Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಿಸರ್ಗ ಪ್ರೇಮಿ ಸಿದ್ದೇಶ್ವರ ಶ್ರೀಗಳಿಗೆ ಮಮದಾಪುರ ಅರಣ್ಯ ಪ್ರದೇಶ ಅರ್ಪಣೆ
(ರಾಜ್ಯ ) ಜಿಲ್ಲೆ

ನಿಸರ್ಗ ಪ್ರೇಮಿ ಸಿದ್ದೇಶ್ವರ ಶ್ರೀಗಳಿಗೆ ಮಮದಾಪುರ ಅರಣ್ಯ ಪ್ರದೇಶ ಅರ್ಪಣೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಐತಿಹಾಸಿಕ ಮಮದಾಪುರ ಕೆರೆ ಸೌಂದರ್ಯಿಕರಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಸಚಿವ ಡಾ.ಎಂ.ಬಿ.ಪಾಟೀಲ ಹೇಳಿಕೆ

ವಿಜಯಪುರ: ಐತಿಹಾಸಿಕ ಮಮದಾಪುರ ಕೆರೆಯನ್ನು ಒಂದು ಕೋಟಿ ರೂ. ವೆಚ್ಚದಲ್ಲಿ ಸಿಎಸ್‌ಆರ್ ಅನುದಾನದಡಿ ಸೌಂದರ್ಯಿಕರಣಗೊಳಿಸಲಾಗುತ್ತಿದ್ದು, ಬಾಂದಾರ ನಿರ್ಮಾಣ ಹಾಗೂ ೮೦೦ ಮೀಟರ್ ಟ್ಯಾಂಕ್ ಬಾಂದಾರಗಳನ್ನು ಅಭಿವೃದ್ಧಿ ಫೆನ್ಸಿಂಗ್ ಮತ್ತು ಹ್ಯಾಂಡ್ರೈಲ್‌ಗಳನ್ನು ಸ್ಥಾಪಿಸುವುದು, ಫುಟ್‌ಪಾತ್‌ಗಳನ್ನು ರಚಿಸುವುದು ಮತ್ತು ಮಕ್ಕಳ ಆಟದ ಪ್ರದೇಶವನ್ನು ಸ್ಥಾಪಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಡಾ.ಎಂ.ಬಿ.ಪಾಟೀಲ ಹೇಳಿದರು.
ರವಿವಾರ ಹಿಂದುಸ್ತಾನ ಕೋಕಾ ಕೋಲಾ ಬೆವೆರಜಿಸ್ ಕಂಪನಿ ವತಿಯಿಂದ ಸಿಎಸ್‌ಆರ್ ಅನುದಾನದಲ್ಲಿ ಐತಿಹಾಸಿಕ ಮಮದಾಪುರ ಕೆರೆಯ ಪುನರುಜ್ಜೀವನ ಕಾಮಗಾರಿಗೆ ಭೂಮಿ ಪೂಜೆ ಹಾಗೂ ಏಕಸ್ ಕಂಪನಿ ವತಿಯಿಂದ ಸಿಎಸ್‌ಆರ್ ಅನುದಾನದಿಂದ ನೀಡಿದ ಸ್ಮಾರ್ಟ್ ಕ್ಲಾಸ್‌ಗಳನ್ನು ಉದ್ಘಾಟಿಸಿ ಮಮದಾಪುರ ಕೆಪಿಎಸ್ ಪ್ರೌಢಶಾಲೆ ಆವರಣದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಹಿಂದುಸ್ತಾನ ಕೋಕಾಕೋಲಾ ಕಂಪನಿ ವತಿಯಿಂದ ಸಿಎಸ್‌ಆರ್ ಅನುದಾನದಡಿ ಮಮದಾಪುರ ಕೆರೆ ಅಭಿವೃದ್ದಿ ಕಾರ್ಯ ಕೈಗೊಳ್ಳಲಾಗುತ್ತಿದೆ. ಈ ಹಿಂದೆ ಜನರ ಬೇಡಿಕೆಯಂತೆ ಕೆರೆ ಹೂಳು ತೆಗೆದು ನೀರು ತುಂಬಿಸುವ ಕಾರ್ಯವನ್ನು ಸವಾಲಾಗಿ ಸ್ವೀಕರಿಸಿ ನೀರಾವರಿ ಸಚಿವನಾದ ಮೇಲೆ ಅಸಾಧ್ಯವಾದುದನ್ನು ಕೆರೆ ತುಂಬಿಸುವ ಮೂಲಕ ಯಶಸ್ವಿಗೊಳಿಸಲಾಗಿದೆ. ಕೆರೆ ತುಂಬುವುದರಿಂದ ರೈತರಿಗೆ ಅನುಕೂಲವಾಗಿದೆ. ಪ್ರಸ್ತುತ ಕೆರೆಯನ್ನು ಸೌಂದರ್ಯಿಕರಣ ಕಾರ್ಯ ಕೈಗೊಂಡಿದ್ದು, ಸೌಂದರ್ಯಿಕರಣಗೊಳಿಸಿ,ಅಭಿವೃದ್ದಿಪಡಿಸುವ ಮೂಲಕ ವಿವಿಧೋಪಯೋಗಿ ಸ್ಥಳವಾಗಿ ಮಾರ್ಪಡಿಸಲಾಗುವುದು ಎಂದು ಅವರು ಹೇಳಿದರು.
ಗ್ರಾಮೀಣ ಶಿಕ್ಷಣಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಬಡವರ ಮಕ್ಕಳು ಸಹ ಖಾಸಗಿ ಶಾಲೆಗಳಲ್ಲಿರುವ ಸೌಲಭ್ಯಗಳೊಂದಿಗೆ ಗುಣಮಟ್ಟದ ಶಿಕ್ಷಣ ಪಡೆಯಲು ಅನುಕೂಲವಾಗುವಂತೆ ವಿಮಾನ ಬಿಡಿ ಭಾಗಗಳ ತಯಾರಿಕೆ ಏಕಸ್ ಕಂಪನಿ ವತಿಯಿಂದ ಬಬಲೇಶ್ವರ ವಿಧಾನಸಭೆಯ ೨೫ ಸರ್ಕಾರಿ ಪ್ರೌಢಾಲೆಗಳಿಗೆ ಸ್ಮಾರ್ಟ್ ಕ್ಲಾಸ್‌ಗಳನ್ನು ಒದಗಿಸುವ ಮೂಲಕ ಮುಂದೆ ಬಂದಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಯಾದ್ಯಂತೆ ಸ್ಮಾರ್ಟ್ ಕ್ಲಾಸ್‌ಗಳನ್ನು ವಿಸ್ತರಣೆ ಮಾಡಲು ಪ್ರಯತ್ನಿಸಲಾಗುವುದು. ಮಕ್ಕಳ ಶಿಕ್ಷಣದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೇ ಗುಣಮಟ್ಟದ ಶಿಕ್ಷಣ ಒದಗಿಸಲು ಕ್ರಮ ವಹಿಸಲಾಗುವುದು ಎಂದು ಅವರು ಹೇಳಿದರು.
ಮಮದಾಪುರದಲ್ಲಿರುವ ೧೬೦೦ ಎಕರೆ ಪ್ರದೇಶ ಅರಣ್ಯ ಪ್ರದೇಶವನ್ನು ಅಭಿವೃದ್ದಿಪಡಿಸಲು ಕ್ರಮ ಕೈಗೊಳ್ಳಲಾಗಿದೆ. ಗೋಲ್ಡ್ ಪ್ಲಸ್ ಕಂಪನಿ ೫೦ ಲಕ್ಷ ಒದಗಿಸಿದ್ದು, ಈ ಅನುದಾನದಲ್ಲಿ ಡ್ರೀಪ್ ಮೂಲಕ ನೀರು ಒದಗಿಸಿ ಅಭಿವೃಪಡಿಸಲಾಗಿದೆ. ಇನ್ನೂ ಹೆಚ್ಚಿನ ಅನುದಾನ ಅವಶ್ಯವಿದ್ದಲ್ಲಿ ಒಂದು ಕೋಟಿ ರೂ. ಸಿಎಸ್‌ಆರ್ ಅನುದಾನ ಒದಗಿಸಿ ಸಾಯಿನ್ಸ್ ಮ್ಯೂಸಿಯಂ, ಮಕ್ಕಳ ಚಟುವಟಿಕೆಗಾಗಿ ಪ್ರತ್ಯೇಕ ತಾಣ ಸೇರಿದಂತೆ ಸುಂದರವಾದ ಪ್ರವಾಸಿ ತಾಣವನ್ನಾಗಿ ಅಭಿವೃದ್ದಿಪಡಿಸಲಾಗುವುದು. ಈ ಅರಣ್ಯ ಪ್ರದೇಶವನ್ನು ಪ್ರಕೃತಿ-ನಿಸರ್ಗ ಪ್ರೇಮಿ ಸಿದ್ದೇಶ್ವರ ಶ್ರೀಗಳಿಗೆ ಅರ್ಪಣೆ ಮಾಡಲಾಗುವುದು ಎಂದು ಅವರು ಹೇಳಿದರು.
ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮಾತನಾಡಿ, ಸರ್ಕಾರಿ ಅಧಿಕಾರಿಗಳು ಸಾರ್ವಜನಿಕರ ಕೆಲಸ-ಕಾರ್ಯ, ಅಭಿವೃದ್ದಿ ಕಾರ್ಯ ನಿರ್ವಹಿಸುವುದು ಕರ್ತವ್ಯವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರ ದೂರದೃಷ್ಟಿತ್ವ, ಅವರು ಕೈಗೊಳ್ಳುವ ಅಭಿವೃದ್ದಿ ಕಾರ್ಯಗಳು ಅಧಿಕಾರಿಗಳಿಗೂ ಉತ್ತೇಜನ-ಪ್ರೇರಣೆಯಾಗಿವೆ. ಅಧಿಕಾರಿಗಳಿಗೆ ಅಭಿವೃದ್ದಿ ಕಾರ್ಯ ಕೈಗೊಳ್ಳಲು ಪ್ರೊತ್ಸಾಹ ದೊರೆಯುತ್ತದೆ. ಈ ನಿಟ್ಟಿನಲ್ಲಿ ಮಮದಾಪೂರದ ಐತಿಹಾಸಿಕ ಕೆರೆ ಸಚಿವರ ಆಶಯದಿಂದ ಮಮದಾಪೂರ ಅರಣ್ಯೀಕರಣ ಪ್ರದೇಶದ ಪುನರಜ್ಜೀವನಕ್ಕೆ ಒತ್ತು. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಸಿಎಸ್‌ಆರ್ ನಿಧಿಯಲ್ಲಿ ಅಭಿವೃದ್ದಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ.
ಕಾರ್ಯಕ್ರಮದಲ್ಲಿ ಮಮದಾಪುರ ವಿರಕ್ತಮಠದ ಪರಮ ಪೂಜ್ಯ ಅಭಿನವ ಮುರುಘೇಂದ್ರ ಮಹಾಸ್ವಾಮಿಜಿ ಸಾನಿಧ್ಯ ವಹಿಸಿದ್ದರು.
ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಋಷಿಕೇಶ ಸೊನಾವಣೆ, ಕೆಬಿಜೆಎನ್‌ಎಲ್ ಮುಖ್ಯ ಅಭಿಯಂತರ ಶ್ರೀನಿವಾಸ, ಹಿಂದುಸ್ತಾನ ಕೋಕಾ ಕೋಲಾ ಬೆವೆರೆಜಿಸ್ ಕಂಪನಿಯ ಹಿಮಾಂಶು ಪ್ರೀಯದರ್ಶಿ, ಏಕಸ್ ಕಂಪನಿಯ ಮುಕುಂದ ತ್ರಿವೇದಿ, ವಲಯ ಅರಣ್ಯಾಧಿಕಾರಿ ಸಂತೋಷ ಆಜೂರ ಸೇರಿದಂತೆ ಇತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.