Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾನವ ಕಳ್ಳ ಸಾಗಾಣಿಕೆ ತಡೆಯುವಲ್ಲಿ ಸಾರ್ವಜನಿಕರ ಜವಾಬ್ದಾರಿ ಮುಖ್ಯ
(ರಾಜ್ಯ ) ಜಿಲ್ಲೆ

ಮಾನವ ಕಳ್ಳ ಸಾಗಾಣಿಕೆ ತಡೆಯುವಲ್ಲಿ ಸಾರ್ವಜನಿಕರ ಜವಾಬ್ದಾರಿ ಮುಖ್ಯ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮಾನವ ಕಳ್ಳ ಸಾಗಾಣಿಕೆ ತಡೆ ಕಾರ್ಯಕ್ರಮದಲ್ಲಿ ನ್ಯಾಯಾಧೀಶ ರವೀಂದ್ರಕುಮಾರ ಅಭಿಮತ

ಮುದ್ದೇಬಿಹಾಳ: ಮಾನವ ಕಳ್ಳ ಸಾಗಾಣಿಕೆ ಕಾನೂನು ರೀತ್ಯ ಅಪರಾಧ. ಈ ಅಪರಾಧವನ್ನು ತಡೆಯುವಲ್ಲಿ ಸಾರ್ವಜನಿಕರ ಜವಾಬ್ದಾರಿ ಜಾಸ್ತಿ ಇದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ರವೀಂದ್ರಕುಮಾರ ಕಟ್ಟಿಮನಿ ಹೇಳಿದರು.
ಪಟ್ಟಣದ ನ್ಯಾಯಾಲಯದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ ಹಾಗೂ ಇತರ ಎಲ್ಲ ಸರಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾನವ ಕಳ್ಳ ಸಾಗಾಣಿಕೆ ತಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಚಿಕ್ಕ ಮಕ್ಕಳನ್ನ, ಹೆಣ್ಣು ಮಕ್ಕಳನ್ನ ಕದ್ದು ಮಾರಾಟ ಮಾಡಿ ಬೇರೆ ಚಟುವಟಿಕೆಗಳಲ್ಲಿ ತೊಡಗಿಸುತ್ತಿರುವ ಪ್ರಕರಣ ಜಾಸ್ತಿಯಾಗಿದ್ದರಿಂದ ಕಾನೂನು ಸೇವಾ ಪ್ರಾಧಿಕಾರದವತಿಯಿಂದ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆಯನ್ನು ಆಚರಿಸುವ ಮೂಲಕ ಜಾಗೃತಿ ನೀಡಲಾಗುತ್ತಿದೆ. ಮಾನವನಿಗೆ ಜೀವಿಸಲು ಸಂವಿಧಾನದಲ್ಲಿ ಅವಕಾಶ ನೀಡಲಾಗಿದೆ. ಅದನ್ನ ಯಾರಿಂದಲೂ ಕಸಿದುಕೊಳ್ಳಲು ಕಾನೂನಿನಲ್ಲಿ ಅವಕಾಶಗಳಿಲ್ಲ. ಸಾರ್ವಜನಿಕರು ಇಂತಹ ಪ್ರಕರಣಗಳನ್ನು ಕಂಡಲ್ಲಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡುವ ಮೂಲಕ ಮಾನವ ಕಳ್ಳ ಸಾಗಾಣಿಕೆಯನ್ನು ತಡೆಯಬೇಕು ಎಂದರು.
ಈ ವೇಳೆ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ ಮಾತನಾಡಿ, ಮಾನವ ಕಳ್ಳ ಸಾಗಾಣಿಕೆ ಪದ್ಧತಿ ಪುರಾತನ ಕಾಲದಿಂದ ಬಂದದ್ದು. ಹಿಂದಿನ ಜೀತ ಪದ್ಧತಿಯೇ ಇಂದು ಮಾನವ ಕಳ್ಳ ಸಾಗಾಣಿಕೆಯಾಗಿದೆ. ಮಾನವ ಕಳ್ಳ ಸಾಗಾಣಿಕೆಯಲ್ಲಿ ನಮ್ಮ ದೇಶ ಮೂರನೆಯ ನಮ್ಮ ರಾಜ್ಯ ಎರಡನೆಯ ಸ್ಥಾನದಲ್ಲಿದೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ಬಡತನ, ನಿರುದ್ಯೋಗ, ಅನಕ್ಷರತೆಯೇ ಇದಕ್ಕೆ ಕಾರಣ. ಸರ್ಕಾರ ಇವುಗಳಿಗೆ ಕಡಿವಾಣ ಹಾಕಲು ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದರೂ ಅವುಗಳ ಸರಿಯಾದ ಬಳಕೆಯಾಗದ ಕಾರಣ ಇಂತಹ ಬೆಳವಣಿಗೆಗಳು ನಡೆಯುತ್ತಿವೆ. ಮಾನವ ಕಳ್ಳ ಸಾಗಾಣಿಕೆ ತಡೆ ಕಾರ್ಯದಲ್ಲಿ ಸರ್ಕಾರ, ಇಲಾಖೆಗಳ ಮೇಲೆ ಅವಲಂಬಿತರಾಗದೇ ಸಾರ್ವಜನಿಕರೂ ಮುಂದಾಗಬೇಕು ಎಂದರು.
ಕಿರಿಯ ಶ್ರೇಣಿ ಸರ್ಕಾರಿ ಸಹಾಯಕ ಅಭಿಯೋಜಕ ಬಸವರಾಜ ಆಹೇರಿ ಮಾತನಾಡಿ, ಮಾನವ ಕಳ್ಳ ಸಾಗಾಣಿಕೆಯಾಗದಂತೆ ತಡೆಯಲು ಶಿಕ್ಷಣವೂ ಮುಖ್ಯ ಪಾತ್ರ ವಹಿಸುತ್ತದೆ. ಸಾರ್ವಜನಿಕರು ತಮ್ಮ ಮಕ್ಕಳಿಗೆ ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದರು.
ನ್ಯಾಯವಾದಿ ಎಂ.ಎಂ ಮಾನವ ಕಳ್ಳ ಸಾಗಾಣಿಕೆ ತಡೆ ಕಾಯ್ದೆ ಕುರಿತು ವಿಶೇಶ ಉಪನ್ಯಾಸ ನೀಡಿದರು. ಕಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಸಂಪತ್ತಕುಮಾರ ಬಳೂಳಗಿಡದ, ಪಿಎಸ್‌ಐ ಸಂಜಯ ತಿಪರೆಡ್ಡಿ, ಅಪರ ಸರ್ಕಾರಿ ವಕೀಲ ಎಚ್.ಎಲ್.ಸರೂರ, ಶಿಕ್ಷಣ ಸಂಯೋಜಕ ಎ.ಬಿ.ಬಗಲಿ, ಶಿರಸ್ತೇದಾರ ಎಂ.ಎ.ಬಾಗೇವಾಡಿ, ಹಿರಿಯ ನ್ಯಾಯವಾದಿ ಜೆ.ಎ.ಚಿನಿವಾರ ನ್ಯಾಯವಾದಿಗಳಾದ ಚೇತನ ಶಿವಶಿಂಪಿ, ಎಚ್.ಟಿ.ಪೂಜಾರಿ ನ್ಯಾಯಾಲಯದ ಸಿಬ್ಬಂದಿಗಳಾದ ಅರವಿಂದ ಕುಂಬಾರ, ಮಹಾಂತೇಶ ಹಚರೆಡ್ಡಿ ಸೇರಿದಂತೆ ಮತ್ತೀತರರು ಇದ್ದರು. ನ್ಯಾ.ಸಂಘದ ಉಪಾಧ್ಯಕ್ಷ ಎಚ್.ಜಿ.ನಾಗೋಡ ಸ್ವಾಗತಿಸಿ, ನಿರ್ವಹಿಸಿದರು. ನ್ಯಾಯವಾದಿ ಶ್ರೀದೇವಿ ರಾಜೂರ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026
    In ದಿನಪತ್ರಿಕೆ
  • ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು
    In (ರಾಜ್ಯ ) ಜಿಲ್ಲೆ
  • ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!
    In (ರಾಜ್ಯ ) ಜಿಲ್ಲೆ
  • ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರು ವಸ್ತುನಿಷ್ಠವಾಗಿ, ಶೋಧನೆ ಮಾಡಿ ಬರೆಯಬೇಕು
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷರಾಗಿ ಮಹೇಶ್, ಉಪಾಧ್ಯಕ್ಷರಾಗಿ ಜಯ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಿ.ವಿ.ರಾಮನ್ ಪ.ಪೂ ಕಾಲೇಜ್ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಗುರು ಸಂಗನಬಸವ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ & ಅಗ್ನಿ ಪ್ರವೇಶ
    In (ರಾಜ್ಯ ) ಜಿಲ್ಲೆ
  • ಬೊಗಸೆಯಲ್ಲಿ ಅರಳುವ ನಿನ್ನಂದದ ಮುಖಕೆ
    In ವಿಶೇಷ ಲೇಖನ
  • ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.