ಚಡಚಣ: ಉಮರಜ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರು ಮುಕುಂದ ಅಡಕೆಯವರಿಗೆ ‘ಕನಕ ಅಧ್ಯಯನ ಪೀಠ, ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಹಾಗೂ ಚೇತನ ಫೌಡೇಶನ್ ಇವರುಗಳ ಸಂಯುಕ್ತಾಶ್ರಯದಲ್ಲಿ ಕೊಡಮಾಡಿಲ್ಪಡುವ “ಶಿಕ್ಷಕರತ್ನ ರಾಜ್ಯ ಪ್ರಶಸ್ತಿ” ನೀಡಿ ಗೌರವಿಸಲಾಗಿದೆ.
ಸಾವಿರಾರು ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಿರುವ ಇವರ ಶಿಕ್ಷಣ ಕ್ಷೇತ್ರದ ಸೇವೆಯನ್ನು ಪರಿಗಣಿಸಿ, ಶಿಕ್ಷಕರತ್ನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪ್ರಶಸ್ತಿ ಪಡೆದ ಇವರಿಗೆ ಉಮರಜ ಹಾಗೂ ರೇವತಗಾಂವದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಮುಖ್ಯ ಗುರುಗಳು, ಸಹ ಶಿಕ್ಷಕ ಸಿಬ್ಬಂದಿ ವರ್ಗ, ಎಸ್‌ಡಿಎಂಸಿ ಅಧ್ಯಕ್ಷರು ಮತ್ತು ಸರ್ವ ಸದಸ್ಯರು, ಗ್ರಾಮಸ್ಥರು ಸೇರಿದಂತೆ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

