ವಿಜಯಪುರ: ಕರ್ನಾಟಕ ಉಪ ಲೋಕಾಯುಕ್ತರಾದ ನ್ಯಾ. ಕೆ.ಎನ್.ಫಣೀಂದ್ರ ಅವರು ಆಗಸ್ಟ್ ೨೨ ರಿಂದ ೨೪ರವರೆಗೆ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಆಗಸ್ಟ್ ೨೨ರ ಬೆಳಿಗ್ಗೆ ೬:೪೫ಕ್ಕೆ ವಿಜಯಪುರಕ್ಕೆ ಆಗಮಿಸುವ ಅವರು, ಅಂದು ಬೆಳಿಗ್ಗೆ ೧೦ ರಿಂದ ಸಂಜೆ ೫ರವರೆಗೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಆಲಿಸುವರು.
ಸಂಜೆ ೫:೩೦ರಿಂದ ೬:೩೦ರವರೆಗೆ ಕಾನೂನು ಸೇವಾ ಪ್ರಾಧಿಕಾರದೊಂದಿಗೆ ರಂಗಮಂದಿರದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಏರ್ಪಡಿಸಿರುವ ಕರ್ನಾಟಕ ಲೋಕಾಯುಕ್ತ ಕಾಯ್ದೆಗೆ ಸಂಬಂಧಿಸಿದ ಕಾನೂನು ಸಾಕ್ಷರತಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅಂದು ವಿಜಯಪುರದಲ್ಲಿ ವಾಸ್ತವ್ಯ ಮಾಡುವರು.
ಆಗಸ್ಟ್ ೨೩ರ ಬೆಳಿಗ್ಗೆ ೯:೪೫ ರಿಂದ ೧೦:೪೫ರವರೆಗೆ ಸಾರ್ವಜನಿಕ ಆಡಳಿತ ಮತ್ತು ಆಡಳಿತದ ಸುಧಾರಣೆಯಲ್ಲಿ ವಕೀಲರ ಪಾತ್ರದ ಕುರಿತು ಜಿಲ್ಲಾ ನ್ಯಾಯಾಲಯ ಸಂಕೀರ್ಣದ ವಿಜಯಪುರ ವಕೀಲರ ಸಂಘದ ಸಭಾಂಗಣದಲ್ಲಿ ನಡೆಯುವ ಸಂವಾದದಲ್ಲಿ ಪಾಲ್ಗೊಳ್ಳುವರು.
ಅಂದು ಬೆಳಿಗ್ಗೆ ೧೧ ರಿಂದ ೧೧:೩೦ರವರೆಗೆ ಕುಂದು ಕೊರತೆ ಅಹವಾಲುಗಳ ಕುರಿತ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಬೆಳಿಗ್ಗೆ ೧೧:೩೦ ರಿಂದ ೫ರವರೆಗೆ ಜಿಲ್ಲೆಗೆ ಸಂಬಂಧಿಸಿದ ಬಾಕಿ ಇರುವ ದೂರುಗಳ ವಿಚಾರಣೆ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆಸಿ, ಅಂದು ವಿಜಯಪುರದಲ್ಲಿ ವಾಸ್ತವ್ಯ ಮಾಡುವರು.
ಆಗಸ್ಟ್ ೨೪ ರಂದು ಬೆಳಿಗ್ಗೆ ೯ ರಿಂದ ೧೦ರವರೆಗೆ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಸಾರ್ವಜನಿಕ ಆಡಳಿತದಲ್ಲಿ ಲೋಕಾಯುಕ್ತದ ಮತ್ತು ಕಾನೂನು ಸೇವೆಗಳ ಪ್ರಾಧಿಕಾರದ ಪಾತ್ರ ವಿಷಯದ ಬಗ್ಗೆ ಜಿಲ್ಲೆಯ ನ್ಯಾಯಾಂಗ ಅಧಿಕಾರಿಗಳ ಸಭೆ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವರು. ೧೦.೩೦ ರಿಂದ ೧೨ ಗಂಟೆಯವರೆಗೆ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳೊಂದಿಗೆ ಜಿಲ್ಲಾ ನ್ಯಾಯಾಂಗ ಸಂರ್ಕೀಣದ ಸಭಾಂಗಣದಲ್ಲಿ ಸಭೆ ನಡೆಸುವವರು. ಮಧ್ಯಾಹ್ನ ೩ ಗಂಟೆಗೆ ವಿವಿಧ ಕಚೇರಿಗಳಿಗೆ ಅನೀರಿಕ್ಷಿತ ಭೇಟಿ ನೀಡುವರು. ರಾತ್ರಿ ೯.೪೦ಕ್ಕೆ ವಿಜಯಪುರದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
