ಯಡ್ರಾಮಿ: ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಘಟಕದಿಂದ ಬುಧವಾರದಂದು ಪತ್ರಿಕಾ ದಿನಾಚರಣೆ ಹಾಗೂ ಅಭಿನಂದನೀಯ ವಿಶೇಷ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ತಾಲೂಕ ಅಧ್ಯಕ್ಷ ಸಂತೋಷ ನವಲಗುಂದ ತಿಳಿಸಿದ್ದಾರೆ.
ಪಟ್ಟಣದ ಜ್ಞಾನಭಾರತಿ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ (ಜು.31) ಬೆಳಗ್ಗೆ 9:30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಕಡಕೋಳ ಮಹಾಮಠದ ಶ್ರೀ ಡಾ.ರುದ್ರಮುನಿ ಶಿವಾಚಾರ್ಯರು ದಿವ್ಯ ಸಾನಿಧ್ಯ ವಹಿಸಲಿದ್ದು, ಯಡ್ರಾಮಿ ವಿರಕ್ತಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ಸಾನಿಧ್ಯ ವಹಿಸುವರು. ತಹಶೀಲ್ದಾರ ಶಶಿಕಲಾ ಪಾದಗಟ್ಟಿ ಉದ್ಘಾಟಿಸಲಿದ್ದು, ಸಂಘದ ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿ ದಿಕ್ಸೂಚಿ ನುಡಿ ಹೇಳಲಿದ್ದಾರೆ. ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಗಮನಾಥ ರೇವತಗಾಂವ, ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ.ಶಿವರಂಜನ್ ಸತ್ಯಂಪೇಟೆ ಉಪಸ್ಥಿತಿ ವಹಿಸುವರು.
ಇದೆ ವೇಳೆ 2024ರ ವಿ.ಎನ್.ಕಾಗಲಕರ್ ಪ್ರಶಸ್ತಿ ಹಾಗೂ ವಾರ್ಷಿಕ ಪ್ರಶಸ್ತಿ ಪಡೆದ ಪತ್ರಕರ್ತರಿಗೆ ವಿಶೇಷ ಸನ್ಮಾನ ನಡೆಯಲಿದೆ ಎಂದು ತಿಳಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

