ಮುದ್ದೇಬಿಹಾಳ: ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಜು.30 ರಂದು ಬೆಳಿಗ್ಗೆ 10ಗಂಟೆಗೆ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಕುರಿತು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ ಹಾಗೂ ಇತರ ಎಲ್ಲ ಸರಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ ಈ ಕಾರ್ಯಕ್ರಮವನ್ನು ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರವೀಂದ್ರಕುಮಾರ ಕಟ್ಟಿಮನಿ ಉದ್ಘಾಟಿಸುವರು. ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಕಿರಿಯ ಸಿವಿಲ್ ನ್ಯಾಯಾಧೀಶ ಸಂಪತ್ತಕುಮಾರ ಬಳೂಲಗಿಡದ ಉಪಸ್ಥಿತಿಯಲ್ಲಿ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ ಅಧ್ಯಕ್ಷತೆ ವಹಿಸಲಿದ್ದು, ಹಿರಿಯ ಶ್ರೇಣಿ ಸಹಾಯಕ ಸರ್ಕಾರಿ ಅಭಿಯೋಜಕ ನಾಗರಾಜ ಪೂಜಾರ, ಕಿರಿಯ ಶ್ರೇಣಿ ಸಹಾಯಕ ಸರ್ಕಾರಿ ಅಭಿಯೋಜಕ ಬಸವರಾಜ ಆಹೇರಿ, ಅಪರ ಸರ್ಕಾರಿ ವಕೀಲ ಎಚ್.ಎಲ್.ಸರೂರ, ತಹಶೀಲ್ದಾರ ಬಲರಾಮ ಕಟ್ಟಿಮನಿ, ಪ್ರಭಾರ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಆರ್.ಎಸ್.ಹಿರೇಗೌಡರ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ, ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಶಿಶು ಅಭಿವೃದ್ಧಿ ಯೋಜನಾಧಿಖಾರಿ ಶಿವಮೂರ್ತಿ ಕುಂಬಾರ ಅತಿಥಿಗಳಾಗಿ ಭಾಗಿಯಾಗಲಿದ್ದು, ಮಾನವ ಕಳ್ಳ ಸಾಗಾಣಿಕೆ ತಡೆ ಕುರಿತು ನ್ಯಾಯವಾದಿ ಎಂ.ಎ.ಲಿಂಗಸೂರ ವಿಶೇಷ ಉಪನ್ಯಾಸ ನೀಡಲಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
