Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಭಿವ್ಯಕ್ತಿ ಸ್ವಾತಂತ್ರ್ಯವೇ ಪತ್ರಕರ್ತರ ಶಕ್ತಿ :ಕೆ.ವಿ.ಪ್ರಭಾಕರ
(ರಾಜ್ಯ ) ಜಿಲ್ಲೆ

ಅಭಿವ್ಯಕ್ತಿ ಸ್ವಾತಂತ್ರ್ಯವೇ ಪತ್ರಕರ್ತರ ಶಕ್ತಿ :ಕೆ.ವಿ.ಪ್ರಭಾಕರ

By Updated:No Comments5 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ಕಾನಿಪ ಸಂಘದಿಂದ ನಡೆದ ಪತ್ರಿಕಾ ದಿನಾಚರಣೆ | ಸಾಧಕರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ | ಪ್ರತಿಭಾ ಪುರಸ್ಕಾರ

ವಿಜಯಪುರ: ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಹಾಗೂ ಪತ್ರಕರ್ತರಿಗೆ ನಿವೇಶನ ಒದಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದ್ದು, ಇನ್ನು ೧೫-೨೦ ದಿನಗಳಲ್ಲಿ ಇದು ಕಾರ್ಯರೂಪಕ್ಕೆ ಬರಲಿದೆ ಎಂದು ಮುಖ್ಯಮಂತ್ರಿಗಳ ಪ್ರಧಾನ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ ಭರವಸೆ ನೀಡಿದರು.
ರವಿವಾರ ಸಂಜೆ ವಿಜಯಪುರದ ಪೊಲೀಸ್ ಪರೇಡ್ ಮೈದಾನದಲ್ಲಿ ಮುಂಭಾಗದಲ್ಲಿರುವ ಪೊಲೀಸ್ ಸಮುದಾಯ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ ದಿನಾಚರಣೆ, ಸಾಧಕರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಗೃಹ ಮಂಡಳಿಯಲ್ಲಿ ಶೇ.೫ ರಷ್ಟು ನಿವೇಶನಗಳನ್ನು ಪತ್ರಕರ್ತರಿಗೆ ಮೀಸಲಿರಿಸಲಾಗುತ್ತದೆ, ಈ ಸೌಲಭ್ಯವನ್ನು ಈ ಭಾಗದ ಪತ್ರಕರ್ತರು ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ವ್ಯಕ್ತಿ ಕೇಂದ್ರಿತ ಸುದ್ದಿಗಳೇ ಇಂದು ಮಾಧ್ಯಮಗಳಲ್ಲಿ ರಾರಾಜಿಸುತ್ತಿವೆ, ಶ್ರೀಮಂತ ಕುಟುಂಬಗಳ ಮದುವೆಗಳು ಗಂಟೆಗಟ್ಟಲೇ ಬಿತ್ತರವಾಗುತ್ತಿವೆ, ಈ ಎಲ್ಲದರ ಮಧ್ಯೆ ಮಾಧ್ಯಮಗಳ ಮೇಲೆ ವಿಶ್ವಾಸಾರ್ಹತೆಯೂ ಕಡಿಮೆಯಾಗುತ್ತಾ ಸಾಗಿದೆ ಎಂದರು.
ರೈತರ, ಜನಸಾಮಾನ್ಯರ ಸಮಸ್ಯೆಗಳು ಮಾಧ್ಯಮಗಳಲ್ಲಿ ಬೆಳಕು ಚೆಲ್ಲುವ ಕೆಲಸ ನಡೆಯುತ್ತಿಲ್ಲ, ಒಂದು ರೀತಿ ಮಾಧ್ಯಮಕ್ಕೂ ಕಾರ್ಪೋರೇಟ್ ಸಂಸ್ಕೃತಿ ಕಾಲಿಟ್ಟಿದೆ, ವ್ಯಕ್ತಿ ಕೇಂದ್ರಿತ ಸುದ್ದಿಗಳು, ಬ್ರೇಕಿಂಗ್ ನ್ಯೂಸ್ ಅಬ್ಬರದಲ್ಲಿ ವಿಶ್ವಾಸಾರ್ಹತೆಯ ಕೊರತೆಯಾಗುತ್ತಿದೆ, ಹೀಗಾಗಿ ವಿಶ್ವಾಸಾರ್ಹತೆಯನ್ನು ಪುನರ್ ಸ್ಥಾಪಿಸಿಕೊಳ್ಳುವ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇರಿಸಬೇಕಿದೆ ಎಂದರು.
ಅಭಿವ್ಯಕ್ತಿಯ ಸ್ವಾತಂತ್ರ್ಯವೇ ಪತ್ರಕರ್ತರ ಶಕ್ತಿ, ಆದರೆ ಈ ಸ್ವಾತಂತ್ರ್ಯ ದುರುಪಯೋಗವಾದರೆ ದೊಡ್ಡ ದುರಂತವೇ ನಡೆದು ಹೋಗುತ್ತದೆ, ಪತ್ರಕರ್ತರು ಒಂದು ರೀತಿ ಶಾಸಕ ಬಸನಗೌಡ ಪಾಟೀಲ ಯತ್ನಾಳರ ರೀತಿ ಇರಬೇಕು, ಯತ್ನಾಳರು ತಾವು ಪ್ರತಿನಿಧಿಸುವ ಪಕ್ಷದವರು ತಪ್ಪು ಮಾಡಿದರೂ ಎತ್ತಿ ತೋರಿಸುತ್ತಾರೆ, ಸರ್ಕಾರ ತಪ್ಪು ಮಾಡಿದರೂ ಅದನ್ನು ಎಚ್ಚರಿಸುತ್ತಾರೆ, ಆ ರೀತಿ ಪತ್ರಕರ್ತರು ತಪ್ಪುಗಳನ್ನು ಎತ್ತಿ ತೋರಿಸಬೇಕು ಎಂದರು.
ಉಪನ್ಯಾಸ ಮಂಡಿಸಿದ ಡಾ.ಫ.ಗು. ಹಳಕಟ್ಟಿ ಸಂಶೋಧನಾ ಕೇಂದ್ರದ ನಿರ್ದೇಶಕ ಹಾಗೂ ಗಡಿನಾಡು ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಡಾ.ಎಂ.ಎಸ್. ಮಧಬಾವಿ,
ಶಾಸ್ತ್ರೀಯ ಪದ್ಧತಿಯಲ್ಲಿ ವಚನಗಳನ್ನು ಪ್ರಕಟಿಸಿ ಜನರಿಗೆ ತಲುಪಿಸಿದ ಶ್ರೇಯಸ್ಸು ಡಾ.ಹಳಕಟ್ಟಿ ಅವರಿಗೆ ಸಲ್ಲುತ್ತದೆ, ಶಿವಾನುಭವ ಎಂಬ ಪತ್ರಿಕೆಯ ಮೂಲಕ ಬಸವಾದಿ ಶರಣರ ವಿಚಾರಗಳನ್ನು ಬಿತ್ತಿದರೆ, ಅವರು ಸ್ಥಾಪಿಸಿದ ನವ ಕರ್ನಾಟಕ ಎನ್ನುವ ಇನ್ನೊಂದು ಪತ್ರಿಕೆ ಕರ್ನಾಟಕದ ಶೈಕ್ಷಣಿಕ, ಆರ್ಥಿಕ ಅಭಿವೃದ್ಧಿಯ ಕೈಗನ್ನಡಿಯಾಗಿ ನವ ಕರ್ನಾಟಕ ರೂಪುಗೊಳ್ಳುವ ವಿಚಾರಗಳನ್ನು ಬಿತ್ತರಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿತ್ತು ಎಂದರು.
ಈ ಅಪರೂಪದ ಹಾಗೂ ಅಪೂರ್ವವಾದ ನವ ಕರ್ನಾಟಕ ಸಂಗ್ರಹ ಪ್ರತಿಗಳನ್ನು ಸಂಗ್ರಹಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ವಿವರಿಸಿದರು.
ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಕಾನಿಪ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ, ಜಿಲ್ಲಾಧಿಕಾರಿ ಟಿ. ಭೂಬಾಲನ್, ವಿಡಿಎ ಅಧ್ಯಕ್ಷ ಕನ್ನಾನ್ ಮುಶ್ರೀಫ್, ಕಾನಿಪ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ, ಕಾನಿಪ ರಾಜ್ಯ ಉಪಾಧ್ಯಕ್ಷ ಪುಂಡಲೀಕ ಬಾಳೋಜಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಋಷಿಕೇಶ ಸೋನಾವನೆ, ಚಾಣಕ್ಯ ಕೆರಿಯರ್ ಅಕಾಡೆಮಿ ಸಂಸ್ಥಾಪಕ ಅಧ್ಯಕ್ಷ ಎನ್.ಎಂ. ಬಿರಾದಾರ, ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಕಾನಿಪ ರಾಜ್ಯ ಪದಾಧಿಕಾರಿ ದೇವರಾಜ್, ಡಾ.ಎಂ.ಎಸ್. ಮದಭಾವಿ ಮೊದಲಾದವರು ಉಪಸ್ಥಿತರಿದ್ದರು.

ಪತ್ರಕರ್ತರ ಜೀವನ ಕಷ್ಟಕರ :ಸಚಿವ ಎಂ.ಬಿ.ಪಾಟೀಲ

ವಿಜಯಪುರ: ಸರ್ಕಾರಗಳು ತಪ್ಪಿದಾಗ ಎಚ್ಚರಿಸುವ ಕೆಲಸ ಮಾಡುವ ಪತ್ರಕರ್ತರ ಜೀವನ ಮಾತ್ರ ಕಷ್ಟಕರವಾಗಿದೆ, ಹಗಲು ರಾತ್ರಿ ಎನ್ನದೇ ದುಡಿಯುವ ಪತ್ರಕರ್ತರು ಜೀವನದಲ್ಲಿ ಅನೇಕ ಸವಾಲುಗಳನ್ನು ಎದುರಿಸುವಂತಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಹೇಳಿದರು.
ರವಿವಾರ ಸಂಜೆ ವಿಜಯಪುರದ ಪೊಲೀಸ್ ಪರೇಡ್ ಮೈದಾನದಲ್ಲಿ ಮುಂಭಾಗದಲ್ಲಿರುವ ಪೊಲೀಸ್ ಸಮುದಾಯ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ ದಿನಾಚರಣೆ, ಸಾಧಕರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗದಂತೆ ಮಾಧ್ಯಮ ರಂಗ ನಾಲ್ಕನೇಯ ಅಂಗವಾಗಿ ತನ್ನ ಜವಾಬ್ದಾರಿ ನಿಭಾಯಿಸುತ್ತಿದೆ, ಪತ್ರಕರ್ತರಿಗೆ ಉತ್ತಮ ಆರೋಗ್ಯ ಸೌಲಭ್ಯ ಒದಗಿಸುವ ದೃಷ್ಟಿಯಿಂದ ಪತ್ರಕರ್ತರಿಗಾಗಿ ಬಿಎಲ್‌ಡಿಇ ಸಂಸ್ಥೆಯ ವತಿಯಿಂದ ಆರೋಗ್ಯ ಯೋಜನೆ ಜಾರಿಗೊಳಿಸಲಾಗಿದೆ ಎಂದರು.
ಬಸವಾದಿ ಶರಣರ ವಿಚಾರಗಳನ್ನು ಬೆಳಕಿಗೆ ತಂದ ಶ್ರೇಯಸ್ಸು ಡಾ.ಹಳಕಟ್ಟಿ ಅವರಿಗೆ ಸಲ್ಲುತ್ತದೆ, ಇಂತಹ ಶ್ರೇಷ್ಠ ವ್ಯಕ್ತಿ ಡಾ.ಹಳಕಟ್ಟಿ ಪತ್ರಕರ್ತರ ಬಳಗಕ್ಕೆ ಸೇರಿದವರು ಎಂಬುದು ಸಹ ಪತ್ರಕರ್ತರಿಗೆ ಹಮ್ಮೆಯ ಸಂಗತಿ ಎಂದರು.

ಕಿಸೆ ಕತ್ತರಿಸುವ ಪತ್ರಕರ್ತರು :ಶಾಸಕ ಯತ್ನಾಳ

” ಪತ್ರಿಕೆ ಹೆಸರಿನಲ್ಲಿ ಬ್ಲ್ಯಾಕ್ ಮೇಲ್ ಮಾಡುವವರು ಕಾರ್ಯನಿರತ ಪತ್ರಕರ್ತರಲ್ಲ, ಅವರು ಕಿಸೆ ಕತ್ತರಿಸುವ ಪತ್ರಕರ್ತರು. ನಾನು ಸತ್ಯವನ್ನೇ ಮಾತನಾಡುತ್ತೇನೆ, ಯಾರೊಂದಿಗೂ ನಾನು ಅಡ್ಜೆಸ್ಟಮೆಂಟ್ ರಾಜಕಾರಣ ಮಾಡುವುದಿಲ್ಲ, ಒಳ್ಳೆಯದು ಮಾಡಿದರೆ ಅದನ್ನು ಹೊಗಳುತ್ತೇನೆ, ಕೆಟ್ಟದ್ದು ಮಾಡಿದರೆ ಅದನ್ನು ಟೀಕಿಸುತ್ತೇನೆ, ನಮ್ಮವರೇ ಇರಲಿ ಯಾರೇ ಇರಲಿ, ನಾನು ಎಂದಿಗೂ ಮುಖ್ಯಮಂತ್ರಿಗಳ ಕಚೇರಿಗೆ ಹೋಗಿ ನಿಲ್ಲುವುದಿಲ್ಲ.”
– ಬಸನಗೌಡ ಪಾಟೀಲ, ಯತ್ನಾಳ
ವಿಜಯಪುರ ನಗರ ಶಾಸಕರು

ನಕಲಿ ಪತ್ರಕರ್ತರಿಗೆ ಕಡಿವಾಣ ಅವಶ್ಯ :ತಗಡೂರ

ವಿಜಯಪುರ: ಬ್ರೇಕಿಂಗ್ ಅಬ್ಬರದಲ್ಲಿ ಪತ್ರಕರ್ತರ ವಿಶ್ವಾಸಾರ್ಹತೆಯ ಪ್ರಶ್ನೆ ಮಾಡುವ ಪರಿಸ್ಥಿತಿ ಒಂದೆಡೆ ಸೃಜನೆಯಾದರೆ, ನಾನು ಪತ್ರಕರ್ತ ಎಂಬ ಹೆಸರು ಹೇಳುವವರ ಸಂಖ್ಯೆ ಅಧಿಕವಾಗುತ್ತಿದೆ, ನಕಲಿ ಪತ್ರಕರ್ತರಿಗೆ ಕಡಿವಾಣ ಹಾಕುವುದು ಅತ್ಯಂತ ಅವಶ್ಯವಾಗಿದೆ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಹೇಳಿದರು.
ವಿಜಯಪುರದ ಪೊಲೀಸ್ ಪರೇಡ್ ಮೈದಾನದಲ್ಲಿ ಮುಂಭಾಗದಲ್ಲಿರುವ ಪೊಲೀಸ್ ಸಮುದಾಯ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ ದಿನಾಚರಣೆ, ಸಾಧಕರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಆಶಯ ನುಡಿಗಳನ್ನಾಡಿದ ಅವರು, ಪತ್ರಕರ್ತರು ಎಂದು ಹೇಳಿ ಬ್ಲಾಕ್‌ಮೇಲ್ ಮಾಡುವವರ ಸಂಖ್ಯೆಯೂ ಇದೆ, ಈ ರೀತಿ ವೃತ್ತಿಗೆ ದ್ರೋಹ ಎಸಗುವ ನಕಲಿ ಪತ್ರಕರ್ತರಿಗೆ ಕಡಿವಾಣ ಹಾಕುವ ಕೆಲಸ ನಡೆಯಬೇಕಿದೆ, ಎಂದೋ ಒಂದು ದಿನ ಪತ್ರಿಕೆ ಹೊರತಂದು ಪತ್ರಕರ್ತರು ಎಂದು ಹೇಳಿಕೊಳ್ಳುವವರು ಇದ್ದಾರೆ ಎಂದರು.
ಶ್ರೇಷ್ಠ ಸಾಹಿತಿ ಡಾ.ಡಿ.ವಿ. ಗುಂಡಪ್ಪ ಅವರು ಸ್ಥಾಪಿಸಿದ ಕಾನಿಪ ಇಂದು ಹೆಮ್ಮರವಾಗಿ ಬೆಳೆದು ಕೇರಳ, ಮಹಾರಾಷ್ಟ್ರ ಮೊದಲಾದ ರಾಜ್ಯಗಳಲ್ಲಿ ವ್ಯಾಪಿಸಿಕೊಂಡು ವಿಸ್ತಾರವಾಗಿ ಬೆಳೆಯುತ್ತಾ ಸಾಗಿದೆ ಎಂದರು.
ಖಾದ್ರಿ ಶಾಮಣ್ಣ, ಎಸ್.ವಿ. ಜಯಶೀಲ್‌ರಾವ್ ಸೇರಿದಂತೆ ಅನೇಕ ಮಹಾನುಭಾವರು ಈ ಸಂಘದ ಸಾರಥ್ಯ ವಹಿಸಿ ಸಂಘವನ್ನು ಮುನ್ನಡೆಸಿದ ಪರಿಣಾಮ ಸಂಘ ಎತ್ತರಕ್ಕೆ ಬೆಳೆದಿದೆ, ಸುದೀರ್ಘ ಇತಿಹಾಸವುಳ್ಳ ಬೃಹತ್ ಸಂಘಟನೆಯಾಗಿ ತನ್ನ ಜವಾಬ್ದಾರಿಯನ್ನು ಕಾನಿಪ ಸಮರ್ಥವಾಗಿ ನಿಭಾಯಿಸುತ್ತಿದೆ ಎಂದರು.
ಸದನದಲ್ಲಿಯೂ ಪತ್ರಕರ್ತರ ಹಿತರಕ್ಷಣೆಯ ಬಗ್ಗೆ ಚರ್ಚೆಯಾಗುತ್ತಿದೆ. ಪತ್ರಕರ್ತರ ಹಿತರಕ್ಷಣೆಗೆ ಪೂರಕವಾದ ಸೌಲಭ್ಯ ಕಲ್ಪಿಸುವಂತೆ ಸರ್ಕಾರ, ಸಂಬಂಧಿಸಿದ ಇಲಾಖೆಗಳಿಗೆ ನಿರಂತರವಾಗಿ ಮನವಿ, ಮನವರಿಕೆ ಮಾಡಿಕೊಡುವ ಕೆಲಸವನ್ನು ಸಂಘ ಮುಂಚೂಣಿಯಲ್ಲಿ ನಿಂತು ಮಾಡುತ್ತಿದೆ ಎಂದರು.
ಮಾಧ್ಯಮಗಳಿಗೆ ಅದಮ್ಯ ಶಕ್ತಿ ಇದೆ, ಮಾಧ್ಯಮಕ್ಕೆ ಒಂದು ದೊಡ್ಡ ಜವಾಬ್ದಾರಿ ಇದೆ, ಒಂದು ಸಂದರ್ಭದಲ್ಲಿ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ಸಹ ಪತ್ರಿಕಾಗೋಷ್ಠಿ ನಡೆಸಿ ತಮ್ಮ ವಿಚಾರಗಳನ್ನು ಮಾಧ್ಯಮಗಳ ಮುಂದೆ ವ್ಯಕ್ತಪಡಿಸಿದ್ದರು ಎಂಬುದನ್ನು ಮರೆಯುವಂತಿಲ್ಲ ಎಂದರು.
ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್
ಗ್ರಾಮೀಣ ಪತ್ರಕರ್ತರಿಗೆ ಸಂಚಾರಕ್ಕೆ ಅನುಕೂಲಕ್ಕಾಗಿ ಉಚಿತ ಬಸ್ ಪಾಸ್ ವ್ಯವಸ್ಥೆಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಸರ್ಕಾರಕ್ಕೆ ಮನವಿ ಮಾಡಿ, ಖಂಡಿತವಾಗಿಯೂ ಈ ಸೌಲಭ್ಯಕ್ಕೆ ಹಸಿರು ನಿಶಾನೆ ಪಡೆದುಕೊಳ್ಳಲಾಗುವುದು ಎಂದು ತಗಡೂರ ಭರವಸೆ ನೀಡಿದರು.
ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ, ಕಾನಿಪ ಪ್ರಧಾನ ಕಾರ್ಯದರ್ಶಿ ಮೋಹನ್ ಕುಲಕರ್ಣಿ, ಉಪಾಧ್ಯಕ್ಷರಾದ ಇಂದುಶೇಖರ ಮಣೂರ, ಪ್ರಕಾಶ ಬೆಣ್ಣೂರ, ಪಿರೋಜ್ ರೋಜಿನದಾರ, ಪದಾಧಿಕಾರಿಗಳಾದ ಅವಿನಾಶ ಬಿದರಿ, ಶಕೀಲ್ ಬಾಗಮಾರೆ, ಮಲ್ಲು ಕೆಂಭಾವಿ, ರಾಹುಲ್ ಅಪ್ಟೆ, ಐಎಫ್‌ಡಬ್ಲೂಜೆ ನಾಮನಿರ್ದೇಶಿತ ಸದಸ್ಯ ಮಹೇಶ ವಿ ಶೆಟಗಾರ, ಕೆ.ಕೆ. ಕುಲಕರ್ಣಿ, ಕೌಶಲ್ಯಾ ಪನಾಳಕರ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರು, ನಾಮನಿರ್ದೇಶಿತ ಸದಸ್ಯರು ಪಾಲ್ಗೊಂಡಿದ್ದರು.
ಕಾನಿಪ ಜಿಲ್ಲಾ ಘಟಕದ ಅಧ್ಯಕ್ಷ ಸಂಗಮೇಶ ಚೂರಿ ಸ್ವಾಗತಿಸಿದರು. ಕಾನಿಪ ರಾಜ್ಯ ಸಮಿತಿ ಸದಸ್ಯ ಡಿ.ಬಿ. ವಡವಡಗಿ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಉಪಾಧ್ಯಕ್ಷ ಇಂದುಶೇಖರ ಮಣೂರ ವಂದಿಸಿದರು.

ವಾರ್ಷಿಕ ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾ ಪುರಸ್ಕಾರ

ವಿಜಯಪುರ: ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅನುಪಮ ಸೇವೆ ಸಲ್ಲಿಸಿದ ಪತ್ರಕರ್ತರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕೊಡಮಾಡುವ ವಾರ್ಷಿಕ ಪ್ರಶಸ್ತಿಯನ್ನು ಪ್ರದಾನ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ರವಿವಾರ ಪೊಲೀಸ್ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ, ಮುಖ್ಯಮಂತ್ರಿಗಳ ಪ್ರಧಾನ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ, ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಕಾನಿಪ ರಾಜ್ಯ ಘಟಕದ ಅಧ್ಯಕ್ಷ ಶಿವಾನಂದ ತಗಡೂರ, ಜಿಲ್ಲಾಧಿಕಾರಿ ಟಿ. ಭೂಬಾಲನ್, ಜಿಲ್ಲಾ ಪೊಲೀಸ್ ಅಧೀಕ್ಷಕ ಋಷಿಕೇಶ ಸೋನಾವನೆ ಸೇರಿದಂತೆ ಹಲವಾರು ಗಣ್ಯರು ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಿದರು.
ಪ್ರಶಸ್ತಿ ಪಡೆದ ಸಾಧಕರ ವಿವರ
ವಿಜಯವಾಣಿಯ ಸ್ಥಾನಿಕ ಸಂಪಾದಕ ಕೆ.ಎನ್. ರಮೇಶ, ವಿಜಯ ಕರ್ನಾಟಕದ ಸ್ಥಾನಿಕ ಸಂಪಾದಕ ಈರಣ್ಣ ಎಂಬಿ ಗೌಡರ, ಕನ್ನಡದೀಪ ಪತ್ರಿಕೆಯ ಸಂಪಾದಕ ಕಲ್ಯಾಣರಾವ್ ಕುಲಕರ್ಣಿ, ಗುಮ್ಮಟ ನಗರಿ ವ್ಯವಸ್ಥಾಪಕ ಸಂಪಾದಕ ಇರ್ಫಾನ್ ಶೇಖ್, ಉದಯವಾರ್ತೆಯ ಸಂಪಾದಕಿ ಲಕ್ಷ್ಮಿ ವಾಲೀಕಾರ, ರಿಪಬ್ಲಿಕ್ ಟಿವಿಯ ಕ್ಯಾಮರಾಮನ್ ಸುನೀಲ ಗೋಡೆನವರ, ಪಬ್ಲಿಕ್ ಟಿವಿಯ ಕ್ಯಾಮೆರಾಮನ್ ಸುನೀಲ ಕಾಂಬಳೆ, ಇನ್ ನ್ಯೂಸ್ ವರದಿಗಾರ ವಿಜಯ ಸಾರವಾಡ, ಚಡಚಣದ ಕನ್ನಡಮ್ಮ ವರದಿಗಾರ ತುಕಾರಾಮ ಕೋಳಿ, ಕನ್ನಡಪ್ರಭ ವರದಿಗಾರ ಶಂಕರ ಹಾವಿನಾಳ, ಬಸವನ ಬಾಗೇವಾಡಿಯ ಉದಯವಾಣಿ ವರದಿಗಾರ ಪ್ರಕಾಶ ಬೆಣ್ಣೂರ, ಕನ್ನಡಪ್ರಭ ವರದಿಗಾರ ಬಸವರಾಜ ನಂದಿಹಾಳ, ಇಂಡಿಯ ಸಂಯುಕ್ತ ಕರ್ನಾಟಕ ವರದಿಗಾರ ಸಿದ್ದಯ್ಯ ಹಿರೇಮಠ, ಗುಮ್ಮಟನಗರಿ ವರದಿಗಾರ ಸದ್ದಾಂಹುಸೇನ್ ಜಮಾದಾರ, ಸಿಂದಗಿಯ ಕನ್ನಡಪ್ರಭ ವರದಿಗಾರ ಸಿದ್ಧಲಿಂಗ ಕಿಣಗಿ, ವಿಜಯ ಕರ್ನಾಟಕದ ವರದಿಗಾರ ಸುದರ್ಶನ ಜಂಗಣ್ಣಿ, ದೇವರಹಿಪ್ಪರಗಿಯ ಭೂಮಿವಾಣಿ ವರದಿಗಾರ ಈರನಗೌಡ ಪಾಟೀಲ, ಉದಯಕಾಲ ವರದಿಗಾರ ರಫೀಕ್ ಅಹ್ಮದ್ ಮೋಮಿನ್, ಮುದ್ದೇಬಿಹಾಳದ ವಿಜಯವಾಣಿ ವರದಿಗಾರ ಜಿ.ಎನ್. ಬೀರಗೊಂಡ, ಡೈಲಿ ಸಾಲಾರ್ ವರದಿಗಾರ ಲಾಡ್ಲೇಮಶಾಕ್ ಅಬ್ದುಲ್‌ಗಣಿ ಶೇಖ್, ತಿಕೋಟಾದ ವಿಜಯ ಕರ್ನಾಟಕ ವರದಿಗಾರ ಸಾತಲಿಂಗಯ್ಯ ಸಾಲಿಮಠ, ಕ್ರಾಂತಿ ಧ್ವನಿ ವರದಿಗಾರ ನಿಂಗಪ್ಪ ಸಂಗಾಪುರ, ತಾಳಿಕೋಟೆಯ ಕನ್ನಡಮ್ಮ ವರದಿಗಾರ ಸುನೀಲ ತಳವಾರ, ಮೈಬೂಬ್ ಸುಬಾನಿ, ನಿಡಗುಂದಿಯ ವಿಜಯ ಕರ್ನಾಟಕ ವರದಿಗಾರ ಮಹೇಶ ಆಡಾಳಿ, ವಿಜಯವಾಣಿ ವರದಿಗಾರ ಮಲ್ಲಿಕಾರ್ಜುನಯ್ಯ ತೊರಗಲ್ಲಮಠ, ಕೊಲ್ಹಾರದ ಉದಯವಾಣಿ ವರದಿಗಾರ ಅರುಣ ಔರಸಂಗ, ಆಲಮೇಲದ ಹೊಸ ದಿಗಂತ ವರದಿಗಾರ ಅಮರ ನಾರಾಯಣಕರ, ಉದಯವಾಣಿಯ ವರದಿಗಾರ ಅವಧೂತ ಭಂಡಗಾರ ಹಾಗೂ ಪತ್ರಿಕಾ ವಿತರಕರಾದ ವಿಜಯಪುರದ ದಯಾನಂದ ಶಿರಶ್ಯಾಡ ಮತ್ತು ಬಸವನಬಾಗೇವಾಡಿ ತಾಲೂಕಿನ ಮನಗೂಳಿಯ ಶಿವಾಜಿ ಮೋರೆ ಅವರನ್ನು ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

BIJAPUR NEWS public public news Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.