ್ನು ವೃದ್ಧಿಸುವ ಶಕ್ತಿ ಹಾಸ್ಯಕ್ಕಿದೆ. ಬೀಚಿಯವರ ಹಾಸ್ಯ ಸಾಹಿತ್ಯ ಕನ್ನಡದಲ್ಲಿ ಹೊಸ ಅಲೆಯನ್ನು ಸೃಷ್ಟಿಸಿದೆ ಎಂದರು.
ಮುಖ್ಯ ಅತಿಥಿಗಳಾಗಿದ್ದ ಹಾಸ್ಯ ಭಾಷಣಕಾರ ಭಾಗೇಶ ಮುರುಡಿ ಮಾತನಾಡಿ, ಅನುಭವದ ಅಭಿವ್ಯಕ್ತಿಯೇ ಹಾಸ್ಯ. ಕನ್ನಡದಂತೆ ಹಿಂದಿ ಸಾಹಿತ್ಯದಲ್ಲಿಯೂ ಹಾಸ್ಯ ಸಾಹಿತ್ಯ ಪ್ರಮುಖ ಸ್ಥಾನ ಪಡೆದಿದೆ. ಹಾಸ್ಯವು ಮನರಂಜನೆಯ ಜೊತೆಗೆ ವ್ಯಂಗ್ಯಾರ್ಥದ ಮೂಲಕ ಸಾಮಾಜಿಕ ಸಂವೇದನೆ ನೀಡುತ್ತದೆ. ವ್ಯಕ್ತಿಯ ಗುಣ ದೋಷಗಳನ್ನು ವ್ಯಂಗ್ಯದ ಮೂಲಕ ಸರಿಪಡಿಸುವ ಕೆಲಸ ಮಾಡುತ್ತದೆ ಎಂದು ಹೇಳಿದರು.
ವಿಚಾರ ಸಂಕೀರ್ಣದ ಮೊದಲನೆಯ ಗೋಷ್ಠಿಯಲ್ಲಿ ವಿಜಯಪುರದ ಅಂಜುಮನ್ ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕ ಡಾ. ಎಸ್. ಜಿ. ಜಾಗಿರ್ದಾರ ಹಿಂದಿ ಸಾಹಿತ್ಯದಲ್ಲಿ ಹಾಸ್ಯ ಕುರಿತು ಉಪನ್ಯಾಸ ನೀಡಿದರು.
ಈ ಗೋಷ್ಠಿಯ ಅಧ್ಯಕ್ಷತೆಯನ್ನು ಇಂಡಿ ಪಟ್ಟಣದ ಜಿ ಆರ್ ಜಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎಸ್. ಬಿ. ಜಾಧವ ವಹಿಸಿದ್ದರು.
ಎರಡನೆಯ ಗೋಷ್ಠಿಯಲ್ಲಿ ಸೊಲ್ಲಾಪುರದ ಹರಿಬಾಯಿ ದೇವಕರಣ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ.ಧನ್ಯಕುಮಾರ ಬಿರಾಜದಾರ ಹಾಸ್ಯ ಮತ್ತು ವ್ಯಂಗ್ಯ ಸಾಹಿತ್ಯದ ಕುರಿತು ಉಪನ್ಯಾಸ ನೀಡಿದರು.
ಈ ಗೋಷ್ಠಿಯಲ್ಲಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾವಿದ್ಯಾಲಯದ ಹಿಂದಿ ವಿಭಾಗದ ಮುಖ್ಯಸ್ಥ ಡಾ. ದಯಾನಂದ ಸಾಳುಂಕೆ ಅಧ್ಯಕ್ಷತೆ ವಹಿಸಿದ್ದರು.
ವಿಚಾರ ಸಂಕೀರ್ಣದ ಸರ್ವಾಧ್ಯಕ್ಷ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎಸ್. ಬಿ. ರಾಠೋಡ ಮಾತನಾಡಿ, ಪ್ರತಿಯೊಬ್ಬರ ಮನಸ್ಸಿನಲ್ಲಿ ದ್ವೇಷ ಮನೆ ಮಾಡಿದ ಪ್ರಸ್ತುತ ಸಂದರ್ಭದಲ್ಲಿ ಹಾಸ್ಯ ಸಾಹಿತ್ಯದ ಅವಶ್ಯಕತೆ ಇದೆ. ಹಾಸ್ಯದಿಂದ ಎಲ್ಲರ ಜೀವನ ಆನಂದ ದಾಯಕವಾಗಿರಲಿ ಎಂದು ಹೇಳಿದರು.
ಸಮಾರೋಪ ಸಮಾರಂಭದಲ್ಲಿ ಶ್ರೀ ಸಂಗಮೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಎಸ್. ಆರ್. ಡೋನಗಾಂವ, ಉಪಾಧ್ಯಕ್ಷ ವಿ. ಜಿ. ಮುತ್ತಿನ, ಗೌರವ ಕಾರ್ಯದರ್ಶಿ ವಿ. ಎಸ್. ಗಿಡವಿರ, ಆಡಳಿತಾಧಿಕಾರಿ ಡಾ. ಎಸ್. ಎಸ್. ಚೋರಗಿ ಮಾತನಾಡಿದರು. ಸಂಸ್ಥೆಯ ನಿರ್ದೇಶಕರಾದ ಎ. ಆರ್. ಕುಲಕರ್ಣಿ, ನಾಗಮ್ಮತಾಯಿ ಅಂಕದ ವೇದಿಕೆಯ ಮೇಲೆ ಉಪಸ್ಥಿತರಿದ್ದರು.
ಕುಮಾರಿ ಅನನ್ಯ ಕುಲಕರ್ಣಿ ಪ್ರಾರ್ಥಿಸಿದರು, ಕುಮಾರಿ ಗಂಗೂಬಾಯಿ ವಡ್ರೆ ಮಹಾಭಾರತ ಕಾವ್ಯವನ್ನು ವಾಚಿಸಿದರು. ಹಿಂದಿ ವಿಭಾಗದ ಮುಖ್ಯಸ್ಥ ಡಾ. ಎಸ್. ಎಸ್. ದೇಸಾಯಿ ಸ್ವಾಗತಿಸಿದರು. ಕನ್ನಡ ವಿಭಾಗದ ಮುಖ್ಯಸ್ಥ ಡಾ. ಎಂ. ಎಸ್. ಮಾಗಣಗೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೊ. ಎಮ್. ಎ. ಜನವಾಡ ನಿರೂಪಿಸಿದರು ಪ್ರೊ. ಎಸ್. ಎಫ್. ಬಿರಾದಾರ ವಂದಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಮಹಾವಿದ್ಯಾಲಯಗಳಿಂದ ಆಗಮಿಸಿದ ಪ್ರಾಧ್ಯಾಪಕರು ವಿದ್ಯಾರ್ಥಿಗಳು ಪ್ರಬಂಧ ಮಂಡಿಸಿದರು.
ಮಹಾವಿದ್ಯಾಲಯದ ವಿದ್ಯಾರ್ಥಿಗಳು, ಬೋಧಕ ಬೋಧಕೇತರ ಸಿಬ್ಬಂದಿ ಹಾಜರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ

ಪತ್ರಕರ್ತರು ವಸ್ತುನಿಷ್ಠವಾಗಿ, ಶೋಧನೆ ಮಾಡಿ ಬರೆಯಬೇಕು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು
    In (ರಾಜ್ಯ ) ಜಿಲ್ಲೆ
  • ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!
    In (ರಾಜ್ಯ ) ಜಿಲ್ಲೆ
  • ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರು ವಸ್ತುನಿಷ್ಠವಾಗಿ, ಶೋಧನೆ ಮಾಡಿ ಬರೆಯಬೇಕು
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷರಾಗಿ ಮಹೇಶ್, ಉಪಾಧ್ಯಕ್ಷರಾಗಿ ಜಯ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಿ.ವಿ.ರಾಮನ್ ಪ.ಪೂ ಕಾಲೇಜ್ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಗುರು ಸಂಗನಬಸವ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ & ಅಗ್ನಿ ಪ್ರವೇಶ
    In (ರಾಜ್ಯ ) ಜಿಲ್ಲೆ
  • ಬೊಗಸೆಯಲ್ಲಿ ಅರಳುವ ನಿನ್ನಂದದ ಮುಖಕೆ
    In ವಿಶೇಷ ಲೇಖನ
  • ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಕಬ್ಬಡ್ಡಿ ಪಂದ್ಯಾವಳಿ: ಬಂಜಾರಾ ಕಾಲೇಜಿಗೆ ಪ್ರಥಮ ಸ್ಥಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.