ಸಿಂದಗಿ: ಪಟ್ಟಣದ ಶ್ರೀಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ಜು.೩೦ರಂದು ಬೆಳಿಗ್ಗೆ ೯ಗಂಟೆಗೆ ಸಿಂದಗಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ ಹಾಗೂ ಶ್ರೀಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯದ ಸಹಯೋಗದೊಂದಿಗೆ ಮಾನವ ಕಳ್ಳ ಸಾಗಾಣಿಕೆ ವಿರೋಧಿ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಉಪನ್ಯಾಸಕ, ಪತ್ರಿಕಾ ಪ್ರತಿನಿಧಿ ಮಹಾಂತೇಶ ನೂಲಾನವರ ತಿಳಸಿದ್ದಾರೆ.
ಕಾರ್ಯಕ್ರಮದ ಸಾನಿಧ್ಯವನ್ನು ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಪಾವನ ಸಾನಿಧ್ಯವನ್ನು ವಹಿಸಿಕೊಳ್ಳಲಿದ್ದಾರೆ. ಸಿಂದಗಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ನಾಗೇಶ ಮೊಗೇರ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಎಸ್.ಎಮ್.ಪೂಜಾರಿ ವಹಿಸುವರು. ಮುಖ್ಯಅತಿಥಿಗಳಾಗಿ ವಕೀಲರ ಸಂಘದ ಅಧ್ಯಕ್ಷ ಎಸ್.ಬಿ.ಪಾಟೀಲ, ಅಪರ ಸರಕಾರಿ ವಕೀಲ ಭೀ.ಜಿ.ನೆಲ್ಲಗಿ, ಸಿಡಿಪಿಒ ಶಂಭುಲಿಂಗ ಹಿರೇಮಠ, ಸಹಾಯಕ ಸರಕಾರಿ ವಕೀಲ ಆನಚಿದ ರಾಠೋಡ ಇರುವರು. ಉಪನ್ಯಾಸವನ್ನು ಎಸಿಡಿಪಿಒ ಎಸ್.ಎನ್.ಕೋರವಾರ ಮಾಡಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
