Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಇದ್ದರೆ ಗುರಿ ತಲುಪಲು ಸಾಧ್ಯ :ಹಳಿಂಗಳಿ
(ರಾಜ್ಯ ) ಜಿಲ್ಲೆ

ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಇದ್ದರೆ ಗುರಿ ತಲುಪಲು ಸಾಧ್ಯ :ಹಳಿಂಗಳಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ವಿದ್ಯಾರ್ಥಿಗಳು ಯಾವುದನ್ನು ಸುಲಭವಾಗಿ ಒಪ್ಪದೇ ವಿವೇಚನಾ ಶಕ್ತಿಯನ್ನು ಬಳಸಿಕೊಂಡು ವಿಷಯವನ್ನು ಅರ್ಥಮಾಡಿಕೊಳ್ಳುವ ಆತ್ಮವಿಶ್ವಾಸ ಇದ್ದರೆ ಗುರಿ ತಲುಪಲು ಸಾಧ್ಯವಾಗುತ್ತದೆ ಎಂದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ವಿಶ್ರಾಂತ ಉಪನಿರ್ದೇಶಕ ಎಸ್. ವಾಯ್ ಹಳಿಂಗಳಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಇತ್ತಿಚಿಗೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆದ ಜಿಲ್ಲಾ ತಳವಾರ ಸಮಾಜ ಹಾಗೂ ಜ್ಞಾನ ಗಂಗಾ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ನಡೆದ ೬ನೇ ವರ್ಷದ ಪ್ರತಿಭಾ ಪುರಸ್ಕಾರ ನಿಮಿತ್ತ ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸೇವಾ ನಿವೃತ್ತ ನೌಕರರ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮನಸ್ಸಿದ್ದರೇ ಮಾರ್ಗ ಎಂಬಂತೆ ಯಾವುದೆ ಗುರಿ ಸಾಧಿಸುವ ಛಲ ಹೊಂದಿರಬೇಕು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಎಂತಹದೇ ಕಠಿಣ ಸವಾಲು ಎದುರಾದರೆ ಅದನ್ನು ಬಗೆಹರಿಸುವ ಮನೋಭಾವ ತಿಂಬಿರಬೇಕು. ಪಾಲಕರು ತಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ, ಶಿಕ್ಷಣ, ಹಿರಿಯರಿಗೆ ಗೌರವಿಸುವುದನ್ನು ಪ್ರಾಥಮಿಕ ಹಂತದಿಂದಲೇ ಕಲಿಸುವುದು ಸೂಕ್ತ ಎಂದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಜ್ಞಾನ ಗಂಗಾ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರಾದ ಮಹಾದೇವ ಲಗಮಣ್ಣಾ ಸೊನ್ನ ಮಾತನಾಡಿ, ಜ್ಞಾನ ಗಂಗಾ ವಿವಿಧೋದ್ದೇಶ ಸಹಕಾರ ಸಣ್ಣ ಪ್ರಮಾಣದ ಹಣಕಾಸಿನ ಸಂಸ್ಥೆಯಾಗಿದ್ದುಮ ಸಂಘದ ಸದಸ್ಯರೆಲ್ಲರೂ ಸೇರಿ ಒಮ್ಮತದಿಂದ ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿರುವುದು ಸಮಾಜದ ವಿದ್ಯಾರ್ಥಿಗಳಿಗೆ ವೇದಿಕೆ ಕಲ್ಪಿಸುತ್ತಿರುವುದು ಒಳ್ಳೆಯ ಕಾರ್ಯವಾಗಿದೆ. ವಿದ್ಯಾರ್ಥಿಗಳು ಪ್ರೇರೆಪಿತರಾಗಿ ಎಂಬ ಉದ್ದೇಶದಿಂದ ತಿರ್ಮಾನ ತೆಗೆದುಕೊಂಡು ೬ ನೇ ವರ್ಷದಿಂದ ವಿದ್ಯಾರ್ಥಿಗಳನ್ನು ಪ್ರೋತ್ಸಾಯಿಸುತ್ತಾ ಬಂದಿದೆ. ಇದರಿಂದ ಸಮಾಜದ ಬಾಂಧವರ ಸಹಭಾಗಿತ್ವವು ಸಹ ವಿದ್ಯಾರ್ಥಿಗಳ ಯಶೋಗಾಥೆಗೆ ಕಾರಣವಾಗಲಿ ಎಂದು ಆಶಿಸಿದರು.
ಇನ್ನೋರ್ವ ಅತಿಥಿ ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತರಾದ ರಾಜಶೇಖರ ಕೋಲ್ಹಾರ ಮಾತನಾಡಿ, ಮಕ್ಕಳ ಉಜ್ವಲ ಭವಿಷ್ಯ ನಿರ್ಮಾಣ ಮಾಡುವ ಧಾವಂತದಲ್ಲಿ ಅವರನ್ನು ತಂದೆ ತಾಯಿಯ ಪ್ರೀತಿಯಿಂದ ವಂಚಿಸುತ್ತಿದ್ದೇವೆ. ಹಾಗಾಗದೇ ಎಚ್ಚರಿಕೆಯಿಂದ ಅವರಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಭಾಂಧವ್ಯ ವೃದ್ಧಿಯಾಗುವಂತೆ ನೋಡಿಕೊಳ್ಳಬೇಕು ಎಂದು ಹೇಲಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಜ್ಞಾನ ಗಂಗಾ ವಿವಿಧೋದ್ದೇಶ ಅಧ್ಯಕ್ಷ ಡಾ.ಅಶೋಕ ಸಾಸನೂರ, ಸಮಾಜದ ವಿದ್ಯಾರ್ಥಿಗಳಿಗಾಗಿ ಪ್ರತಿಭಾ ಪುರಸ್ಕಾರ ಏರ್ಪಡಿಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಿ ಅವರು ಮನೋಬಲ ಹೆಚ್ಚಿಸಲು ಪ್ರತಿಭಾ ಪುರಸ್ಕಾರ ಒಂದು ವೇದಿಕೆಯಾಗಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು ಇದರೊಂದಿಗೆ ನಿವೃತ್ತ ನೌಕರರನ್ನು ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಸಿದ್ದಣ್ಣ ಓತಿಹಾಳ, ರಾಜೇಂದ್ರ ಕೊಂಡಗೂಳಿ, ಎಸ್.ಎಸ್. ಕರಕಲಮನಿ, ಕೆ.ಪಿ. ಮನಗೂಳಿ, ಸುಭಾಸ ನಂದಿಹಾಳ, ಆರ್.ಎಂ. ಯಲಗೋಡ, ಐ.ಬಿ. ಚೌಧರಿ, ಎಸ್.ಸಿ. ಕಮತಗಿ, ಆರ್.ಎಸ್. ವಾಲಿಕಾರ, ಲಕ್ಷ್ಮಣ ಜಾಯವಾಡಗಿ, ಆನಂದ ವಿ. ಬಂದರವಾಡ, ಪರಶುರಾಮ ಭೀ. ವಾಲಿಕಾರ , ಶಿವರಾಜ ಗೋಪಾಲ, ಮನಗೂಳಿ, ಶಿವಾನಂದ ಅಂಬಿಗೇರ, ರವಿ ಮೈಲಿಕರ, ಎಸ್.ಎಸ್. ಗಾರ, ಎಸ್.ಎ. ಅಹಿರಸಂಗ, ವಸಂತ ನಾಯಕ, ರಂಗನಾಥ ಅಕ್ಕಲಕೋಟಿ, ಅಹಿರಸಂಗ, ಎಸ್.ಎಸ್. ಗಾಣುರ, ಭರತ್ ಕೋಳಿ ಹಾಗೂ ಪಾಲಕರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿಕಾಸ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಚ್.ಜಿ. ತೊನಶ್ಯಾಳ, ರಾಜು ಇಟ್ಟಂಗಿಹಾಳ, ಮಹಾಂತಪ್ಪ ಸಂಗಪ್ಪ ವಾಲಿಕಾರ, ಶಿಕ್ಷಣ ಕ್ಷೇತ್ರದ ವಿಶೇಷ ಸಾಧಕರಾದ ತಾಳಿಕೋಟೆಯ ಗುರುಮಾತೆಯರಾದ ಲಲಿತಾಬಾಯಿ ಪರಸಪ್ಪ ಅಂಬಿಗೇರ ಇವರನ್ನು ಸನ್ಮಾನಿಸಲಾಯಿತು.
ಶಿಕ್ಷಕರಾದ ಹನುಮಂತ ಬೂದಿಹಾಳ ಹಾಗೂ ದಂಪತಿಗಳು ನಿರೂಪಣೆ ನೆರವೇರಿಸಿದರು.
ದತ್ತಾತ್ರೇಯ ಹಿಪ್ಪರಗಿ ಮತ್ತು ಮಂಜುಳಾ ಹಿಪ್ಪರಗಿ ಸಂಗೀತ ಕಾರ್ಯಕ್ರಮ ನೀಡಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.