ವಿಜಯಪುರ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಇಲಾಖೆಯ ೧೩ ಫಲಾನುಭವಿ ಆಧಾರಿತ ಯೋಜನೆಗಳನ್ನು ೨೦೨೪-೨೫ನೇ ಸಾಲಿನಲ್ಲಿ ಸೇವಾಸಿಂಧು, ಗ್ರಾಮ್‌ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಸಿಟಿಜೆನ್ಸ್ ಫೋರ್ಟಲ್ ಆನ್‌ಲೈನ್ ತಂತ್ರಾಂಶದಡಿ ಅಳವಡಿಸಲಾಗಿದ್ದು, ಈ ಯೋಜನೆಯಡಿ ಸೌಲಭ್ಯ ಪಡೆಯಲು (https:sevasindhu. karnataka.gov.in/ sevasindhu/Department) ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಇಲಾಖೆಯ ೧೩ ಫಲಾನುಭವಿ ಆಧಾರಿತ ಆನ್‌ಲೈನ್ ವೇದಿಕೆಯಲ್ಲಿ ಅಳವಡಿಸಲಾಗಿರುವ ಪ್ರತಿಭಾವಂತ ಅಂಗವಿಕಲ ವಿದ್ಯಾರ್ಥಿಗಳಿಗೆ ಪ್ರೊತ್ಸಾಹಧನ ಯೋಜನೆ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಆಧಾರ ಯೋಜನೆ, ಮರಣ ಪರಿಹಾರ ನಿಧಿ, ಸಾಧನೆ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಸಾಧನ ಸಲಕರಣೆಗಳ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ದೃಷ್ಟಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೈಲ್ ಕಿಟ್ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ: ೩೧-೦೮-೨೦೨೪ ಕೊನೆಯ ದಿನಾಂಕವಾಗಿದೆ.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ವಿವಿಧ ತಾಲೂಕಾ ಪಂಚಾಯತಿಯ ವಿವಿದ್ದೊದ್ದೇಶ ಪುನರ್ವಸತಿ ಕಾರ್ಯಕರ್ತರಾದ ವಿಜಯಪುರ ತಾಲೂಕಿನ ರವಿ ರಾಠೋಡ ಮೊ: ೯೦೩೫೫೫೩೩೩೭, ಸಿಂದಗಿ ತಾಲೂಕಿನ ಮುತ್ತುರಾಜ ಸಾತಿಹಾಳ ಮೊ: ೯೯೮೦೦೧೯೬೩೫, ಬಸವನಬಾಗೇವಾಡಿ ತಾಲೂಕಿನ ಎಸ್.ಸಿ.ಬಿರಾದಾರ ಮೊ: ೮೭೨೨೧೩೫೬೬೦, ಇಂಡಿ ತಾಲೂಕಿನ ಪರಶುರಾಮ ಬೋಸಲೆ ಮೊ: ೯೯೭೨೪೪೧೪೬೪ ಹಾಗೂ ಮುದ್ದೇಬಿಹಾಳ ತಾಲೂಕಿನ ಎಸ್.ಕೆ.ಘಾಟಿ ಮೊ: ೯೭೪೦೬೮೨೯೭೯ ಸಂಖ್ಯೆಗೆ ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
ವಿವಿಧ ಯೋಜನೆಯಡಿ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ
Related Posts
Add A Comment
