ಸಿಂದಗಿ: ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ಬನ್ನೆಟ್ಟಿ ಪಿ ಗ್ರಾಮದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಪರಿಣಾಮ ೧೦ನೆಯ ತರಗತಿಯ ವಿದ್ಯಾರ್ಥಿ ಮೃತಪಟ್ಟ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.ಮೃತ ದುರ್ದೈವಿ ವಿದ್ಯಾರ್ಥಿ ಸಂದೀಪ ಶಿವಾನಂದ ಗಿಡ್ಡಯಲ್ಲಪ್ಪಗೋಳ ಎಂದು ತಿಳಿದು ಬಂದಿದೆ.ಈ ವಿದ್ಯಾರ್ಥಿಯು ಸಿಂದಗಿಯ ಎಚ್.ಜಿ.ಶಾಲೆಗೆ ಹೋಗುವ ಸಲುವಾಗಿ ಗ್ರಾಮದ ಬಸ್ ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುತ್ತಿರುವ ಸಮಯದಲ್ಲಿ ಕಲಕೇರಿ ಸಿಂದಗಿ ಬಸ್ ಚಾಲಕನ ನಿರ್ಲಕ್ಷ್ಯತನ ಹಾಗೂ ವೇಗದಿಂದ ಬಸ್ ಬಂದು ವಿದ್ಯಾರ್ಥಿಗೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.ತೀವ್ರವಾಗಿ ಗಾಯಗೊಂಡ ವಿದ್ಯಾರ್ಥಿಯನ್ನು ತಕ್ಷಣದಲ್ಲಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿ ಮೃತಪಟ್ಟಿದ್ದಾನೆ ಎಂದು ಕುಟುಂದ ಮೂಲಗಳಿಂದ ತಿಳಿದು ಬಂದಿದೆ. ಈ ಪ್ರಕರಣವು ದೇವರ ಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಈ ಘಟನೆಯನ್ನು ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಚಾಲಕನ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

