ಢವಳಗಿ: ವಿಜಯಪುರದ ಪೋಲೀಸ್ ಸಮುದಾಯ ಭವನದಲ್ಲಿ ಜು.28 ರಂದು ನಡೆದ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಂಡ ಪತ್ರಿಕಾ ದಿನಾಚರಣೆ, ಸಾಧಕರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮುದ್ದೇಬಿಹಾಳ ತಾಲ್ಲೂಕಿನ ಢವಳಗಿ ಗ್ರಾಮದ ವರದಿಗಾರ ಜಿ.ಎನ್. ಬೀರಗೊಂಡ(ಮುತ್ತು), ಹಾಗೂ ಡೈಲಿ ಸಾಲಾರ್ ಪತ್ರಿಕೆಯ ತಾಲ್ಲೂಕು ವರದಿಗಾರ ಲಾಡ್ಲೆಮಶ್ಯಾಕ ನದಾಪ್ ಅವರನ್ನು ಸೇರಿದಂತೆ ಒಟ್ಟು 31 ಜನ ಪತ್ರಕರ್ತರನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ, ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಕಾನಿಪ ಸಂಘದ ರಾಜ್ಯಾಧ್ಯಕ್ಷ ಶಿವನಂದ ತಗಡೂರ, ಹಾಗೂ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್, ಜಿಲ್ಲಾಧಿಕಾರಿ ಟಿ ಭೂಬಲಾನ್, ಎಸ್ಪಿ ಋಷಿಕೇಶ ಸೋನಾವಣೆ, ಕಾನಿಪ ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ, ಜಿಲ್ಲಾ ಉಪಾಧ್ಯಕ್ಷ ಇಂದುಶೇಖರ ಮಣೂರ ಸೇರಿದಂತೆ ಹಲವು ಗಣ್ಯರು ಸೇರಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

