ವಿಜಯಪುರ: ಹಲಸಂಗಿ ಗೆಳೆಯರ ಪ್ರತಿಷ್ಠಾನ ವತಿಯಿಂದ ಜುಲೈ ೩೧ರಂದು ಬೆಳಗ್ಗೆ ೧೦ ಗಂಟೆಗೆ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿನ ಶಾರಾದಾ ಸಭಾ ಭವನದಲ್ಲಿ ಮಧುರ ಚೆನ್ನರ ೧೨೧ನೇ ಜನ್ಮ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಡಾ.ಸಿ.ಕೆ. ಹೊಸಮನಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಾಹಿತಿ ಡಾ. ಸಂಗಮನಾಥ ಲೋಕಾಪುರ ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಸಿ.ಬಿ ನಾಟೀಕಾರ ಅವರು ವಹಿಸಲಿದ್ದಾರೆ. ಶ್ರೀಮತಿ ಶ್ರೀದೇವಿ ಪತ್ತಾರ ಸುಗಮ ಸಂಗೀತ ನಡೆಸಿಕೊಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
