Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಿಲ್ಲೆಯ ಭೂಹಗರಣಗಳ ಕುರಿತು ಅಧಿವೇಶನದಲ್ಲಿ ಪ್ರಶ್ನೆ :ಶಾಸಕ ಯತ್ನಾಳ
(ರಾಜ್ಯ ) ಜಿಲ್ಲೆ

ಜಿಲ್ಲೆಯ ಭೂಹಗರಣಗಳ ಕುರಿತು ಅಧಿವೇಶನದಲ್ಲಿ ಪ್ರಶ್ನೆ :ಶಾಸಕ ಯತ್ನಾಳ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಜಿಲ್ಲೆಯಲ್ಲಿ ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ಅಕ್ರಮವಾಗಿ ಜಮೀನು, ನಿವೇಶನಗಳನ್ನು ಖರೀದಿ ಮತ್ತು ಮಾರಾಟದ ಕುರಿತಂತೆ ಚರ್ಚೆಗೆ ಬೆಂಗಳೂರು ಮಳೆಗಾಲ ಅಧಿವೇಶನದಲ್ಲಿ ಪ್ರಶ್ನಿಸಲಾಗಿತ್ತು. ಆದರೆ. ಸರ್ಕಾರ ಚರ್ಚೆಗೆ ಅವಕಾಶ ಕಲ್ಪಿಸದೆ, ಲಿಖಿತ ಉತ್ತರ ಮಾತ್ರ ನೀಡಿದ್ದು, ಮುಂದಿನ ಬೆಳಗಾವಿ ಅಧಿವೇಶನದಲ್ಲಿ ಈ ಗಂಭೀರ ವಿಷಯದ ಕುರಿತು ಗಮನಸೆಳೆಯಲಾಗುವುದು ಎಂದು ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ತಿಳಿಸಿದ್ದಾರೆ.
ನಗರದಲ್ಲಿ ಕೆಲವರು ಪತ್ರಿಕಾಗೋಷ್ಠಿ ನಡೆಸಿ, ನಗರ ಶಾಸಕರು ಸದನದಲ್ಲಿ ಧ್ವನಿ ಎತ್ತಬೇಕೆಂದು ಹೇಳುವ ಮೊದಲೇ, ಅಂದರೆ ಜು.೬ ರಂದು ಪ್ರಶ್ನೆ ಕೇಳಲಾಗಿದ್ದು, ಜು.೨೨ ರಂದು ಕಂದಾಯ ಇಲಾಖೆ ಸಚಿವರು ಲಿಖಿತ ಉತ್ತರ ನೀಡಿದ್ದಾರೆ.
ಕಳೆದ ಮೂರು ವರ್ಷಗಳಲ್ಲಿ ವಿಜಯಪುರ ಜಿಲ್ಲೆಯಲ್ಲಿ ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ಜಮೀನು, ನಿವೇಶನಗಳನ್ನು ಖರೀದಿ ಮತ್ತು ಮಾರಾಟ ಮಾಡಿರುವ ಪ್ರಕರಣಗಳೆಷ್ಟು? ಖೊಟ್ಟಿ ದಾಖಲಾತಿ ಸೃಷ್ಟಿಸಿ ಆಸ್ತಿ ಮಾರಾಟ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಷ್ಟು ಆರೋಪಿಗಳಿಗೆ ಶಿಕ್ಷೆ ನೀಡಲಾಗಿದೆ? ಮೋಸ ಹೋಗಿರುವ ಮಾಲೀಕರಿಗೆ ಆಸ್ತಿಗಳನ್ನು ಮರಳಿಸಲಾಗಿದೆಯೇ? ಇಂತಹ ಪ್ರಕರಣಗಳನ್ನು ತಡೆಗಟ್ಟಲು ಸರ್ಕಾರ ಕೈಗೊಳ್ಳಲಿರುವ ಕ್ರಮಗಳೇನು? ಈ ರೀತಿಯಾಗಿ ಪ್ರಶ್ನೆ ಕೇಳಲಾಗಿತ್ತು.
ಇದಕ್ಕೆ ಕಂದಾಯ ಸಚಿವರು, ವಿಜಯಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಒಟ್ಟು ಐದು ಉಪನೋಂದಣಿ ಕಚೇರಿಗಳಿದ್ದು, ಈ ಪೈಕಿ ವಿಜಯಪುರ ಮತ್ತು ಇಂಡಿ ಉಪನೋಂದಣಿ ಕಚೇರಿಯಲ್ಲಿ ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ೨ ದಸ್ತಾವೇಜುಗಳು ನೋಂದಣಿಯಾಗಿದ್ದು, ಈ ಬಗ್ಗೆ ತತ್ಸಬಂಧ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ಗಳು ದಾಖಲಾಗಿರುತ್ತವೆ.
ಖೊಟ್ಟಿ ಸುಳ್ಳು ಸ್ಪಷ್ಟನೆ ದಾಖಲಾತಿಗಳ ಆಧಾರದ ಮೇಲೆ ದಸ್ತಾಮೇಜು ನೋಂದಣಿ ತಡೆಗಟ್ಟಲು, ಸುಳ್ಳು ಸ್ಪಷ್ಟನೆ ದಸ್ತಾವೇಜುಗಳನ್ನು ನೋಂದಣಿ ಮಾಡಲು ನಿರಾಕರಿಸಲು ಹಾಗೂ ಜಿಲ್ಲಾ ನೋಂದಣಾಧಿಕಾರಿರವರು ಸಂಬಂಧಪಟ್ಟ ಪಕ್ಷಾಕಾರರಿಗೆ ಕಾರಣ ಕೇಳುವ ನೋಟಿಸ್ ಜಾರಿ ಮಾಡಿ ದಸ್ತಾವೇಜಿನ ನೋಂದಣಿಯನ್ನು ರದ್ದುಪಡಿಸಲು ನೋಂದಣಿ ಕಾಯ್ದೆ ೧೯೦೮ ಗೆ ಕರ್ನಾಟಕ ರಾಜ್ಯಕ್ಕೆ ಅನ್ವಯವಾಗುವಂತೆ ನೋಂದಣಿ (ಕರ್ನಾಟಕ ತಿದ್ದುಪಡಿ) ವಿಧೇಯಕ, ೨೦೨೩ (೨೦೨೩ರ ವಿಧಾನಸಭೆಯ ವಿಧೇಯಕ ಸಂಖ್ಯೆ-೧೧) ರನ್ವಯ ಹೊಸದಾಗಿ ಕಲಂ ೨೨-ಬಿ, ೨೨-ಸಿ ಮತ್ತು ೨೨-ಡಿ ಯನ್ನು ಸೇರ್ಪಡೆ ಮಾಡಲು ಕ್ರಮವಹಿಸಲಾಗಿದ್ದು, ಈ ತಿದ್ದುಪಡಿಗೆ ಘನವೆತ್ತ ರಾಷ್ಟ್ರಪತಿ ಯವರ ಅಂಕಿತ ಬಾಕಿ ಇರುತ್ತದೆ.
ದಸ್ತಾವೇಜು ನೋಂದಣಿ ಸಮಯದಲ್ಲಿ ಪಕ್ಷಕಾರರ ಆಧಾರ್ ಸಂಖ್ಯೆಯನ್ನು ಪರಿಶೀಲಿಸಲು, ವೆಲಿಡಿಟಿ ಆಫ್ ಕನ್ಸೆಂಟ್ ಬೇಸ್ಡ್ ಆಧಾರ್ ಅಥೆಂಟೇಷನ್ ಸರ್ವಿಸ್ ನ್ನು ದಿನಾಂಕ ೧೧-೦೩-೨೦೨೪ರ ಅಧಿಸೂಚನೆಯಲ್ಲಿ ಕರ್ನಾಟಕ ನೋಂದಣಿ ನಿಯಮಗಳು-೧೯೬೫ ರ ನಿಯಮ-೮೧ ಕ್ಕೆ ತಿದ್ದುಪಡಿ ತರುವ ಮೂಲಕ ಜಾರಿಗೆ ತರಲಾಗಿದೆ ಎಂದು ಲಿಖಿತ ಉತ್ತರ ನೀಡಿದ್ದಾರೆ.
ಇಂತಹ ಪ್ರಕರಣಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಪ್ರಕರಣದಲ್ಲಿ ಭಾಗಿಯಾದ ಪ್ರತಿಯೊಬ್ಬರಿಗೂ ಶಿಕ್ಷೆ ಆಗಬೇಕು, ಅಮಾಯಕರಿಗೆ ಅನ್ಯಾಯ ಆಗುವುದನ್ನು ತಪ್ಪಿಸಬೇಕೆಂಬುವುದೇ ನಮ್ಮ ಉದ್ದೇಶ. ಹೀಗಾಗಿ ಬೆಳಗಾವಿಯಲ್ಲಿ ನಡೆಯುವ ಚಳಿಗಾಲ ಅಧಿವೇಶನದಲ್ಲಿ ಈ ವಿಷಯ ಕುರಿತಂತೆ ಸರ್ಕಾರದ ಗಮನಸೆಳೆಯಲಾಗುವುದು ಎಂದು ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.