ವಿಜಯಪುರ: ಚಿಕ್ಕಬಳ್ಳಾಪೂರ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ವತಿಯಿಂದ ಕೊಡುವ 2024 ರ ರಾಜ್ಯಮಟ್ಟದ ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿಗೆ ತಿಕೋಟಾ ತಾಲ್ಲೂಕಿನ ಟಕ್ಕಳಕಿ ಕರ್ಫೆವಸ್ತಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಬಬಲೇಶ್ವರ ತಾಲ್ಲೂಕಿನ ಕೆಂಗಲಗುತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಯ್ಕೆಯಾಗಿದ್ದು,ಚಿಕ್ಕಬಳ್ಳಾಪೂರದ ಸತ್ಯಸಾಯಿ ಗ್ರಾಮ ಮುದ್ದೇನಹಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರು ಪ್ರಶಸ್ತಿ ಸ್ವೀಕರಿಸಿದರು.
ಪ್ರಶಸ್ತಿಯು ₹ 10 ಸಾವಿರ ನಗದು ಹಾಗೂ ಆಕರ್ಷಕ ಪಾರಿತೋಷಕ ಒಳಗೊಂಡಿದೆ.
ಪ್ರಾಥಮಿಕ ಶಿಕ್ಷಣ ಸಾರ್ವತ್ರಿಕರಣ ಮಾಡಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವಂತಹ ಉತ್ತಮ ಶಾಲೆಯಾಗಿ ರೂಪಗೊಂಡು ಶಾಲಾ ಪರಿಸರವನ್ನು ಹಸರಿಕರಣ ಮಾಡಿ ಗುಣಾತ್ಮಕ ಶಿಕ್ಷಣ ಕೊಡುವ ಜೊತೆಗೆ ಸ್ವಚ್ಛ ಪರಿಸರ ನಿರ್ಮಾಣ ಮಾಡಿದ್ದಾರೆ.
ಪ್ರಶಸ್ತಿ ಪಡೆದ ಶಾಲೆಗಳಿಗೆ ಬಿಇಓ ಪ್ರಮೋದಿನಿ ಬಳೋಲಮಟ್ಟಿ, ಸಿಆರ್ಪಿ ಎಂ.ಎಂ.ಜೇವೂರ, ಕೆ.ಕೆ.ಅಸ್ಕಿ, ಎಸ್ಡಿಎಂಸಿ ಅಧ್ಯಕ್ಷರು ಶುಭ ಕೋರಿದ್ದಾರೆ. ಮಾರುತಿ ಲಮಾಣಿ, ಸಿದ್ದಾರಾಮ ಝಲ್ಲಿ, ಹಣಮಂತ ಕಾತರಕಿ ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

