ಸಿಂದಗಿ: ಪಟ್ಟಣದ ಸಾತವೀರೇಶ್ವರ ಸಭಾಭವನದಲ್ಲಿ ಜು.೩೦ರಂದು ಬೆಳಿಗ್ಗೆ ೧೦ಗಂಟೆಗೆ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಅಂಗ ಸಂಸ್ಥೆಯಾದ ಆರ್.ಡಿ.ಪಾಟೀಲ, ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಪಠ್ಯಪೂರಕ ಚಟುವಟಿಕೆ, ರೋವರ್ ಮತ್ತು ರೇಂಜರ್, ಭಾರತ ಸೇವಾದಳ, ಎನ್.ಎಸ್.ಎಸ್. ಘಟಕಗಳ ಉದ್ಘಾಟನೆ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರಿಕ್ಷೇಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಚಾರ್ಯ ಬಿ.ಎಂ.ಸಿಂಗನಳ್ಳಿ ತಿಳಿಸಿದ್ದಾರೆ.
ಕಾರ್ಯಕ್ರಮದ ಸಾನಿಧ್ಯವನ್ನು ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ವಹಿಸುವರು. ಉದ್ಘಾಟಕರಾಗಿ ಧಾರವಾಡದ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಅಧ್ಯಕ್ಷ ಡಿ.ಎಂ.ಹಿರೇಮಠ ಆಗಮಿಸುವರು.
ಮುಖ್ಯ ಅತಿಥಿಗಳಾಗಿ ಧಾರವಾಡದ ಚಲನಚಿತ್ರ ಮತ್ತು ಕಿರುತೆರೆ ಕಲಾವಿದರು ಅನಚಿತ ದೇಶಪಾಂಡೆ, ಸಂಸ್ಥೆಯ ಸಹಕಾರ್ಯದರ್ಶಿ ಅಶೋಕ ವಾರದ, ನಿರ್ದೇಶಕ ಎಚ್.ಎಂ.ಪೂಜಾರ ಇರಲಿದ್ದಾರೆ. ಅಧ್ಯಕ್ಷತೆಯನ್ನು ಪ್ರಾಚಾರ್ಯ ಬಿ.ಎಂ ಸಿಂಗನಳ್ಳಿ ವಹಿಸುವರು, ಕಾರ್ಯಕ್ರಮದಲ್ಲಿ ನಿವೃತ್ತರಾದ ವ್ಹಿ.ಡಿ.ಪಾಟೀಲ ಹಾಗೂ ಶಿವಸಿಂಪಗೇರ ಅವರನ್ನು ಸನ್ಮಾನಿಸಲಾಗುವುದು ಎಂದು ಉಪನ್ಯಾಸಕ, ಚರ್ಚಾಕೂಟ ವಿಭಾಗದ ಕಾರ್ಯಾಧ್ಯಕ್ಷ ಎಸ್.ಜಿ.ಮಾರ್ಸನಳ್ಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
