ವಿಜಯಪುರ: ಆಗಸ್ಟ್ ೨ರಿಂದ ಆಗಸ್ಟ್ ೯ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ-೩ರ ಪರೀಕ್ಷೆ ಜರುಗಲಿದ್ದು, ಎಲ್ಲಾ ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಕೈಗೊಂಡು ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ಹಾಗೂ ಸುಸೂತ್ರವಾಗಿ ನಡೆಸಲು ಕ್ರಮವಹಿಸುವಂತೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಮಂಗಳವಾರ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-೩ರ ಸಿದ್ಧತಾ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಪರೀಕ್ಷೆಗೆ ನಿಯೋಜಿಸಿದ ವಿವಿಧ ಇಲಾಖೆಯ ಅಧಿಕಾರಿಗಳು ಸಮನ್ವಯದಿಂದ ಯಾವುದೇ ಲೋಪವಾಗದಂತೆ ವ್ಯವಸ್ಥಿತವಾಗಿ ಪರೀಕ್ಷೆ ನಿರ್ವಹಿಸಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿ ೧೩ ಪರೀಕ್ಷಾ ಕೇಂದ್ರಗಳಲ್ಲಿ ಆಗಸ್ಟ್ ೨ರಿಂದ ಆಗಸ್ಟ್ ೯ರವರೆಗೆ ನಡೆಯುವ ಪರೀಕ್ಷೆಯಲ್ಲಿ ೩,೨೬೫ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊAಡಿದ್ದಾರೆ. ಪರೀಕ್ಷಾ ಕೇಂದ್ರದಲ್ಲಿ ನಿಯೋಜನೆಗೊಂಡ ಅಧಿಕಾರಿಗಳು ಕಡ್ಡಾಯವಾಗಿ ಮೊಬೈಲ್ ಬಳಸುವುದನ್ನು ನಿಷೇಧಿಸಲಾಗಿದೆ ಎಂದು ಹೇಳಿದರು.
ಪರೀಕ್ಷೆ ನಡೆಯುವ ದಿನದಂದು ಪರೀಕ್ಷಾ ಕೇಂದ್ರದ ೨೦೦ ಮಿಟರ್ ಸುತ್ತಲಿನ ಪ್ರದೇಶವನ್ನು ಕಲಂ ೧೬೩ರ ಪ್ರಕಾರ ನಿಷೇಧಿತ ಪ್ರದೇಶವೆಂದೂ ಘೊಷಿಸಲಾಗಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್, ಸೈಬರ್ ಸೆಂಟರ್, ಕೋಚಿಂಗ್ ಸೆಂಟರ್‌ಗಳು ಪರೀಕ್ಷೆ ಮುಗಿಯುವವರೆಗೂ ತೆರೆಯದಂತೆ ಆದೇಶ ಹೊರಡಿಸಲಾಗಿದೆ ಎಂದು ಹೇಳಿದರು. ಪರೀಕ್ಷಾ ಕೇಂದ್ರಗಳ ಕೊಠಡಿಗಳಲ್ಲಿ ಉತ್ತಮ ಗಾಳಿ ಬೆಳಕು, ನೀರು, ಶೌಚಾಲಯದಂತಹ ಮೂಲಭೂತ ಸೌಕರ್ಯಗಳ ಇರುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಜಿಲ್ಲಾ ಖಜಾಣಾಧಿಕಾರಿ ಹಣಮಂತ ಕಾಲತಿಪ್ಸಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಎನ್.ಎಚ್. ನಾಗೂರ, ಡೈಯಟ್ ಪ್ರಾಂಶುಪಾಲರಾದ ಶ್ರೀಮತಿ ಉಮಾದೇವಿ ಸೊನ್ನದ, ಸಿ.ಟಿ.ಇ ಜಮಖಂಡಿಯ ಪ್ರಾಚಾರ್ಯರಾದ ಬಿ.ಎಸ್. ಜಗದೀಶ್ವರ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ನೋಡಲ್ ಅಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
ಎಸ್‌ಎಸ್‌ಎಲ್‌ಸಿ ಪರೀಕ್ಷೆ-೩ವ್ಯವಸ್ಥಿತವಾಗಿ ನಡೆಸಲು ಅಧಿಕಾರಿಗಳಿಗೆ ಎಡಿಸಿ ಸೂಚನೆ
Related Posts
Add A Comment

