ವಿಜಯಪುರ: ಕರ್ನಾಟಕ ಗಡಿ ಪ್ರದೇಶ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಸೋಮಣ್ಣ ಬೇವಿನಮರದ ಹಾಗೂ ಕಾರ್ಯದರ್ಶಿ ಪ್ರಕಾಶ ಮತ್ತೀಹಳ್ಳಿ ಅವರು ಆ.೪ರಿಂದ ೬ರವರೆಗೆ ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಆ.೪ರಂದು ರಾತ್ರಿ ೭ ಗಂಟೆಗೆ ವಿಜಯಪುರಕ್ಕೆ ಆಗಮಿಸಿ, ವಿಜಯಪುರದಿಂದ ಗುಡ್ಡಾಪುರಕ್ಕೆ ಪ್ರಯಾಣ ಬೆಳೆಸಿ, ಗುಡ್ಡಾಪುರದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಆ.೫ ರಂದು ಬೆಳಿಗ್ಗೆ ೧೧ ಗಂಟೆಗೆ ಮಹಾರಾಷ್ಟ್ರ ರಾಜ್ಯದ ಜತ್ತ ತಾಲೂಕಿನ ಗುಡ್ಡಾಪುರದಲ್ಲಿ ಶ್ರೀ ದಾನಮ್ಮ ದೇವಿ ದೇವಸ್ಥಾನದ ಸಭಾಂಗಣದಲ್ಲಿ ವಿವಿಧ ಕನ್ನಡಪರ ಸಂಘ-ಸಂಸ್ಥೆಗಳೊಂದಿಗೆ ಕರ್ನಾಟಕ ಸುವರ್ಣ-ಸಂಭ್ರಮ-೫೦ರ ಆಚರಣೆ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ ೪ ಗಂಟೆಗೆ ಉಮದಿ, ಮೊರಬಗಿ & ಕರಜಗಿಯಲ್ಲಿ ಪ್ರಾಧಿಕಾರದ ಅನುದಾನದಲ್ಲಿ ಕೈಗೊಂಡಿರುವ ಕಾಮಗಾರಿಗಳ ಪರಿವೀಕ್ಷಣೆ ನಡೆಸಿ, ರಾತ್ರಿ ೮-೩೦ಕ್ಕೆ ಗುಡ್ಡಾಪುರದಿಂದ ಹೊರಟು ೯-೪೫ಕ್ಕೆ ವಿಜಯಪುರಕ್ಕೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ.
ಆ.೬ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿ, ೧೨ ಗಂಟೆಗೆ ವಿಜಯಪುರದಿಂದ ಬೆಂಗಳೂರಿಗೆ ಮರು ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
ಗಡಿ ಪ್ರದೇಶ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರ ಜಿಲ್ಲಾ ಪ್ರವಾಸ
Related Posts
Add A Comment
