ವಿಜಯಪುರ: ಕ್ಯಾನ್ಸರ್ ಶಸ್ತ್ರಚಿಕಿತ್ಸೆಯ ಕ್ಷೇತ್ರದಲ್ಲಿ ನಿರಂತರ ಅವಿಷ್ಕಾರಗಳಾಗುತ್ತಿದ್ದು, ತಜ್ಞ ವೈದ್ಯರು ಅವುಗಳ ಬಗ್ಗೆ ಜ್ಞಾನ ಹೊಂದುವುದು ಅವಶ್ಯವಾಗಿದೆ ಎಂದು ಬೆಂಗಳೂರಿನ ಆಸ್ಟರ್ ಆಸ್ಪತ್ರೆಯ ಖ್ಯಾತ ಹಿರಿಯ ಕ್ಯಾನ್ಸರ್ ಶಸ್ತ್ರಚಿಕಿತ್ಸಾ ತಜ್ಞ ವೈದ್ಯ ಡಾ. ಜಗನ್ನಾಥ ದೀಕ್ಷಿತ ಹೇಳಿದ್ದಾರೆ.
ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರಚಿಕಿತ್ಸೆ ವಿಭಾಗದ ವತಿಯಿಂದ ಕ್ಯಾನ್ಸರ್ ಶಸ್ತ್ರಚಿಕಿತ್ಸೆಯ ತತ್ವಗಳು ಕುರಿತು, ಆಸ್ಪತ್ರೆಯ ವೈದ್ಯಕೀಯ ಶಿಕ್ಷಣ ಸಭಾಂಗಣದಲ್ಲಿ ಬುಧವಾರ ನಡೆದ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಇಂದು ತೆರೆದ ಶಸ್ತ್ರಚಿಕಿತ್ಸೆಗಳಿಗಿಂತ ಎಂಡೊಸ್ಕೋಪಿಕ್ ಮತ್ತು ರೋಬೊಟಿಕ್ ಶಸ್ತ್ರಚಿಕಿತ್ಸೆಗಳು ಹೆಚ್ಚಾಗಿ ನಡೆಯುತ್ತಿವೆ. ಇದರಿಂದ ರೋಗಿಗಳು ಶೀಘ್ರ ಗುಣಮುಖರಾಗಲು ಸಹಕಾರಿಯಾಗಿದೆ. ಘನವಸ್ತು ಅಂಗಾಂಗದ ಕ್ಯಾನ್ಸರ್ಗೆ ಶಸ್ತ್ರಚಿಕಿತ್ಸೆಯು ಮೂಲ ಚಿಕಿತ್ಸಾ ಪದ್ಧತಿಯಾಗಿದ್ದು, ರೋಬೊಟಿಕ್ ಶಸ್ತ್ರಚಿಕಿತ್ಸೆಯಿಂದ ರೋಗವನ್ನು ಬುಡಮೇಲು ತೆರವು ಮಾಡಬಹುದಾಗಿದೆ. ಜನಸಾಮಾನ್ಯರಿಗೆ ಕ್ಯಾನ್ಸರ್ ರೋಗದ ಬಗ್ಗೆ ಜಾಗೃತಿ ಮೂಡಿಸಿ, ಅದನ್ನು ತಡೆಯುವ ವಿಧಾನಗಳು ಮತ್ತು ಪ್ರಾಥಮಿಕ ಹಂತದಲ್ಲಿಯೇ ಅದನ್ನು ಪತ್ತೆ ಮಾಡಿ ಅವಶ್ಯಕ ಚಿಕಿತ್ಸೆ ನೀಡಿದರೆ ಉತ್ತಮ ಫಲಿತಾಂಶವನ್ನು ಪಡೆಯಬಹುದು ಎಂದು ಅವರು ತಿಳಿಸಿದರು.
ಇದೇ ವೇಳೆ ಬೆಂಗಳೂರಿನ ಆಸ್ಟರ್ ಆಸ್ಪತ್ರೆಯ ಹಿರಿಯ ಕ್ಯಾನ್ಸರ್ ಶಸ್ತ್ರಚಿಕಿತ್ಸಕ ಡಾ. ಜಗನ್ನಾಥ ದೀಕ್ಷಿತ ಅವರನ್ನು ವಿವಿಯ ಫ್ಯಾಕಲ್ಟಿ ಆಫ್ ಮೆಡಿಸಿನ್ ಡಾ. ತೇಜಸ್ವಿನಿ ವಲ್ಲಭ ಮತ್ತು ಉಪಪ್ರಾಚಾರ್ಯ ಡಾ. ಎಂ. ಬಿ. ಪಾಟೀಲ ಸನ್ಮಾನಿಸಿದರು.
ಈ ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರಾದ ಡಾ. ಗಿರೀಶ ಕುಲ್ಲೊಳ್ಳಿ, ಡಾ. ವಿಕ್ರಂ ಸಿಂದಗಿಕರ, ಡಾ. ಪ್ರದೀಪ ಜಾಜು, ಡಾ. ಮಂಜುನಾಥ ಸಾವಂತ, ಡಾ. ಅನಿಕೇತನ ವಲ್ಲಭ, ಶಸ್ತ್ರಚಿಕಿತ್ಸೆ ಮತ್ತು ಸ್ತ್ರೀರೋಗ ವಿಭಾಗಗಳ ಬೋಧಕ ಸಿಬ್ಬಂದಿ, ವೈದ್ಯಕೀಯ ಸ್ನಾತಕೋತ್ತರ ವಿದ್ಯಾರ್ಥಿಗಳು ಮತ್ತು ಕಿರಿಯ ವೈದ್ಯರು ಭಾಗವಹಿಸಿದ್ದರು.
ಶಸ್ತ್ರಚಿಕಿತ್ಸೆ ವಿಭಾಗದ ಪ್ರಾಧ್ಯಾಪಕ ಡಾ. ರಮಾಕಾಂತ ಬಳೂರಕರ ಮತ್ತು ಸ್ತ್ರೀರೋಗ ವಿಭಾಗದ ಪ್ರಾಧ್ಯಾಪಕಿ ಡಾ. ರಾಜಶ್ರೀ ಯಲಿವಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಹಾಯಕ ಪ್ರಾಧ್ಯಾಪಕ ಡಾ. ಸಂಜೀವ ರಾಠೋಡ ಪರಿಚಯಿಸಿ, ಸ್ವಾಗತಿಸಿದರು. ಡಾ. ವೈಷ್ಣವಿ ನಿರೂಪಿಸಿದರು. ಡಾ. ಶೈಲೇಶ ಕನ್ನೂರ ವಂದಿಸಿದರು.
Subscribe to Updates
Get the latest creative news from FooBar about art, design and business.
ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಕ್ಷೇತ್ರದಲ್ಲಿ ನಿರಂತರ ಅವಿಷ್ಕಾರ :ಡಾ.ದೀಕ್ಷಿತ
Related Posts
Add A Comment

